ಬೆಂಗಳೂರು:
ಇದೇ ತಿಂಗಳ ಮೂರರಂದು ನಡೆದ ಉಪ ಚುನಾವಣೆಯ ಮತ ಎಣಿಕೆ ಹಿನ್ನೆಲೆಯಲ್ಲಿ ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ನ.10ರಂದು ಬೆಳಿಗ್ಗೆ 6 ಗಂಟೆಯಿಂದ ರಾತ್ರಿ 12ವರೆಗೆ 144 ಸೆಕ್ಷನ್ ನಿಷೇಧಾಜ್ಞೆ ಜಾರಿಗೊಳಿಸಿ ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಆದೇಶ ಹೊರಡಿಸಿದ್ದಾರೆ .
ನ.3ರಂದು ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಮತದಾನ ನಡೆದಿದ್ದು, ನ.10ರಂದು ರಾಜರಾಜೇಶ್ವರಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಹಲಗೇವಡೇರಹಳ್ಳಿರುವ ಜ್ಞಾನಾಕ್ಷಿ ವಿದ್ಯಾನಿಕೇತನ ಶಾಲೆಯಲ್ಲಿ ಮತ ಎಣಿಕೆ ಪ್ರಕ್ರಿಯೆ ನಡೆಯಲಿರುವ ಹಿನ್ನೆಲೆಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ ಎಂದು ಆಯುಕ್ತರು ಆದೇಶದಲ್ಲಿ ತಿಳಿಸಿದ್ದಾರೆ.
ಆದ್ದರಿಂದ ನ.10ರಂದು ರಾಜರಾಜೇಶ್ವರಿ ನಗರ ವಿಧಾನ ಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ 5ಕ್ಕಿಂತ ಹೆಚ್ಚು ಜನ ಸೇರುವುದು, ಮಾರಕಾಸ್ತ್ರ, ಸ್ಫೋಟಕ ವಸ್ತು ಕೊಂಡ್ಯೋಯುವುದು ನಿಷೇಧಿಸಲಾಗಿದೆ ಎಂದು ಆಯುಕ್ತರು ತಿಳಿಸಿದ್ದಾರೆ.