ಶಂಕರನಾರಾಯಣ: ಹೆಂಗವಳ್ಳಿ ಗ್ರಾಮದ ಮರೂರು ಎಂಬಲ್ಲಿ ಅಡಿಕೆ ಮರದಿಂದ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದ ವ್ಯಕ್ತಿಯೊಬ್ಬರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಬಗ್ಗೆ ವರದಿಯಾಗಿದೆ.
ಮೃತರನ್ನು ಹೆಂಗವಳ್ಳಿ ಗ್ರಾಮದ ಕೃಷ್ಣ(58) ಎಂದು ಗುರುತಿಸಲಾಗಿದೆ. ಇವರು ಫೆ.28ರಂದು ತಮ್ಮ ತೋಟದಲ್ಲಿರುವ ಮಾವಿನ ಮರದಿಂದ ಕಾಯಿ ಕೊಯ್ಯುತ್ತಿದ್ದ ವೇಳೆ ಆಕಸ್ಮಿಕವಾಗಿ ಆಯತಪ್ಪಿ ಕೆಳಗೆ ಬಿದ್ದರೆನ್ನಲಾಗಿದೆ. ಇದರಿಂದ ಗಂಭೀರ ವಾಗಿ ಗಾಯಗೊಂಡು ಮಂಗಳೂರು ವೆನ್ಲಾಕ್ ಆಸ್ಪತ್ರೆಯಲ್ಲಿ ದಾಖಲಾಗಿದ್ದ ಇವರು ಮಾ.17ರಂದು ಬೆಳಗ್ಗೆ ಚಿಕಿತ್ಸೆ ಫಲಕಾರಿಯಾಗದೆ ಮೃತ ಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ಈ ಬಗ್ಗೆ ಶಂಕರನಾರಾಯಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.