ಮಾ.31: ಅಸೈಗೋಳಿಯಲ್ಲಿ ಬಿಜೆಪಿ ಬೂತ್ ಮಟ್ಟದ ಕಾರ್ಯಕರ್ತರ ಸಮಾವೇಶ
ಉಳ್ಳಾಲ: ಮುಂಬರುವ ಲೋಕಸಭಾ ಚುನಾವಣೆಯ ಪೂರ್ವಭಾವಿಯಾಗಿ ಬಿಜೆಪಿ ಮಂಗಳೂರು ವಿದಾನಸಭಾ ಕ್ಷೇತ್ರದ ಮಹಾಶಕ್ತಿ ಕೇಂದ್ರಗಳ ಬೂತ್ ಮಟ್ಟದ ಕಾರ್ಯಕರ್ತರ ಸಮಾವೇಶವು ಮಾ.31ರಂದು ಅಸೈಗೋಳಿಯ ಬಂಟರ ಭವನದಲ್ಲಿ ಬೆಳಗ್ಗೆ 10 ಗಂಟೆಗೆ ನಡೆಯಲಿದೆ ಎಂದು ಬಿಜೆಪಿ ಮಂಗಳೂರು ವಿದಾನಸಭಾ ಕ್ಷೇತ್ರದ ಅಧ್ಯಕ್ಷ ಜಗದೀಶ ಆಳ್ವ ಕುವೆತ್ತಬೈಲು ಹೇಳಿದರು.
ಅವರು ತೊಕ್ಕೊಟ್ಟು ಸಮೀಪದ ಕಲ್ಲಾಪುವಿನ ಬಿಜೆಪಿ ಚುನಾವಣಾ ಕಾರ್ಯಾಲಯದಲ್ಲಿ ಕರೆದ ಪತ್ರಿಕಾ ಗೋಷ್ಟಿಯನ್ನು ದ್ದೇಶಿಸಿ ಮಾತನಾಡಿ, ಮಂಗಳೂರು ವಿಧಾನಸಭಾ ಕ್ಷೇತ್ರದಲ್ಲಿ ಹೆಚ್ಚುವರಿ ಮತ ಗಳಿಸುವ ದೃಷ್ಟಿಯಿಂದ ಬೂತ್ ಮಟ್ಟದ ಕಾರ್ಯಕರ್ತರು ಹಗಲು, ರಾತ್ರಿ ಅವಿರತವಾಗಿ ದುಡಿಯಲು ಹೊಸ ಹುರುಪು ಮೂಡಿಸುವ ಪ್ರಯುಕ್ತ ಸಮಾವೇಶವನ್ನು ಹಮ್ಮಿಕೊಳ್ಳಲಾಗಿದೆ. ಈ ಬಾರಿ ಚುನಾವಣೆಯಲ್ಲಿ ಯಾವ ರೀತಿಯಲ್ಲಿ ಮತ ಕ್ರೋಢೀಕರಿಸಬೇಕೆಂಬುವುದರ ಬಗ್ಗೆ ಸಮಾವೇಶದಲ್ಲಿ ಭಾಗವಹಿಸುವ ಪ್ರಮುಖರು ಕಾರ್ಯಕರ್ತರಿಗೆ ಮಾರ್ಗದರ್ಶನ ನೀಡಲಿದ್ದಾರೆ. ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಗಳು,ರಾಜ್ಯ ಚುನಾವಣಾ ಪ್ರಭಾರಿಯಾದ ರಾದಾ ಮೋಹನ್ ದಾಸ್ ಅಗರ್ ವಾಲ್, ಬಿಜೆಪಿ ಜಿಲ್ಲಾಧ್ಯಕ್ಷರಾದ ಸತೀಶ್ ಕುಂಪಲ, ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟ, ಸಂಸದ ನಳಿನ್ ಕುಮಾರ್ ಕಟೀಲು, ಮಂಗಳೂರು ದಕ್ಷಿಣ ಕ್ಷೇತ್ರದ ಶಾಸಕ ವೇದವ್ಯಾಸ್ ಕಾಮತ್, ಬಿಜೆಪಿ ಮಂಗಳೂರು ಮಂಡಲದ ಚುನಾವಣಾ ಪ್ರಭಾರಿಗಳಾದ ರಾಧಾಕೃಷ್ಣ ರೈ ಬೂಡಿಯಾರ್, ಕ್ಷೇತ್ರ ಪ್ರಭಾರಿಗಳಾದ ದಿನೇಶ್ ಅಮ್ಟೂರ್ ಮೊದಲಾದ ಗಣ್ಯರು ಸಮಾವೇಶದಲ್ಲಿ ಪಾಲ್ಗೊಳ್ಳಲಿರುವರು ಎಂದರು.
ಬಿಜೆಪಿ ಮಂಗಳೂರು ಮಂಡಲದ ಚುನಾವಣಾ ಸಂಚಾಲಕರಾದ ಚಂದ್ರಹಾಸ್ ಪಂಡಿತ್ ಹೌಸ್ ಮಾತನಾಡಿದರು.
ಕ್ಷೇತ್ರದ ಚುನಾವಣಾ ನಿರ್ವಹಣಾ ಸಮಿತಿ ಸಹ ಸಂಚಾಲಕ ಹೇಮಂತ್ ಶೆಟ್ಟಿ ,ಪ್ರದಾನ ಕಾರ್ಯದರ್ಶಿಗಳಾದ ಸುಜಿತ್ ಮಾಡೂರು, ದಯಾನಂದ ತೊಕ್ಕೊಟ್ಟು, ಕಾರ್ಯದರ್ಶಿ ಜೀವನ್ ಕುಮಾರ್ ಕೆರೆಬೈಲು ಗೋಷ್ಟಿಯಲ್ಲಿ ಉಪಸ್ಥಿತರಿದ್ದರು.