ಚೊಚ್ಚಲ ನಿರ್ದೇಶನದಲ್ಲೇ ಅಂಬರೀಷ್ (Ambareesh), ಸುದೀಪ್ ಅವರಂತಹ ದೊಡ್ಡ ಕಲಾವಿದರಿಗೆ ಆಕ್ಷನ್ ಕಟ್ ಹೇಳಿದ್ದ ಗುರುದತ್ ಅವರ ಮುಂದಿನ ಸಿನಿಮಾ ಯಾವುದು ಎನ್ನುವ ಕುತೂಹಲ ಚಿತ್ರಾಭಿಮಾನಿಗಳಲ್ಲಿತ್ತು. ಇದೀಗ ಆ ಕುತೂಹಲಕ್ಕೆ ತೆರೆಬೀಳುವ ಸಮಯ ಬಂದಿದೆ. ಗ್ಯಾಪ್‌ನ ಬಳಿಕ ಗುರು ಮತ್ತೆ ನಿರ್ದೇಶನದ ಕ್ಯಾಪ್ ಧರಿಸುತ್ತಿದ್ದಾರೆ. ಸುಮಾರು 5 ವರ್ಷಗಳ ಬಳಿಕ ಗುರುದತ್ ಗಾಣಿಗ ವಿಭಿನ್ನ ಸಿನಿಮಾ ಮೂಲಕ ಅಭಿಮಾನಿಗಳ ಮುಂದೆ ಬರಲು ಸಜ್ಜಾಗಿದ್ದಾರೆ. ಈ ಬಾರಿ ಗುರು ಯಾವ ಸ್ಟಾರ್‌ಗೆ ಆಕ್ಷನ್ ಕಟ್ ಹೇಳುತ್ತಾರೆ ಎನ್ನುವ ಕೌತುಕ ಹೆಚ್ಚಾಗಿದೆ. ಮೂಲಗಳ ಪ್ರಕಾರ ಗುರು ಸ್ಟಾರ್ ನಟನಿಗೆ ಆಕ್ಷನ್ ಕಟ್ ಹೇಳಲು ಸಜ್ಜಾಗಿದ್ದಾರೆ ಎನ್ನಲಾಗಿದೆ.
ಈಗಾಗಲೇ ಹೊಸ ಸಿನಿಮಾದ ಎಲ್ಲಾ ತಯಾರಿ ನಡೆದಿದ್ದು ಸದ್ಯದಲ್ಲೇ ಟೈಟಲ್ ಮತ್ತು ಹೀರೋ ಅನೌನ್ಸ್ ಮಾಡಲು ಪ್ಲಾನ್ ಮಾಡಿದ್ದಾರೆ ನಿರ್ದೇಶಕ ಗುರು. ವಿಭಿನ್ನ ಕಾನ್ಸೆಪ್ಟ್‌ನ ಸಿನಿಮಾ ಮೂಲಕ ಗುರು ಅಭಿಮಾನಿಗಳ ಮುಂದೆ ಬರ್ತಿದ್ದಾರೆ. ಗುರು ಅವರ 2ನೇ ಸಿನಿಮಾ ಕೂಡ ದೊಡ್ಡ ಮಟ್ಟದಲ್ಲಿ ಮೂಡಿ ಬರಲಿದೆ ಎನ್ನುವ ಮಾಹಿತಿ ಲಭ್ಯವಾಗಿದೆ. ಅಂಬಿ ಸಿನಿಮಾ ಬಳಿಕ ಗುರು ಎಲ್ಲೋಗಿದ್ರೂ, ಏನ್ಮಾಡುತ್ತಿದ್ದರು ಎನ್ನುವ ಪ್ರಶ್ನೆ ಕೂಡ ಅನೇಕರಲ್ಲಿತ್ತು. ಆದರೆ ಇತ್ತೀಚೆಗಷ್ಟೆ ಎಡಗೈಯೇ ಅಪಘಾತಕ್ಕೆ ಕಾರಣ ಸಿನಿಮಾದ ನಿರ್ಮಾಪಕರಾಗಿ ಸರ್ಪ್ರೈಸ್ ಎಂಟ್ರಿ ಕೊಟ್ಟರು.
The post ಮತ್ತೆ ನಿರ್ದೇಶನಕ್ಕೆ ಮುಂದಾದ ‘ಅಂಬಿ ನಿಂಗೆ ವಯಸ್ಸಾಯ್ತೋ’ ಚಿತ್ರದ ನಿರ್ದೇಶಕ ಗುರುದತ್ appeared first on Ain Live News.