ಮಗಳ ಮದುವೆ ಖಚಿತ ಪಡಿಸಿದ ಆಮೀರ್ ಖಾನ್: ಯಾವಾಗ ಅಂತೀರಾ ಇಲ್ಲಿದೆ!
ಬಾಲಿವುಡ್ (Bollywood) ಖ್ಯಾತ ನಟ ಆಮೀರ್ ಖಾನ್ (Aamir Khan) ಪುತ್ರಿ ಇರಾ ಖಾನ್ (Ira Khan) ಮದುವೆ ಅಕ್ಟೋಬರ್ ತಿಂಗಳಲ್ಲಿ ನಡೆಯಲಿದೆ ಎಂದು ಹೇಳಲಾಗಿತ್ತು. ಕುಟುಂಬದಿಂದ ಅಧಿಕೃತ ಮಾಹಿತಿ ಇರದೇ ಇದ್ದರೂ, ಅಕ್ಟೋಬರ್ 3ರಂದು ಇರಾ ಮತ್ತು ನೂಪುರ್ ಶಿಖಾರೆ ರಿಜಿಸ್ಟರ್ ಮದುವೆ (Marriage) ಆಗಲಿದ್ದಾರೆ ಎಂದು ಹೇಳಲಾಗಿತ್ತು. ಆದರೆ, ಇದೀಗ ಅಧಿಕೃತ ಮಾಹಿತಿ ಹೊರ ಬಿದ್ದಿದ್ದು 2024ರಲ್ಲಿ ಈ ಜೋಡಿ ಮದುವೆಯಾಗಲಿದೆ. ಜನವರಿ ಅಥವಾ ಫೆಬ್ರವರಿಯಲ್ಲಿ ಹೊಸ ಬದುಕಿಗೆ ಕಾಲಿಡಲಿದ್ದಾರೆ ಎಂದು ಸ್ವತಃ ಆಮೀರ್ ಖಾನ್ ಹೇಳಿಕೊಂಡಿದ್ದಾರೆ.
ಕಳೆದ ವರ್ಷ ನವೆಂಬರ್ ನಲ್ಲಿ ನಿಶ್ಚಿತಾರ್ಥ (Engaged) ಮಾಡಿಕೊಂಡು, ತನ್ನ ಪ್ರಿಯಕರಿಗೆ ಉಂಗುರ ತೊಡಿಸಿ, ಮುತ್ತಿಡುವ ಮೂಲಕ ಎಂಗೇಜ್ಡ್ ಆಗಿರುವುದಾಗಿ ಅವರು ಘೋಷಣೆ ಮಾಡಿತ್ತು ಈ ಜೋಡಿ. ಇದೀಗ ಇರಾ ಹೊಸ ಜೀವನಕ್ಕೆ ಕಾಲಿಡಲು ಸಜ್ಜಾಗಿದ್ದಾರೆ. ಹಾಗಂತ ರಿಜಿಸ್ಟರ್ ಮದುವೆಯಷ್ಟೇ ಆಗುವುದಿಲ್ಲವಂತೆ. ರಿಜಿಸ್ಟರ್ ಮದುವೆಯ ನಂತರ ಉದಯಪುರದಲ್ಲಿ (Udaipur) ಸಂಪ್ರದಾಯಿಕವಾಗಿ ಈ ಜೋಡಿ ಸಪ್ತಪದಿ ತುಳಿಯಲಿದೆ. ಒಟ್ಟು ಮೂರು ದಿನಗಳ ಕಾಲ ಈ ಮದುವೆ ನಡೆಯಲಿದೆ ಎಂದು ಅವರು ಆಪ್ತರು ಮಾಹಿತಿ ನೀಡಿದ್ದಾರೆ. ಮದುವೆಗೆ ಖ್ಯಾತ ತಾರೆಗಳು ಆಗಮಿಸಲಿದ್ದು, ಆ ಪಟ್ಟಿ ಕೂಡ ಸಿದ್ಧವಾಗಿದೆಯಂತೆ.
ಇರಾ ಖಾನ್ ಮತ್ತು ನೂಪುರ್ ಶಿಖಾರೆ ಹಲವು ವರ್ಷಗಳಿಂದ ಪ್ರೀತಿಸುತ್ತಿದ್ದರು. ಆ ಪ್ರೀತಿ ಇದೀಗ ಮತ್ತೊಂದು ಹಂತ ಪಡೆದುಕೊಂಡಿದೆ. ಪ್ರೀತಿಸುತ್ತಿರುವಾಗಲೇ ಒಟ್ಟಿಗೆ ವಾಸವಿದ್ದ ಈ ಜೋಡಿ ಇದೀಗ ಅಧಿಕೃತವಾಗಿ ಸತಿ ಪತಿಯಾಗಲು ಹೊರಟಿದೆ.
The post ಮಗಳ ಮದುವೆ ಖಚಿತ ಪಡಿಸಿದ ಆಮೀರ್ ಖಾನ್: ಯಾವಾಗ ಅಂತೀರಾ ಇಲ್ಲಿದೆ! appeared first on Ain Live News.