Home Uncategorized ಮಂಡ್ಯ ಘಟನೆ ರಾಜಕೀಯ ದುರುದ್ದೇಶದಿಂದ ಕೂಡಿದೆ: ಸಿದ್ದರಾಮಯ್ಯ

ಮಂಡ್ಯ ಘಟನೆ ರಾಜಕೀಯ ದುರುದ್ದೇಶದಿಂದ ಕೂಡಿದೆ: ಸಿದ್ದರಾಮಯ್ಯ

26
0

ಬೆಂಗಳೂರು: ಕೆರಗೋಡು ಧ್ವಜ ಸ್ಥಂಭದಲ್ಲಿ ರಾಷ್ಟ್ರಧ್ವಜ , ಕನ್ನಡ ಧ್ವಜ ಹಾರಿಸಲು ಅನುಮತಿ ನೀಡಲಾಗಿತ್ತು. ಯಾವುದೇ ಧರ್ಮ ಜಾತಿ, ಪಕ್ಷದ ಧ್ವಜವನ್ನು ಹಾರಿಸುವುದಿಲ್ಲ ಎಂದು ಮುಚ್ಚಳಿಕೆ ಪತ್ರ ನೀಡಿದ ನಂತರ ಅದರ ವಿರುದ್ಧವಾಗಿ ನಡೆದುಕೊಂಡಿದ್ದಾರೆ. ಇದು ರಾಜಕೀಯ ಲಾಭ ಪಡೆಯುವ ದುರುದ್ದೇಶ ಹೊಂದಿದ್ದು, ಸಮಾಜದಲ್ಲಿ ಅಶಾಂತಿಯನ್ನು ಉಂಟು ಮಾಡುವ ಪ್ರಯತ್ನ ಮಾಡಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಅವರು ಇಂದು ವಿಧಾನಸೌಧದಲ್ಲಿ ಮಹಾತ್ಮಾಗಾಂಧೀಜಿಯವರ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು.

ಮಹಾತ್ಮಾ ಗಾಂಧೀಜಿಯವರು ಶಾಂತಿ ಸಂದೇಶವನ್ನು ಸಾರಿದರು. ಆದರೆ ಇತ್ತೀಚೆಗೆ ಸಮಾಜದಲ್ಲಿ ಶಾಂತಿಯನ್ನು ಕದಡುವ ಪ್ರಸಂಗಗಳು ನಡೆಯುತ್ತಿವೆಯೇ ಎಂಬ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿ, ʼಗೋಡ್ಸೆಯ ಅನುಯಾಯಿಗಳು ಸಮಾಜದಲ್ಲಿ ಶಾಂತಿಯನ್ನು ಕದಡುತ್ತಿದ್ದಾರೆ. ಪರಸ್ಪರ ಪ್ರೀತಿ ವಿಶ್ವಾಸ ಹಾಗೂ ಶಾಂತಿ ಸಮಾಜದಲ್ಲಿ ನೆಲೆಸಬೇಕು. ಮನುಷ್ಯ ಮನುಷ್ಯರ ನಡುವೆ ವೈಷಮ್ಯ ಹೆಚ್ಚಿಸುವ ಕೆಲಸವಾಗಬಾರದುʼ ಎಂದರು.

ಫೆಬ್ರವರಿ 8 ರಂದು ಮಂಡ್ಯ ಬಂದ್ ಮಾಡಲು  ಕುಮಾರಸ್ವಾಮಿಯವರು ಕರೆ ನೀಡಿರುವುದಕ್ಕೆ ಪ್ರತಿಕ್ರಿಯೆ ನೀಡಿ, ಬಂದ್ ಮಾಡುವ ಅಥವಾ ಮಾಡದಿರುವ ಬಗ್ಗೆ ಜನ ತೀರ್ಮಾನ ಮಾಡುತ್ತಾರೆ. ಇವರೇ ಮುಚ್ಚಳಿಕೆ ಪತ್ರ ನೀಡಿ, ನಂತರ ಕಾರ್ಯಕ್ರಮದಲ್ಲಿ ಕೇಸರಿ ಧ್ವಜವನ್ನು ಹಾರಿಸಿ, ತಮ್ಮ ಮುಚ್ಚಳಿಕೆಯನ್ನು ತಾವೇ ಉಲ್ಲಂಘನೆ ಮಾಡಿರುವುದು ತಪ್ಪು ಎಂದು ಹೇಳಿದರು.

LEAVE A REPLY

Please enter your comment!
Please enter your name here