ಬೆಂಗಳೂರು: ವಿಧಾನಸಭೆ ಚುನಾವಣೆ ವೇಳೆ ಬಿಜೆಪಿ ವಿರುದ್ಧ 40% ಕಮಿಷನ್ ಆರೋಪಕ್ಕೆ ಮಾಧ್ಯಮಗಳಲ್ಲಿ ಪ್ರಕರಣೆ ಹೊರಡಿಸಿದ್ದ ಪ್ರಕರಣದಲ್ಲಿ ಎಐಸಿಸಿ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿಗೆ ಬಿಗ್ ರಿಲೀಫ್ ಸಿಕ್ಕಿದೆ.
ಬಿಜೆಪಿಯ ಕೇಶವ ಪ್ರಸಾದ್ ಸಲ್ಲಿಸಿದ್ದ ಮಾನನಷ್ಟ ಮೊಕದ್ದಮೆಯ ವಿಚಾರಣೆ ನಡೆಸಿದ್ದ ಬೆಂಗಳೂರಿನ 42 ನೇ ಎಸಿಎಂಎಂ ಪ್ರಕರಣದಲ್ಲಿ ಖುದ್ದು ಹಾಜರಾಗಲುಬ ಸಮನ್ಸ್ ನೀಡಿತ್ತು. ಹೀಗಾಗಿ ರಾಹುಲ್ ಗಾಂಧಿ ನ್ಯಾಯಾಲಯಕ್ಕೆ ಹಾಜರಾಗಿದ್ದರು.ಈ ವೇಳೆ ರಾಹುಲ್ ಪರ ವಕೀಲರ ಜಾಮೀನು ನೀಡುವಂತೆ ಮನವಿ ಮಾಡಿದರು. ಇದನ್ನ ಮಾನ್ಯ ಮಾಡಿದ ನ್ಯಾಯಾಧೀಶರು ರಾಹುಲ್ ಗಾಂಧಿಗೆ ಜಾಮೀನು ನೀಡಿದರು.
ಈ ಹಿಂದೆ ವಿಚಾರಣೆಗೆ ಎರಡು ಬಾರಿ ವಿನಾಯಿತಿ ನೀಡಲಾಗಿದ್ದು, ಮೂರನೇ ಬಾರಿ ಖುದ್ದು ಹಾಜರಾಗಲು ಸೂಚನೆ ನೀಡಿತ್ತು. ಹೀಗಾಗಿ ರಾಹುಲ್ ಗಾಂಧಿ ನ್ಯಾಯಾಲಯಕ್ಕೆ ಹಾಜರಾಗಿದ್ದರು.
ಜಾಮೀನು ಅರ್ಜಿ ವಿಚಾರಣೆ ವೇಳೆ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆಶಿವಕುಮಾರ್ ರಾಹುಲ್ ಗಾಂಧಿ ಗೆ ಸಾಥ್ ನೀಡಿದರು. ರಾಹುಲ್ ಗಾಂಧಿಗೆ ಮಾಜಿ ಸಂಸದ ಶ್ಯೂರಿಟಿ ನೀಡಿದ್ದು ವಿಶೇಷವಾಗಿತ್ತು. ಶ್ಯೂರಿಟಿ ಪುರಸ್ಕಿಸಿದ ನ್ಯಾಯಾಲಯ ಜಾಮೀನು ನೀಡಿ ಜುಲೈ 30 ಕ್ಕೆ ವಿಚಾರಣೆ ಮುಂದೂಡಿದೆ.