ಮಾದಕ ವಸ್ತುಗಳು ಮುಂದಿನ ಪೀಳಿಗೆಯ ಮಕ್ಕಳ ಭವಿಷ್ಯಕ್ಕೆ ಮಾರಕವಾಗಲಿದೆ ಎಂದು ಕಳವಳ ವ್ಯಕ್ತಪಡಿಸಿರುವ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಮಾದಕ ವಸ್ತುಗಳಿಗೆ ಅಂತ್ಯವಾಡಲು ಮಕ್ಕಳು ಮತ್ತು ಯುವಕರಲ್ಲಿ ಜಾಗೃತಿ ಮೂಡಿಸುವ ಅಗತ್ಯವಿದೆ ಎಂದು ಕರೆ ಕೊಟ್ಟಿದ್ದಾರೆ. ಬೆಂಗಳೂರು: ಮಾದಕ ವಸ್ತುಗಳು ಮುಂದಿನ ಪೀಳಿಗೆಯ ಮಕ್ಕಳ ಭವಿಷ್ಯಕ್ಕೆ ಮಾರಕವಾಗಲಿದೆ ಎಂದು ಕಳವಳ ವ್ಯಕ್ತಪಡಿಸಿರುವ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಮಾದಕ ವಸ್ತುಗಳಿಗೆ ಅಂತ್ಯವಾಡಲು ಮಕ್ಕಳು ಮತ್ತು ಯುವಕರಲ್ಲಿ ಜಾಗೃತಿ ಮೂಡಿಸುವ ಅಗತ್ಯವಿದೆ ಎಂದು ಕರೆ ಕೊಟ್ಟಿದ್ದಾರೆ.
ಅಂತಾರಾಷ್ಟ್ರೀಯ ಮಾದಕ ವಸ್ತುಗಳ ಸೇವನೆ ಹಾಗೂ ಕಳ್ಳಸಾಗಾಣಿಕೆ ವಿರೋಧಿ ದಿನದಂದು ನಮ್ಮ ಯುವ ಪೀಳಿಗೆಗೆ ಮಾದಕ ವ್ಯಸನದಿಂದ ಉಂಟಾಗುವ ಪರಿಣಾಮಗಳ ಬಗ್ಗೆ ಜಾಗೃತಿ ಮೂಡಿಸೋಣ, ಆರೋಗ್ಯಯುತ ಸಮಾಜ ನಿರ್ಮಿಸೋಣ.#InternationalDayAgainstDrugAbuse pic.twitter.com/H0FKSjihzb
— DK Shivakumar (@DKShivakumar) June 26, 2023
ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಜಂಟಿಯಾಗಿ ವಿಧಾನಸೌಧದ ಮುಂಭಾಗದಲ್ಲಿ ಆಯೋಜಿಸಿದ್ದ ವಿಶ್ವ ಮಾದಕ ವಸ್ತು ದಿನದ ಪ್ರಯುಕ್ತ ಬೃಹತ್ ಕಾಲ್ನಡಿಗೆ ಜಾಥಾಗೆ ಚಾಲನೆ ನೀಡಿ ಮಾತನಾಡಿದ ಅವರು, ಮಾದಕ ವಸ್ತುಗಳು ನಮ್ಮ ಸಮಾಜಕ್ಕೆ ಕ್ಯಾನ್ಸರ್‌ನಂತೆ ರೋಗ ಅಂಟಿದೆ. ಇದರಿಂದ ಸಮಾಜವನ್ನು ರಕ್ಷಿಸಿ ಆರೋಗ್ಯಕರ ಸಮಾಜವನ್ನು ನಿರ್ಮಾಣ ಮಾಡಬೇಕಾಗಿದೆ ಎಂದು ಹೇಳಿದರು.ಮಕ್ಕಳು ಯುವಕರು ಈ ದೇಶದ ಆಸ್ತಿಯಾಗಿದ್ದು, ನಮ್ಮ ಸಂಸ್ಕೃತಿಯನ್ನು ಉಳಿಸಿಕೊಂಡು ವಿದ್ಯಾವಂತರಾಗಿ ಜಾಗತಿಕ ಮಟ್ಟದಲ್ಲಿ ಕೆಲಸ ಮಾಡುತ್ತಿದ್ದಾರೆ.
