Home Uncategorized ಮಳೆನೀರು ಚರಂಡಿಗಳ ಅತಿಕ್ರಮಣ ಸಮೀಕ್ಷೆ ಪೂರ್ಣ: ಶೇ.99ರಷ್ಟು ಅತಿಕ್ರಮಣಗಳ ತೆರವಿಗೆ ಆದೇಶಿಸಲಾಗಿದೆ- ಅಧಿಕಾರಿಗಳು

ಮಳೆನೀರು ಚರಂಡಿಗಳ ಅತಿಕ್ರಮಣ ಸಮೀಕ್ಷೆ ಪೂರ್ಣ: ಶೇ.99ರಷ್ಟು ಅತಿಕ್ರಮಣಗಳ ತೆರವಿಗೆ ಆದೇಶಿಸಲಾಗಿದೆ- ಅಧಿಕಾರಿಗಳು

8
0

ಕರ್ನಾಟಕ ಭೂಕಂದಾಯ ಕಾಯ್ದೆಯ ಕಲಂ 104ರ ಅಡಿಯಲ್ಲಿ ಕಳೆದ ವರ್ಷ ಪ್ರಾರಂಭವಾದ ಮಳೆನೀರು ಚರಂಡಿಗಳ ಅತಿಕ್ರಮಣ ಸಮೀಕ್ಷೆ ಪೂರ್ಣಗೊಂಡಿದ್ದು, 99 ರಷ್ಟು ಅತಿಕ್ರಮಣ ಪ್ರಕರಣಗಳ ತೆರವಿಗೆ ಆದೇಶ ಹೊರಡಿಸಲಾಗಿದೆ ಎಂದು ಬೆಂಗಳೂರು ನಗರ ಜಿಲ್ಲಾಡಳಿತ ಮಂಡಳಿ ಮಾಹಿತಿ ನೀಡಿದೆ. ಬೆಂಗಳೂರು: ಕರ್ನಾಟಕ ಭೂಕಂದಾಯ ಕಾಯ್ದೆಯ ಕಲಂ 104ರ ಅಡಿಯಲ್ಲಿ ಕಳೆದ ವರ್ಷ ಪ್ರಾರಂಭವಾದ ಮಳೆನೀರು ಚರಂಡಿಗಳ ಅತಿಕ್ರಮಣ ಸಮೀಕ್ಷೆ ಪೂರ್ಣಗೊಂಡಿದ್ದು, 99 ರಷ್ಟು ಅತಿಕ್ರಮಣ ಪ್ರಕರಣಗಳ ತೆರವಿಗೆ ಆದೇಶ ಹೊರಡಿಸಲಾಗಿದೆ ಎಂದು ಬೆಂಗಳೂರು ನಗರ ಜಿಲ್ಲಾಡಳಿತ ಮಂಡಳಿ ಮಾಹಿತಿ ನೀಡಿದೆ.

ಸಮೀಕ್ಷ ಪೂರ್ಣಗೊಂಡಿದ್ದು, ಈ ಕುರಿತ ವರದಿಯನ್ನು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಯೊಂದಿಗೆ ಹಂಚಿಕೊಳ್ಳಲಾಗಿದೆ. ಹೀಗಾಗಿ ಒತ್ತುವರಿ ತೆರವಿಗೆ ಬಿಬಿಎಂಪಿ ಮುಂದಾಗಿದೆ. ಶೀಘ್ರದಲ್ಲೇ ಸರ್ಕಾರಕ್ಕೂ ವರದಿ ರವಾನಿಸಲಾಗುವುದು ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ದಯಾನಂದ್ ಅವರು ಹೇಳಿದ್ದಾರೆ.

ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅವರು ಮಾತನಾಡಿ, ಮಳೆನೀರು ಚರಂಡಿ ಒತ್ತುವರಿ ಕುರಿತು ಜಿಲ್ಲಾಡಳಿತ ಮಂಡಳಿ ವರದಿ ಸಲ್ಲಿಸಿದೆ. ಕರ್ನಾಟಕ ಭೂಕಂದಾಯ ಕಾಯ್ದೆಯ ಸೆಕ್ಷನ್ 104 ರ ಅಡಿಯಲ್ಲಿ ಒತ್ತವರಿ ತೆರವಿಗೆ ಆದೇಶಗಳನ್ನು ಹೊರಡಿಸಲಾಗಿದೆ. ಪಾಲಿಕೆ ಅಗತ್ಯ ಕ್ರಮಗಳನ್ನು ಕೈಗೊಳ್ಳುತ್ತಿದೆ ಎಂದು ಹೇಳಿದ್ದಾರೆ.

ಈ ಕುರಿತು ಸೋಮವಾರ ಬೆಂಗಳೂರು ನಗರ ಜಿಲ್ಲಾಧಿಕಾರಿ ಅವರೊಂದಿಗೆ ಸಭೆ ನಡೆಸಿದ್ದೇವೆ. ಬಿಬಿಎಂಪಿ ಈಗಾಗಲೇ ಮಳೆನೀರು ಚರಂಡಿ ಒತ್ತುವರಿ ತೆರವು ಕಾರ್ಯ ನಡೆಸುತ್ತಿದೆ. ಇದನ್ನು ತೀವ್ರಗೊಳಿಸಲಾಗುವುದು ಎಂದು ತಿಳಿಸಿದ್ದಾರೆ.

ಸಿಬ್ಬಂದಿ ಕೊರತೆಯಿಂದ ಮಹದೇವಪುರ ವಲಯದಲ್ಲಿ ಮಳೆನೀರು ಚರಂಡಿ ಒತ್ತುವರಿ ಕಾರ್ಯಾಚರಣೆ ನಿಲ್ಲಿಸಬೇಕಾಯಿತು ಎಂದು ಬಿಬಿಎಂಪಿ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದರು.

ಉಪಮುಖ್ಯಮಂತ್ರಿ ಹಾಗೂ ಬೆಂಗಳೂರು ಅಭಿವೃದ್ಧಿ ಸಚಿವ ಡಿ.ಕೆ.ಶಿವಕುಮಾರ್ ಅವರು ಮುಂಗಾರು ಮಳೆ ಪ್ರಾರಂಭವಾಗುವ ಮುನ್ನವೇ ಸಿದ್ಧತೆ ಮಾಡಿಕೊಳ್ಳುವಂತೆ ಪೌರಕಾರ್ಮಿಕರಿಗೆ ನಿರ್ದೇಶನ ನೀಡಿದ್ದು, ಚಾಲನೆಗೆ ವೇಗ ಸಿಗಲಿದೆ. ದೊಡ್ಡ ತಂಡವೇ ತೆರವು ಕಾರ್ಯಾಚರಣೆಯಲ್ಲಿ ಭಾಗಿಯಾಗಲಿದೆ ಎಂದು ಮಾಹಿತಿ ನೀಡಿದ್ದಾರೆ.

ಕೆ.ಆರ್.ಪುರಂನಲ್ಲಿ 35 ಅತಿಕ್ರಮಮಗಳು ನಡೆದಿದ್ದು, ಒತ್ತುವರಿ ತೆರವು ಕಾರ್ಯಾಚರಣೆ ಕುರಿತು ಬೆಂಗಳೂರು ಪೂರ್ವ ತಹಶೀಲ್ದಾರ್’ಗೆ ಮಾಹಿತಿ ನೀಡಲಾಗಿದೆ. ನ್ಯಾಯವ್ಯಾಪ್ತಿಯಲ್ಲಿರುವ ಪೊಲೀಸರು ಮಾಹಿತಿ ನೀಡಿ, ಕಾರ್ಯಾಚರಣೆ ವೇಳೆ ರಕ್ಷಣೆ ನೀಡುವಂತೆ ಮನವಿ ಮಾಡಿಕೊಳ್ಳಲಾಗುವುದು ಎಂದು ಮಹದೇವಪುರ ವಲಯದ ಹಿರಿಯ ಎಂಜಿನಿಯರ್ ಹೇಳಿದ್ದಾರೆ.

ಒತ್ತುವರಿ ತೆರವು ಕುರಿತು ಕಂದಾಯ ಇಲಾಖೆ ನೀಡಿರುವ ಆದೇಶಗಳಲ್ಲಿ ಶೇ.90ರಷ್ಟು ಒತ್ತುವರಿಗಳು  ಮಹದೇವಪುರ ವಲಯದಲ್ಲೇ ಇವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here