ಬೆಂಗಳೂರು:
ಕನ್ನಡದ ಬೆಳವಣಿಗೆಗೆ ಪೂರಕವಾಗುವಂತೆ ಮುಂದಿನ ಒಂದು ವರ್ಷವನ್ನು ಕನ್ನಡ ಕಾಯಕ ವರ್ಷವಾಗಿ ಆಚರಿಸಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಪ್ರಕಟಿಸಿದ್ದಾರೆ.
ಕನ್ನಡ ನಾಡು ನುಡಿ, ರಕ್ಷಣೆ, ಭಾಷೆಯ ಬೆಳವಣಿಗೆ ಹಿತದೃಷ್ಟಿಯಿಂದ ಅಳಿದುಳಿದ ಕನ್ನಡ ಕೆಲಸವನ್ನು ಪೂರ್ಣಗೊಳಿಸಲು ಬರುವ ಅಕ್ಟೋಬರ್ ವರೆಗೆ ಕನ್ನಡ ಕಾಯಕ ವರ್ಷವನ್ನಾಗಿ ಆಚರಿಸಲಾಗುವುದು ಎಂದು ಯಡಿಯೂರಪ್ಪ ಘೋಷಿಸಿದ್ದಾರೆ.
ನಗರದ ಕಂಠೀರವ ಕ್ರೀಡಾಂಗಣದಲ್ಲಿ ಆಯೋಜಿಸಿದ್ದ 65 ನೇ ಕನ್ನಡ ರಾಜ್ಯೋತ್ಸವದ ಪ್ರಧಾನ ಸಮಾರಂಭದಲ್ಲಿ ಮಾತನಾಡಿದ ಅವರು, ಇಂದಿನಿಂದ ಬರುವ ವರ್ಷದ ಅಕ್ಟೋಬರ್ ವರೆಗೆ ಕನ್ನಡ ಕಾಯಕ ವರ್ಷವೆಂದು ಆಚರಣೆ ಮಾಡಲಾಗುವುದು ಎಂದರು.