ಬೆಳಗಾವಿ:
ಗುಂಪೊಂದು ಮಾರಕಾಸ್ತ್ರಗಳಿಂದ ದಾಳಿ ಮಾಡಿ ಯುವಕನೋರ್ವನನ್ನು ಭೀಕರವಾಗಿ ಕೊಚ್ಚಿ ಕೊಲೆ ಮಾಡಿರುವ ಘಟನೆ ವಾಡಿ ರಸ್ತೆಯಲ್ಲಿ ಭಾನುವಾರ ತಡರಾತ್ರಿ ವರದಿಯಾಗಿದೆ.
ಹತ್ಯೆಯಾದ ಯುವಕನನ್ನು ಬೆಳಗಾವಿ ಅಜಾಮ್ ನಗರ ನಿವಾಸಿ ಶೆಹಬಾಜ್ (24)ಎಂದು ಗುರುತಿಸಲಾಗಿದೆ. ಮೃತ ಶೆಹಬಾಜ್ ರೌಡಿಶೀಟರ್ ಆಗಿದ್ದ ಎನ್ನಲಾಗಿದೆ.
ಹತ್ಯೆಗೆ ನಿಖರವಾದ ಕಾರಣ ತಿಳಿದು ಬಂದಿಲ್ಲ. ಹಳೇ ದ್ವೇಷದ ಹಿನ್ನೆಲೆಯಲ್ಲಿ ಕೊಲೆ ನಡೆದಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ.
ದುಷ್ಕರ್ಮಿಗಳ ಗುಂಪೊಂದು ಏಕಾಏಕೀ ಮಾರಕಾಸ್ತ್ರಗಳಿಂದ ದಾಳಿ ನಡೆಸಿ ಸ್ಥಳದಿಂದ ಪರಾರಿಯಾಗಿದೆ ಎಂದು ತಿಳಿದು ಬಂದಿದೆ.
ಘಟನೆಗೆ ಸಂಬಂಧಿಸಿದಂತೆ ಮಾಳಮಾರುತಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.