Home ಕರ್ನಾಟಕ ಮಾಜಿ ಸಚಿವ ಎಚ್.ಡಿ.ರೇವಣ್ಣ ಜೈಲು ಪಾಲು ; ಜಾಮೀನು ಅರ್ಜಿ ವಿಚಾರಣೆ ನಾಳೆಗೆ(ಮೇ.9) ಮುಂದೂಡಿಕೆ

ಮಾಜಿ ಸಚಿವ ಎಚ್.ಡಿ.ರೇವಣ್ಣ ಜೈಲು ಪಾಲು ; ಜಾಮೀನು ಅರ್ಜಿ ವಿಚಾರಣೆ ನಾಳೆಗೆ(ಮೇ.9) ಮುಂದೂಡಿಕೆ

19
0

ಬೆಂಗಳೂರು : ಮೈಸೂರಿನ ಕೆ.ಆರ್.ನಗರದ ಲೈಂಗಿಕ ದೌರ್ಜನ್ಯ ಪ್ರಕರಣದ ಸಂತ್ರಸ್ತೆಯ ಅಪಹರಣ ಸಂಬಂಧ ಬಂಧನವಾಗಿರುವ ಮಾಜಿ ಸಚಿವ ಎಚ್.ಡಿ.ರೇವಣ್ಣ ಸಲ್ಲಿಸಿದ್ದ ಜಾಮೀನು ಅರ್ಜಿ ವಿಚಾರಣೆ ನಾಳೆಗೆ(ಮೇ.9) ಮುಂದೂಡಿಕೆ ಆಗಿದೆ.

ಆರೋಪಿ ಹೊಳೆನರಸೀಪುರ ಶಾಸಕ ಎಚ್.ಡಿ.ರೇವಣ್ಣ ಸಲ್ಲಿಸಿದ್ದ ಜಾಮೀನು ಅರ್ಜಿ ವಿಚಾರಣೆ ನಡೆಸಿದ ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯ ನ್ಯಾಯಾಧೀಶರು ನಾಳೆಗೆ ವಿಚಾರಣೆ ಮುಂದೂಡಿದ್ದಾರೆ.

ಇದೇ ವೇಳೆ ಎಸ್ಐಟಿ ವಶದಲ್ಲಿದ್ದ ಮಾಜಿ ಸಚಿವ ಎಚ್.ಡಿ ರೇವಣ್ಣರನ್ನು 7 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ನೀಡಿ 17ನೇ ಎಸಿಎಂಎಂ ನ್ಯಾಯಾಲಯ ನ್ಯಾಯಧೀಶ ರವೀಂದ್ರಕುಮಾರ್ ಕಟ್ಟಿಮನಿ ಆದೇಶ ನೀಡಿದ್ದಾರೆ. ಇದರಿಂದ ಆರೋಪಿ ಶಾಸಕ ಹೆಚ್.ಡಿ.ರೇವಣ್ಣ ಪರಪ್ಪನ ಅಗ್ರಹಾರ ಜೈಲು ಸೇರಿದ್ದಾರೆ.

LEAVE A REPLY

Please enter your comment!
Please enter your name here