Home Uncategorized ಮಾದರಿ ಸಂಹಿತೆ ಉಲ್ಲಂಘನೆ; ಪರಸ್ಪರರ ವಿರುದ್ಧ ದೂರು ದಾಖಲಿಸಿದ ಕಾಂಗ್ರೆಸ್, ಬಿಜೆಪಿ

ಮಾದರಿ ಸಂಹಿತೆ ಉಲ್ಲಂಘನೆ; ಪರಸ್ಪರರ ವಿರುದ್ಧ ದೂರು ದಾಖಲಿಸಿದ ಕಾಂಗ್ರೆಸ್, ಬಿಜೆಪಿ

23
0

ರಾಜ್ಯದಲ್ಲಿ ಚುನಾವಣೆ ದಿನಾಂಕ ಘೋಷಣೆಯಾಗಿದ್ದು, ಮಾದರಿ ನೀತಿ ಸಂಹಿತೆ ಜಾರಿಯಲ್ಲಿದೆ. ಹೀಗಿರುವಾಗ, ಮಾದರಿ ನೀತಿ ಸಂಹಿತೆ ಉಲ್ಲಂಘನೆಯಾಗಿದೆ ಎಂದು ಆರೋಪಿಸಿ ಬಿಜೆಪಿ ಮತ್ತು ಕಾಂಗ್ರೆಸ್ ಪರಸ್ಪರರ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು ನೀಡಿವೆ. ಬೆಂಗಳೂರು: ರಾಜ್ಯದಲ್ಲಿ ಚುನಾವಣೆ ದಿನಾಂಕ ಘೋಷಣೆಯಾಗಿದ್ದು, ಮಾದರಿ ನೀತಿ ಸಂಹಿತೆ ಜಾರಿಯಲ್ಲಿದೆ. ಹೀಗಿರುವಾಗ, ಮಾದರಿ ನೀತಿ ಸಂಹಿತೆ ಉಲ್ಲಂಘನೆಯಾಗಿದೆ ಎಂದು ಆರೋಪಿಸಿ ಬಿಜೆಪಿ ಮತ್ತು ಕಾಂಗ್ರೆಸ್ ಪರಸ್ಪರರ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು ನೀಡಿವೆ.

ಬೆಂಗಳೂರಿನ ಬ್ಯಾಟರಾಯನಪುರದಲ್ಲಿ ಕುಕ್ಕರ್‌ಗಳು ಮತ್ತು ಇತರ ಸಾಮಗ್ರಿಗಳು ಪತ್ತೆಯಾಗಿವೆ ಎಂದು ಕಾಂಗ್ರೆಸ್ ಆರೋಪಿಸಿದರೆ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮೈಸೂರಿನ ವರುಣಾದಲ್ಲಿ ನಗದು ಹಂಚಿದ್ದಾರೆ ಎಂದು ಬಿಜೆಪಿ ಆರೋಪಿಸಿದೆ.

ಸುಮಾರು ಆರು ದಿನಗಳ ಹಿಂದೆ ಜಿಎಸ್‌ಟಿ ಅಧಿಕಾರಿಗಳು ದಾಳಿ ನಡೆಸಿ 3.6 ಕೋಟಿ ರೂಪಾಯಿ ಮೌಲ್ಯದ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ ಎಂದು ಕಾಂಗ್ರೆಸ್ ಅಭ್ಯರ್ಥಿ ಹಾಗೂ ಮಾಜಿ ಸಚಿವ ಕೃಷ್ಣ ಬೈರೇಗೌಡ ತಮ್ಮ ದೂರಿನಲ್ಲಿ ಆರೋಪಿಸಿದ್ದಾರೆ.

ಸಿದ್ದರಾಮಯ್ಯ ಅವರು ತಮ್ಮ ಕ್ಷೇತ್ರಕ್ಕೆ ತೆರಳಿ ಹಣ ಹಂಚಿದ್ದಾರೆ ಎಂದು ಆರೋಪಿಸಿ, ಬಿಜೆಪಿ ಎಂಎಲ್‌ಸಿ ಛಲವಾದಿ ನಾರಾಯಣಸ್ವಾಮಿ ಬುಧವಾರ ದೂರು ದಾಖಲಿಸಿದ್ದಾರೆ. 

ಇದನ್ನೂ ಓದಿ: ಕರ್ನಾಟಕ ವಿಧಾನಸಭೆ ಚುನಾವಣೆ: ಒಂದೇ ಹಂತದಲ್ಲಿ ಮೇ 10 ರಂದು ಮತದಾನ, ಮೇ 13ಕ್ಕೆ ಫಲಿತಾಂಶ

ಈ ನಡುವೆ ಮಂಗಳವಾರ ಮಂಡ್ಯದಲ್ಲಿ ಚುನಾವಣಾ ಪ್ರಚಾರದ ವೇಳೆ ಕಲಾವಿದರಿಗೆ ಹಣ ಎಸೆದ ಆರೋಪದ ಮೇಲೆ ಕಾಂಗ್ರೆಸ್ ರಾಜ್ಯಾಧ್ಯಕ್ಷ ಡಿಕೆ ಶಿವಕುಮಾರ್ ಸಂಕಷ್ಟಕ್ಕೆ ಸಿಲುಕಿದ್ದಾರೆ. ಪೊಲೀಸರು ಅವರ ವಿರುದ್ಧ ನಾನ್-ಕಾಗ್ನಿಸೆಬಲ್ ಅಪರಾಧ ಪ್ರಕರಣವನ್ನು ದಾಖಲಿಸಿದ್ದಾರೆ.

ರಾಜ್ಯದಲ್ಲಿ ಮೇ 10 ರಂದು ವಿಧಾನಸಭೆ ಚುನಾವಣೆ ನಡೆಯಲಿದ್ದು, ಮೇ 13ಕ್ಕೆ ಫಲಿತಾಂಶ ಪ್ರಕಟವಾಗಲಿದೆ.

LEAVE A REPLY

Please enter your comment!
Please enter your name here