ಶಿವಮೊಗ್ಗ: ಬಿಜೆಪಿಯ ಹಾಲಿ ಸಂಸದ ಬಿ.ವೈ. ರಾಘವೇಂದ್ರ ಅವರು ಶಿವಮೊಗ್ಗ ಕ್ಷೇತ್ರದ ಸಂಸದರಾಗಿ ಸತತ 4ನೇ ಬಾರಿಗೆ ಪುನರಾಯ್ಕೆಯಾಗಿದ್ದಾರೆ.
ಮಾಜಿ ಮುಖ್ಯಮಂತ್ರಿ ಬಂಗಾರಪ್ಪನವರ ಪುತ್ರಿ ಗೀತಾ ಶಿವರಾಜ್ ಕುಮಾರ್ ಹಾಗೂ ಮಾಜಿ ಉಪಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ ನವರ ಪೈಪೋಟಿಯ ಪ್ರಚಾರದ ನಡುವೆಯೂ 2,43,024 ಭಾರೀ ಮತಗಳ ಅಂತರದಿಂದ ಜಯಭೇರಿ ಬಾರಿಸಿರುವ ಬಿ.ವೈ ರಾಘವೇಂದ್ರ ಸೋಲಿಲ್ಲದ ಸರದಾರರಾಗಿ ನಾಲ್ಕನೇ ಬಾರಿ ಸಂಸತ್ ಪ್ರವೇಶಿಸುತ್ತಿದ್ದಾರೆ.
ಮಾಜಿ ಮುಖ್ಯಮಂತ್ರಿ ಎಸ್.ಬಂಗಾರಪ್ಪನವರ ಪುತ್ರಿ, ನಟ ಶಿವರಾಜ್‌ಕುಮಾರ್ ಪತ್ನಿ ಹಾಗೂ ಸಚಿವ ಮಧು ಬಂಗಾರಪ್ಪ ಅವರ ಸಹೋದರಿ ಗೀತಾ ಶಿವರಾಜ್ ಕುಮಾರ್ ಈ ಕ್ಷೇತ್ರದಲ್ಲಿ ಮತ್ತೊಮ್ಮೆ ಸೋಲನ್ನು ಅನುಭವಿಸಿದ್ದಾರೆ.
ಬಿಜೆಪಿಯಿಂದ ಸಿಡಿದೆದ್ದು ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಮಾಜಿ ಉಪಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ ಅವರು ಶೋಚನೀಯ ಸೋಲು ಅನುಭವಿಸಿದ್ದಾರೆ. ತಮ್ಮ ಮಗನಿಗೆ ಹಾವೇರಿ ಟಿಕೆಟ್ ಸಿಗದಿದ್ದರಿಂದ ಪಕ್ಷದ ಮುಖಂಡರ ವಿರುದ್ಧ ಆಕ್ರೋಶಗೊಂಡು ತಾವೇ ಶಿವಮೊಗ್ಗ ಕ್ಷೇತ್ರದಿಂದ ಲೋಕಸಭೆಗೆ ಸ್ಪರ್ಧಿಸಿ ಬಿಜೆಪಿಗೆ ಮಗ್ಗಲ ಮುಳ್ಳಾಗಿ ಈ ಚುನಾವಣೆಯಲ್ಲಿ ಕಾಡಿದರೂ ಬಿಜೆಪಿಗೆ ಹೆಚ್ಚಿನ ನಷ್ಟ ಆಗಲಿಲ್ಲ.