Home Uncategorized ಮಂಗಳೂರು ವಿವಿಯಲ್ಲಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆ

ಮಂಗಳೂರು ವಿವಿಯಲ್ಲಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆ

16
0

ಮಂಗಳೂರು: ಕರ್ನಾಟಕ ಜ್ಞಾನ ವಿಜ್ಞಾನ ಸಮಿತಿ, ದಕ್ಷಿಣ ಕನ್ನಡ -ಕೊಡಗು ಗ್ರಂಥ ಪಾಲಕರ ಸಂಘ ಮತ್ತು ಕರ್ನಾಟಕ ರಾಜ್ಯ ವಿಜ್ಞಾನ ,ತಂತ್ರಜ್ಞಾನ ಮಂಡಳಿ ಇದರ ಸಂಯುಕ್ತ ಆಶ್ರಯದಲ್ಲಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆಯ ಉದ್ಘಾಟನಾ ಸಮಾರಂಭವು ಮಂಗಳೂರಿನ ಯುನಿವರ್ಸಿಟಿ ಕಾಲೇಜಿನಲ್ಲಿ ಬುಧವಾರ ನಡೆಯಿತು.

ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಕರ್ನಾಟ ಜ್ಞಾನ ವಿಜ್ಞಾನ ಸಂಘದ ಅಧ್ಯಕ್ಷ ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಪ್ರಖ್ಯಾತ ಮನೋವೈದ್ಯ ಡಾ.ಸಿ.ಆರ್ ಚಂದ್ರಶೇಖರ್ ಅವರು, ಜೀವನದಲ್ಲಿ ಅಂಧ ಶ್ರದ್ಧೆಗಳನ್ನು ತ್ಯಜಿಸಿ ವೈಜ್ಞಾನಿಕ ಮನೋಧರ್ಮವನ್ನು ಬೆಳೆಸಿಕೊಳ್ಳಬೇಕಾಗಿ ಕರೆ ನೀಡಿದರು. 

ಕಾರ್ಯಕ್ರಮದ ಅಧ್ಯಕ್ಷ ಸ್ಥಾನವನ್ನು ಕಾಲೇಜಿನ ಪ್ರಿನ್ಸಿಪಾಲ್ ಡಾ.ಅನುಸೂಯ ರೈ ವಹಿಸಿದ್ದರು. ಡಾ.ಜಗನ್ನಾಥ್ ಎನ್, (ಸಂಯೋಜಕರು ವಿಜ್ಞಾನ ಸಂಘ,ಯುನಿವರ್ಸಿಟಿ ಕಾಲೇಜು) ಅವರು ಸ್ವಾಗತಿಸಿದರು.

ಕಾರ್ಯಕ್ರಮದಲ್ಲಿ ಡಾ.ವಾಸಪ್ಪ ಗೌಡ (ಅಧ್ಯಕ್ಷರು ದ.ಕ ಮತ್ತು ಕೊಡಗು ಗ್ರಂಥ ಪಾಲಕರ ಸಂಘ) ಅವರು ಅಥಿತಿಗಳ ಪರಿಚಯ ಮಾಡಿದರು. ಡಾ.ಸಿ.ಆರ್ ಚಂದ್ರಶೇಖರ್ ಅವರನ್ನು ಸನ್ಮಾನಿಸಲಾಯಿತು.

ವೇದಿಕೆಯಲ್ಲಿ ಯುನಿವರ್ಸಿಟಿ ಕಾಲೇಜಿನ ಆಂತರಿಕ ಗುಣಮಟ್ಟ ಕೋಶದ ಸಂಯೋಜಕ‌ ಡಾ.ಸಿದ್ಧರಾಜು, ಕಾಲೇಜಿನ ಲೈಬ್ರೆರಿಯನ್ ಡಾ.ವನಜಾ ,ಕೆ.ಜೆ.ವಿ.ಎಸ್ ದ.ಕ ಅಧ್ಯಕ್ಷರಾದ ನಂದಾ ಪಾಯಸ್ ಉಪಸ್ಥಿತರಿದ್ದರು.

ಕರ್ನಾಟಕ ಜ್ಞಾನವಿಜ್ಞಾನ ವೇದಿಕೆಯ ಸಂಚಾಲಕರಾದ ಮುಹಮ್ಮದ್ ಬ್ಯಾರಿ ಬೊಳ್ಳಾಯಿ ಧನ್ಯವಾದ ಸಮರ್ಪಣೆ ಮಾಡಿದರು.

LEAVE A REPLY

Please enter your comment!
Please enter your name here