ಪುತ್ತೂರು: ಕಳೆದ ಒಂದು ತಿಂಗಳ ಹಿಂದೆ ಮಾಣಿ ಮೈಸೂರು ರಸ್ತೆಯ ಕಬಕ ಸಮೀಪದ ಕೂವೆತ್ತಿಲ ಎಂಬಲ್ಲಿ ನಡೆದ ರಸ್ತೆ ಅಪಘಾತದಲ್ಲಿ ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ಯುವತಿ ಶುಕ್ರವಾರ ರಾತ್ರಿ ಮೃತಪಟ್ಟಿದ್ದಾರೆ.
ಬಂಟ್ವಾಳ ತಾಲೂಕಿನ ಮಿತ್ತೂರು ಸಮೀಪದ ಸೂರ್ಯ ನಿವಾಸಿ ಲಿಂಗಪ್ಪ ಗೌಡ ಎಂಬವರ ಪುತ್ರಿ, ಪುತ್ತೂರಿನ ಖಾಸಗಿ ಕಾಲೇಜಿನ ಪದವಿ ವಿದ್ಯಾರ್ಥಿನಿ ಮಂಜುಶ್ರೀ (20) ಮೃತಪಟ್ಟ ವಿದ್ಯಾರ್ಥಿನಿ.
ಒಂದು ತಿಂಗಳ ಹಿಂದೆ ಕಬಕ ಸಮೀಪದ ಕೂವೆತ್ತಿಲ ಎಂಬಲ್ಲಿ ಆಲ್ಟೋ ಕಾರು ಹಾಗೂ ಆಕ್ಟಿವಾ ಮಧ್ಯೆ ನಡೆದ ಅಪಘಾತದಲ್ಲಿ ಮಂಜುಶ್ರೀ ಅವರು ಗಂಭೀರ ಗಾಯಗೊಂಡಿದ್ದರು. ಆ ಬಳಿಕ ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ಚಿಕಿತ್ಸೆಗೆಂದು ದಾಖಲಿಸಲಾಗಿತ್ತು.ಕೋಮಾ ಸ್ಥಿತಿಯಲ್ಲಿದ್ದ ಅವರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.