Home ಕರ್ನಾಟಕ ಮಾನಹಾನಿಕರ ಸುದ್ದಿ ಪ್ರಕಟಿಸದಂತೆ ತಡೆಯಾಜ್ಞೆ ತಂದ ಈಶ್ವರಪ್ಪ ಪುತ್ರ ಕಾಂತೇಶ್

ಮಾನಹಾನಿಕರ ಸುದ್ದಿ ಪ್ರಕಟಿಸದಂತೆ ತಡೆಯಾಜ್ಞೆ ತಂದ ಈಶ್ವರಪ್ಪ ಪುತ್ರ ಕಾಂತೇಶ್

4
0

ಬೆಂಗಳೂರು: ಸಂಸದ ಪ್ರಜ್ವಲ್ ರೇವಣ್ಣ ಲೈಂಗಿಕ ಹಗರಣ ಸದ್ದು ಮಾಡುತ್ತಿರುವ ಬೆನ್ನಲೇ ಮಾಜಿ ಉಪಮುಖ್ಯಮಂತ್ರಿ , ಹಾಲಿ ಶಿವಮೊಗ್ಗ ಲೋಕಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಕೆ.ಎಸ್ ಈಶ್ವರಪ್ಪ ಅವರ ಪುತ್ರ ಕೆ.ಇ. ಕಾಂತೇಶ್ ಸುದ್ದಿ ವಾಹಿನಿಗಳು, ಮುದ್ರಣ ಮಾಧ್ಯಮಗಳು ಮತ್ತು ಸಾಮಾಜಿಕ ಜಾಲತಾಣಗಳಲ್ಲಿ ತಮ್ಮ ವಿರುದ್ದ ಯಾವುದೇ ರೀತಿಯ ಮಾನಹಾನಿ ವರದಿ ಮಾಡದಂತೆ ನ್ಯಾಯಾಲಯದಿಂದ ನಿರ್ಬಂಧಕಾಜ್ಞೆ ತಂದಿದ್ದಾರೆ.

ಶಿವಮೊಗ್ಗದ ಬಂಡಾಯ ಅಭ್ಯರ್ಥಿ ಕೆ ಎಸ್‌ ಈಶ್ವರಪ್ಪ ಅವರ ಪುತ್ರ ಕಾಂತೇಶ್‌ ತಮ್ಮ ಬಗ್ಗೆ ಮಾನಹಾನಿಕರ ಸುದ್ದಿ, ಫೋಟೋ ಪ್ರಕಟಿಸದಂತೆ ಕೋರ್ಟ್ ತಡೆಯಾಜ್ಞೆ ನೀಡಿದೆ. ತಮ್ಮ ವಿರುದ್ಧ ಯಾವುದೇ ರೀತಿ ವಿಡಿಯೋ, ಪೋಟೋ, ಮಾನಹಾನಿ ಪ್ರಕಟಿಸದಂತೆ ಕಾಂತೇಶ್ ಅರ್ಜಿ ಸಲ್ಲಿಸಿದ್ದರು. ಸಿಟಿ ಸಿವಿಲ್ ಕೋರ್ಟ್ ನ ನ್ಯಾಯಾಧೀಶರು ಮಧ್ಯಂತರ ತಡೆಯಾಜ್ಞೆ ನೀಡಿದ್ದಾರೆ. ಅಲ್ಲದೆ ಸಾಮಾಜಿಕ ಜಾಲತಾಣ,ಮಾಧ್ಯಮ,ದಿನಪತ್ರಿಕೆಗಳಲ್ಲಿ ಸಹ ಪ್ರತಿವಾದಿಗಳನ್ನ ಮಾಡಿ ನಿರ್ಬಂಧ ವಿಧಿಸಿ ವಿಚಾರಣೆ ಸೆಪ್ಟೆಂಬರ್ 8 ಮುಂದೂಡಿದೆ. ಕೆ.ಈ ಕಾಂತೇಶ್ ಅವರ ವಿರುದ್ದ ಯಾವುದೇ ರೀತಿಯ ಮಾನ ಹಾನಿ ವರದಿಗಳನ್ನು  ಪ್ರಕಟಿಸಬಾರದು,ವಿಡಿಯೋಗಳನ್ನು ಪ್ರಸಾರ ಮಾಡದಂತೆ ಎಂದು ನಿರ್ಬಂಧಕಾಜ್ಞೆ ಜಾರಿ ಮಾಡಿದೆ.

LEAVE A REPLY

Please enter your comment!
Please enter your name here