Home Uncategorized ಮಲ್ಪೆ: ಗುಲಾಬಿ ಆಂದೋಲನ, ಜಾಥಾ

ಮಲ್ಪೆ: ಗುಲಾಬಿ ಆಂದೋಲನ, ಜಾಥಾ

32
0

ಉಡುಪಿ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಛೇರಿ, ಜಿಲ್ಲಾ ಸರ್ವೇಕ್ಷಣ ಘಟಕ, ಎನ್‌ಟಿಸಿಪಿ ವಿಭಾಗ ಉಡುಪಿ, ತಾಲೂಕು ಆರೋಗ್ಯಾಧಿಕಾರಿಗಳ ಕಛೇರಿ ಉಡುಪಿ ತಾಲೂಕು, ರೋಟರಿ ಕ್ಲಬ್ ಕಲ್ಯಾಣಪುರ, ಸರಕಾರಿ ಪದಪೂರ್ವ ಕಾಲೇಜು ಪ್ರೌಢಶಾಲಾ ವಿಭಾಗ ಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರ ಮಲ್ಪೆ ಇವರ ಸಂಯುಕ್ತ ಆಶ್ರಯದಲ್ಲಿ ರಾಷ್ಟ್ರೀಯ ತಂಬಾಕು ನಿಯಂತ್ರಣ ಕಾರ್ಯಕ್ರಮದ ಅಂಗವಾಗಿ ಗುಲಾಬಿ ಆಂದೋಲನ, ಜಾಥಾ ಹಾಗೂ ಮಾಹಿತಿ ಕಾರ್ಯಗಾರ ಇಂದು ಮಲ್ಪೆಯ ಸರಕಾರಿ ಪದವಿ ಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದಲ್ಲಿ ನಡೆಯಿತು.

ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷ ಜಗದೀಶ್ ಸಾಲ್ಯಾನ್ ಕಾರ್ಯಕ್ರಮ ಉದ್ಘಾಟಿಸಿದರು.ತಾಲೂಕು ಆರೋಗ್ಯಾಧಿಕಾರಿ ಡಾ.ವಾಸುದೇವ ಉಪಾಧ್ಯಾಯ ಪ್ರಾಸ್ತಾವಿಕವಾಗಿ ಮಾತನಾಡಿದರು.

ಕಾರ್ಯಕ್ರಮದಲ್ಲಿ ಡಿಡಿಪಿಐ ಕೆ.ಗಣಪತಿ, ಆರೋಗ್ಯ ನಿರೀಕ್ಷಣಾಧಿಕಾರಿ ಮಂಜುನಾಥ್, ತಂಬಾಕು ನಿಯಂತ್ರಣ ಘಟಕದ ಕಾರ್ಯಕ್ರಮ ಸಂಯೋಜಕಿ ಮಂಜುಳಾ ಶೆಟ್ಟಿ, ಸಾಮಾಜಿಕ ಕಾರ್ಯಕರ್ತೆ ಶೈಲಾ ಶ್ಯಾಮನೂರು, ಪ್ರಾಧ್ಯಾಪಕ ವೃಂದ, ಪ್ರಾ.ಆ.ಕೇಂದ್ರ ಮಲ್ಪೆಯ ಸಿಬ್ಬಂದಿಗಳು, ಆಶಾ ಕಾರ್ಯಕರ್ತೆಯರು ಉಪಸ್ಥಿತರಿದ್ದರು.

ಶಾಲಾ ಮುಖ್ಯೋಪಾಧ್ಯಾಯಿನಿ ಸಂಧ್ಯಾ ಸ್ವಾಗತಿಸಿ, ಆರೋಗ್ಯ ಶಿಕ್ಷಣಾಧಿಕಾರಿ ಚಂದ್ರಕಲಾ ಕಾರ್ಯಕ್ರಮ ನಿರೂಪಿಸಿದರು. ಪ್ರಾಥಮಿಕ ಆರೋಗ್ಯ ಸುರಕ್ಷಾಧಿಕಾರಿ ನಿಶಾ ವಂದಿಸಿದರು.

LEAVE A REPLY

Please enter your comment!
Please enter your name here