ಬೆಂಗಳೂರು:
ರಾಜಧಾನಿ ಬೆಂಗಳೂರಿನಲ್ಲಿ ಮತ್ತೆ ಎರಡು ದಿನಗಳ ಕಾಲ ಭಾರಿ ಮಳೆಯಾಗುವ ಮುನ್ಸೂಚನೆ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಇಂದು ಮಹತ್ವದ ಸಭೆ ನಡೆಸಿ ಸೂಕ್ತ ಮುನ್ನೆಚ್ಚರಿಕೆ ವಹಿಸುವಂತೆ ಬಿಬಿಎಂಪಿ ಉನ್ನತಾಧಿಕಾರಿಗಳಿಗೆ ಆದೇಶ ನೀಡಿದರು.
ಅಲ್ಲದೇ ಮಳೆಯಿಂದ ತೀವ್ರ ಬಾಧಿತವಾಗಿರುವ ಹೊಸಕೆರೆಹಳ್ಳಿ ಸೇರಿದಂತೆ ವಿವಿಧ ಪ್ರದೇಶಗಳಿಗೆ ಯಡಿಯೂರಪ್ಪ, ಕಂದಾಯ ಸಚಿವ ಆರ್. ಅಶೋಕ, ಬಿಬಿಎಂಪಿ ಆಯುಕ್ತ ಮಂಜುನಾಥ್ ಪ್ರಸಾದ್ ಮತ್ತಿತರರ ಜತೆ ಭೇಟಿ ನೀಡಿ, ಪರಿಶೀಲಿಸಿದರು.
ಬೆಂಗಳೂರಿನಲ್ಲಿ ಭಾರಿ ಮಳೆಯಿಂದ ಹಾನಿಗೊಳಗಾಗಿರುವ ಹೊಸಕೆರೆಹಳ್ಳಿ, ಕುಮಾರಸ್ವಾಮಿ ಬಡಾವಣೆಗಳಿಗೆ ಮುಖ್ಯಮಂತ್ರಿ @BSYBJP ಇಂದು ಭೇಟಿ ನೀಡಿ ಪರಿಶೀಲಿಸಿ, ಸಾರ್ವಜನಿಕರ ಕುಂದುಕೊರತೆಗಳನ್ನು ಆಲಿಸಿದರು.
— CM of Karnataka (@CMofKarnataka) October 24, 2020
ಕಂದಾಯ ಸಚಿವ @RAshokaBJP ಹಾಗೂ ಅಧಿಕಾರಿಗಳು ಉಪಸ್ಥಿತರಿದ್ದರು. pic.twitter.com/VyqqCaxyLh
ಕಂದಾಯ ಸಚಿವ @RAshokaBJP, ಮುಖ್ಯಮಂತ್ರಿಗಳ ಅಪರ ಮುಖ್ಯಕಾರ್ಯದರ್ಶಿ ಡಾ ಇ.ವಿ.ರಮಣರೆಡ್ಡಿ, ಬಿ.ಬಿ.ಎಂ.ಪಿ ಆಡಳಿತಾಧಿಕಾರಿ ಗೌರವ್ ಗುಪ್ತಾ, ಆಯುಕ್ತ ಮಂಜುನಾಥ್ ಪ್ರಸಾದ್ ಹಾಗೂ ನಗರ ಪೊಲೀಸ್ ಆಯುಕ್ತ ಕಮಲ್ ಪಂಥ್ ಉಪಸ್ಥಿತರಿದ್ದರು. (2/2)
— CM of Karnataka (@CMofKarnataka) October 24, 2020