ಮಡಿಕೇರಿ ಜಿಲ್ಲೆಯಾದ್ಯಂತ ಕೂಡಲೇ ಬೆಳೆ ಹಾನಿ ಸಮೀಕ್ಷೆ ಆರಂಭಿಸುವಂತೆ ಕೊಡಗು ಜಿಲ್ಲಾ ಕರ್ನಾಟಕ ರಾಜ್ಯ ರೈತ ಸಂಘ ಕಾಫಿ ಮಂಡಳಿ ಹಾಗೂ ಜಿಲ್ಲಾಡಳಿತವನ್ನು ಒತ್ತಾಯಿಸಿದೆ. ಮಡಿಕೇರಿ: ಮಡಿಕೇರಿ ಜಿಲ್ಲೆಯಾದ್ಯಂತ ಕೂಡಲೇ ಬೆಳೆ ಹಾನಿ ಸಮೀಕ್ಷೆ ಆರಂಭಿಸುವಂತೆ ಕೊಡಗು ಜಿಲ್ಲಾ ಕರ್ನಾಟಕ ರಾಜ್ಯ ರೈತ ಸಂಘ ಕಾಫಿ ಮಂಡಳಿ ಹಾಗೂ ಜಿಲ್ಲಾಡಳಿತವನ್ನು ಒತ್ತಾಯಿಸಿದೆ.
ಬೆಳೆ ಹಾನಿ ಸಮೀಕ್ಷೆ ನಡೆಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ರೈತ ಸಂಘ ಮನವಿ ಪತ್ರ ಸಲ್ಲಿಸಿದ್ದು, ಶೀಘ್ರವೇ ಸರ್ವೆ ಆದೇಶ ಬರುವ ಸಾಧ್ಯತೆ ಇದೆ.
ಇದನ್ನು ಓದಿ: ಕರ್ನಾಟಕ, ಆಂಧ್ರದಲ್ಲಿ ಮಳೆಯಿಂದ ಬೆಳೆಗೆ ಹಾನಿ; ತಮಿಳುನಾಡಿನಲ್ಲಿ ಟೊಮೆಟೊ ಬೆಲೆ ಕೆಜಿಗೆ 200 ರೂ.!
ಕಳೆದ ವರ್ಷಕ್ಕೆ ಹೋಲಿಸಿದರೆ ಕೊಡಗು ಜಿಲ್ಲೆಯಲ್ಲಿ ಈ ಬಾರಿ ಮಳೆ ಕೊರತೆಯಾಗಿದೆ. ಆದಾಗ್ಯೂ, ಕರ್ನಾಟಕ ರಾಜ್ಯ ರೈತ ಸಂಘ ನಡೆಸಿದ ಪ್ರಾಥಮಿಕ ಬೆಳೆ ಹಾನಿ ಸಮೀಕ್ಷೆಯು ಶೇ. 50ಕ್ಕಿಂತ ಹೆಚ್ಚು ಬೆಳೆ ಹಾನಿಯಾಗಿರುವುದನ್ನು ಸೂಚಿಸುತ್ತದೆ. ಎರಡು ವಾರಗಳಲ್ಲಿ ಸುರಿದ ಭಾರೀ ಮಳೆ ಮತ್ತು ನಿರಂತರ ಮಳೆಯಿಂದ ಕಾಫಿ ಎಸ್ಟೇಟ್‌ಗಳಲ್ಲಿ ಅಪಾರ ಬೆಳೆ ಹಾನಿಯಾಗಿದೆ.
”ರೈತ ಸಂಘವು ಪ್ರತಿ ಹೋಬಳಿ ಮತ್ತು ಜಿಲ್ಲೆಯ ಎಲ್ಲಾ ಐದು ತಾಲೂಕುಗಳಲ್ಲಿ ರೈತರನ್ನು ಹೊಂದಿದೆ. ಮಳೆಯಿಂದ ಆಗಿರುವ ಬೆಳೆ ಹಾನಿ ಕುರಿತು ರೈತರಿಂದ ವರದಿ ಕೇಳಿದ್ದು, ತಾಲೂಕಿನಾದ್ಯಂತ 130ಕ್ಕೂ ಹೆಚ್ಚು ಬೆಳೆಗಾರರಿಂದ ವರದಿ ಪಡೆದಿದ್ದೇವೆ ಎಂದು ಕರ್ನಾಟಕ ರಾಜ್ಯ ರೈತ ಸಂಘದ ಜಿಲ್ಲಾಧ್ಯಕ್ಷ ಕೆ.ಮನು ಸೋಮಯ್ಯ ಅವರು ಹೇಳಿದ್ದಾರೆ.
ಬೆಳೆಗಾರರು ಪ್ರತಿ ಹೋಬಳಿಯಿಂದ ಬೆಳೆ ಹಾನಿಯ ಫೋಟೋಗಳನ್ನು ಕಳುಹಿಸಿದ್ದಾರೆ ಮತ್ತು ಪ್ರಾಥಮಿಕ ಸಮೀಕ್ಷೆಯಲ್ಲಿ ಶೇ. 50 ರಷ್ಟು ಬೆಳೆ ಹಾನಿಯಾಗಿದೆ ಎಂದು ಅವರು ವಿವರಿಸಿದ್ದಾರೆ.