ಮಂಗಳೂರು: ಆದಾಯ ಮೀರಿ ಆಸ್ತಿ ಗಳಿಸಿರುವ ಆರೋಪದಡಿ ಮೆಸ್ಕಾಂ ಇಂಜಿನಿಯರ್ ಶಾಂತಕುಮಾರ್ ಅವರ ಮನೆ ಹಾಗೂ ಕಚೇರಿ ಮೇಲೆ ಬುಧವಾರ ಬೆಳಿಗ್ಗೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಕಳೆದ ಐದಾರು ವರ್ಷಗಳಿಂದ ಅತ್ತಾವರ ವಿಭಾಗದ ಮೆಸ್ಕಾಂ ಇಇ ಆಗಿ ಕಾರ್ಯನಿರ್ವಹಿಸುತ್ತಿರುವ ಶಾಂತಕುಮಾರ್ ಅವರ ಬೆಂಗಳೂರಿನ ನಿವಾಸದ ಮೇಲೂ ದಾಳಿ ನಡೆಸಿರುವ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ.