ಮಹಾರಾಷ್ಟ್ರದ ನಾಗ್ಪುರ ಜಿಲ್ಲೆಯಲ್ಲಿ ಇಂದು ಭಾನುವಾರ ಬೆಳಗ್ಗೆ ಸ್ಫೋಟಕ ತಯಾರಿಕಾ ಕಾರ್ಖಾನೆಯಲ್ಲಿ ಸಂಭವಿಸಿದ ಸ್ಫೋಟದಲ್ಲಿ ಕನಿಷ್ಠ 15 ಮಂದಿ ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಕಾಟೋಲ್ ತಹಶೀಲಿನ ರೌಲ್ಗಾಂವ್ನಲ್ಲಿ ಇರುವ ಗಣಿಗಾರಿಕೆ ಮತ್ತು ಕೈಗಾರಿಕಾ ಸ್ಫೋಟಕಗಳನ್ನು ತಯಾರಿಸುವ SBL Energy Limited ಕಾರ್ಖಾನೆಯಲ್ಲಿ ಈ ಸ್ಫೋಟ ಸಂಭವಿಸಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.
ಕಂಪೆನಿಯ ಪ್ರತಿನಿಧಿಗಳು ಪಿಟಿಐಗೆ ನೀಡಿದ ಮಾಹಿತಿಯ ಪ್ರಕಾರ, ಬೆಳಗ್ಗೆ 7 ರಿಂದ 7.15ರ ನಡುವೆ ಕಂಪನಿಯ ಡಿಟೋನೇಟರ್ ಪ್ಯಾಕಿಂಗ್ ಘಟಕದಲ್ಲಿ ಈ ದುರ್ಘಟನೆ ನಡೆದಿದೆ.
#WATCH | Nagpur, Maharashtra | 15 people died, 18 critically injured after an explosion at SBL Energy Limited in Nagpur: Harssh Poddar, SP, Nagpur Rural
NDRF team is also present here. pic.twitter.com/WatYhpXNyM
— ANI (@ANI) March 1, 2026
ಗಾಯಗೊಂಡವರನ್ನು ಸ್ಫೋಟದ ತಕ್ಷಣವೇ ನಾಗ್ಪುರದ ಆಸ್ಪತ್ರೆಗೆ ಕರೆದೊಯ್ಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ರಕ್ಷಣಾ ಕಾರ್ಯಗಳು ಮುಂದುವರಿಯುತ್ತಿವೆ. ಶೀಘ್ರದಲ್ಲೇ ಅಧಿಕೃತ ಹೇಳಿಕೆ ಬಿಡುಗಡೆ ಮಾಡಲಾಗುತ್ತದೆ ಎಂದು ಕಂಪನಿ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಸ್ಫೋಟದ ತಕ್ಷಣ ಗಾಯಗೊಂಡವರನ್ನು ನಾಗ್ಪುರದ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಗಾಯಗೊಂಡವರ ನಿಖರ ಸಂಖ್ಯೆ ತಕ್ಷಣ ಸಿಕ್ಕಿಲ್ಲ.
ರಕ್ಷಣಾ ಕಾರ್ಯಗಳು ಮುಂದುವರಿಯುತ್ತಿವೆ. ಶೀಘ್ರದಲ್ಲೇ ವಿವರವಾದ ಅಧಿಕೃತ ಹೇಳಿಕೆ ಬಿಡುಗಡೆ ಮಾಡಲಾಗುತ್ತದೆ ಎಂದು ಕಂಪನಿ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
Nagpur, Maharashtra: An explosion occurred at the SBL company, which manufactures gunpowder, detonators, and other explosives, near Raulgaon in Katol Taluka, about 40 km from Nagpur. The blast triggered a fire at the site. Rescue operations are currently underway, and around 15… pic.twitter.com/CT4syadTDs
— IANS (@ians_india) March 1, 2026