ಇದನ್ನೂ ಓದಿ: ಗೃಹಲಕ್ಷ್ಮಿ ಅರ್ಜಿಗೆ ಹಣ ಪಡೆಯುವಂತಿಲ್ಲ; ಬಿಜೆಪಿ ಮೊದಲು ತನ್ನ ಎಲ್ಲ ಆಶ್ವಾಸನೆ ಈಡೇರಿಸಿದೆಯೇ ಎಂದು ಹೇಳಲಿ: ಡಿಕೆ ಶಿವಕುಮಾರ್
ಬೇರೆ ರಾಜ್ಯಗಳಿಗೆ ಹೋಲಿಕೆ ಮಾಡಿದರೆ ನಮ್ಮ ರಾಜ್ಯದಲ್ಲಿ ಮಾದಕ ವಸ್ತು ನಿಯಂತ್ರಣಕ್ಕೆ ಕಡಿವಾಣ ಹಾಕಲಾಗಿದೆ. ಮಾದಕ ವಸ್ತು ಸೇವನೆ ಮಾಡಿದರೆ ಸಾವು ನೋವು ಹಾಗೂ ಯುವ ಜನಾಂಗದ ಭವಿಷ್ಯಕ್ಕೆ ಕಂಟಕವಾಗಲಿದೆ. ಹೀಗಾಗಿ ಯುವ ಜನತೆ ಎಚ್ಚರಿಕೆ ವಹಿಸಬೇಕು ಎಂದು ಹೇಳಿದರು.
ಇದರಿಂದ ಬೆಂಗಳೂರಿಗೆ ವಿಶ್ವ ಮಟ್ಟದಲ್ಲಿ ಹೆಸರು ಪ್ರಾಪ್ತವಾಗಿದೆ ಎಂದು ತಿಳಿಸಿದರು.ಬೆಂಗಳೂರಿನ ಮಕ್ಕಳು ವಿಶ್ವದ ಯಾವುದೇ ಉನ್ನತ ಹುದ್ದೆಗೆ ಏರಬಹುದು. ಮಕ್ಕಳು ಅಂದುಕೊಂಡಿದ್ದನ್ನು ಸಾಧಿಸಬೇಕಾದರೆ ಮಾದಕ ದ್ರವ್ಯ ದುಶ್ಚಟಗಳಿಂದ ದೂರ ಉಳಿಯಬೇಕು ಆಗ ಮಾತ್ರ ತಮ್ಮ ಗುರಿ ಮುಟ್ಟಲು ಸಾಧ್ಯ ಎಂದು ಹೇಳಿದರು.ನಿಮ್ಮ ಸ್ನೇಹಿತರು ಅಥವಾ ಪರಿಚಯಸ್ಥರು ಯಾರಾದರೂ ಮಾದಕ ವ್ಯಸನಿಗಳಾದರೆ ಅವರನ್ನು ಪೊಲೀಸರು ಬಂಧಿಸಿ ನ್ಯಾಯಲಯದಲ್ಲಿ ಅವರಿಗೆ ಶಿಕ್ಷೆಯಾಗಲಿದೆ ಎಂಬ ಸಂದೇಶ ಕುರಿತು ಅರಿವು ಮೂಡಿಸುವ ಸಲುವಾಗಿ ಈ ದಿನವನ್ನು ಆಚರಿಸಲಾಗುತ್ತಿದೆ. ಕಳೆದ ೨ ವರ್ಷಗಳಲ್ಲಿ ಡ್ರಗ್ಸ್ ದಂಧೆಯಲ್ಲಿ ದೊಡ್ಡ ದೊಡ್ಡ ವ್ಯಕ್ತಿಗಳಲ್ಲಿ ಸಿಕ್ಕಿಬಿದ್ದು, ಯಾವ ರೀತಿ ಸಂಕಷ್ಟ ಅನುಭವಿಸಿದರು ಎಂಬುದನ್ನು ನೋಡಿದ್ದೀರಿ. ಇದಕ್ಕೆ ಅವಕಾಶ ಮಾಡಿಕೊಡಬೇಡಿ ಎಂದು ಮಕ್ಕಳಿಗೆ ಕಿವಿಮಾತು ಹೇಳಿದರು.
ಇದನ್ನೂ ಓದಿ: ಆಗಸ್ಟ್ 17 ಅಥವಾ 18ರಂದು ‘ಗೃಹಲಕ್ಷ್ಮೀ’ ಯೋಜನೆ ಜಾರಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್
ಕಳೆದ ೩ ವರ್ಷಗಳಿಂದ ಅನೇಕ ಪಾದಾಯಾತ್ರೆಗಳಲ್ಲಿ ಭಾಗವಹಿಸಿದ್ದೇನೆ. ನೀರಿಗಾಗಿ ನಡಿಗೆ, ಸ್ವಾತಂತ್ರ್ಯ ನಡಿಗೆ, ಭಾರತ್ ಜೋಡೋ ಯಾತ್ರೆಯಲ್ಲಿ ಹೆಜ್ಜೆ ಹಾಕಿದ್ದೇನೆ ಎಂದರು.