ಮಾಜಿ ಮುಖ್ಯಮಂತ್ರಿ ದಿ. ವೀರೇಂದ್ರ ಪಾಟೀಲ ಪತ್ನಿ ಶಾರದಾ ಪಾಟೀಲ (93) ಅವರು ಬೆಂಗಳೂರಿನ ಸದಾಶಿವನಗರದ ಸ್ವಗೃಹದಲ್ಲಿ ಮಂಗಳವಾರ ನಿಧನರಾಗಿದ್ದಾರೆ. ಬೆಂಗಳೂರು: ಮಾಜಿ ಮುಖ್ಯಮಂತ್ರಿ ದಿ. ವೀರೇಂದ್ರ ಪಾಟೀಲ ಪತ್ನಿ ಶಾರದಾ ಪಾಟೀಲ (93) ಅವರು ಬೆಂಗಳೂರಿನ ಸದಾಶಿವನಗರದ ಸ್ವಗೃಹದಲ್ಲಿ ಮಂಗಳವಾರ ನಿಧನರಾಗಿದ್ದಾರೆ.
ಮಾಜಿ ಶಾಸಕ ಕೈಲಾಸನಾಥ್ ಪಾಟೀಲ ಮತ್ತು ಇಬ್ಬರು ಪುತ್ರಿಯರನ್ನು ಅವರು ಅಗಲಿದ್ದಾರೆ. ಶಾರದಾ ಪಾಟೀಲ ಪಾರ್ಥೀವ ಶರೀರವನ್ನು ಚಿಂಚೋಳಿಗೆ ತೆಗೆದುಕೊಂಡು ಹೋಗಲಾಗುವುದು. ಚಿಂಚೋಳಿಯಲ್ಲಿರುವ ವೀರೇಂದ್ರ ಪಾಟೀಲರ ಸಮಾಧಿ ಪಕ್ಕದಲ್ಲೇ ಶಾರದಾ ಪಾಟೀಲರ ಅಂತ್ಯಕ್ರಿಯೆ ಬುಧವಾರ ಅಪರಾಹ್ನ ನಡೆಯಲಿದೆ ಎಂದು ಕೈಲಾಸನಾಥ ಪಾಟೀಲ ತಿಳಿಸಿದ್ದಾರೆ.
ಶಾರದಾ ಪಾಟೀಲ್ ಅವರ ನಿಧನಕ್ಕೆ ಸಿಎಂ ಸಿದ್ದರಾಮಯ್ಯ ಸಂತಾಪ ಸೂಚಿಸಿದ್ದಾರೆ. ಈ ಸಂಬಂಧ ಟ್ವೀಟ್ ಮಾಡಿರುವ ಅವರು, ಮಾಜಿ ಮುಖ್ಯಮಂತ್ರಿ ವೀರೇಂದ್ರ ಪಾಟೀಲ್ ಅವರ ಪತ್ನಿ ಶಾರದಾ ಪಾಟೀಲ್ ಅವರ ನಿಧನದಿಂದ ದುಃಖಿತನಾಗಿದ್ದೇನೆ. ಮೃತರ ಆತ್ಮಕ್ಕೆ ಚಿರಶಾಂತಿ ಸಿಗಲೆಂದು ಪ್ರಾರ್ಥಿಸುತ್ತೇನೆ. ಶಾರದಾ ಪಾಟೀಲ್ ಅವರ ಅಗಲಿಕೆಯಿಂದ ನೊಂದಿರುವ ಕುಟುಂಬಕ್ಕೆ ದುಃಖ ಭರಿಸುವ ಶಕ್ತಿ ಸಿಗಲಿ.
ಮಾಜಿ ಮುಖ್ಯಮಂತ್ರಿ ವೀರೇಂದ್ರ ಪಾಟೀಲ್ ಅವರ ಪತ್ನಿ ಶಾರದಾ ಪಾಟೀಲ್ ಅವರ ನಿಧನದಿಂದ ದುಃಖಿತನಾಗಿದ್ದೇನೆ. ಮೃತರ ಆತ್ಮಕ್ಕೆ ಚಿರಶಾಂತಿ ಸಿಗಲೆಂದು ಪ್ರಾರ್ಥಿಸುತ್ತೇನೆ.ಶಾರದಾ ಪಾಟೀಲ್ ಅವರ ಅಗಲಿಕೆಯಿಂದ ನೊಂದಿರುವ ಕುಟುಂಬಕ್ಕೆ ದುಃಖ ಭರಿಸುವ ಶಕ್ತಿ ಸಿಗಲಿ. pic.twitter.com/3gU4tapiws— CM of Karnataka (@CMofKarnataka) September 26, 2023