Home Uncategorized ಮುಂದಿನ ವರ್ಷ ವಿಶೇಷ ‘ಯುವ ಬಜೆಟ್’: ಸಿಎಂ ಬೊಮ್ಮಾಯಿ

ಮುಂದಿನ ವರ್ಷ ವಿಶೇಷ ‘ಯುವ ಬಜೆಟ್’: ಸಿಎಂ ಬೊಮ್ಮಾಯಿ

14
0

ಯುವಜನರನ್ನು ಸಬಲೀಕರಣಗೊಳಿಸುವ ಉದ್ದೇಶದಿಂದ ರಾಜ್ಯ ಸರ್ಕಾರ ಮುಂದಿನ ವರ್ಷ ವಿಶೇಷ ‘ಯುವ ಬಜೆಟ್’ ಮಂಡಿಸಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಗುರುವಾರ ಘೋಷಿಸಿದ್ದಾರೆ. ಬೆಂಗಳೂರು: ಯುವಜನರನ್ನು ಸಬಲೀಕರಣಗೊಳಿಸುವ ಉದ್ದೇಶದಿಂದ ರಾಜ್ಯ ಸರ್ಕಾರ ಮುಂದಿನ ವರ್ಷ ವಿಶೇಷ ‘ಯುವ ಬಜೆಟ್’ ಮಂಡಿಸಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಗುರುವಾರ ಘೋಷಿಸಿದ್ದಾರೆ.

ಬಾಲಸುಬ್ರಮಣ್ಯಂ ನೇತೃತ್ವದ ತಜ್ಞರ ಸಮಿತಿ ಕರಡು ಕರ್ನಾಟಕ ಯುವ ನೀತಿ – 2022 (ಕೆವೈಪಿ)ಯನ್ನು ಮುಖ್ಯಮಂತ್ರಿಗಳಿಗೆ ಸಲ್ಲಿಸಿದರು. ಕರಡು ಸ್ವೀಕರಿಸಿ ಮಾತನಾಡಿದ ಸಿಎಂ ಬೊಮ್ಮಾಯಿ, ಸಂಪುಟದ ಅನುಮೋದನೆಯ ನಂತರ ಈ ಶಿಫಾರಸುಗಳನ್ನು ಜಾರಿಗೊಳಿಸಲಾಗುವುದು ಎಂದು ಭರವಸೆ ನೀಡಿದರು.

ಇದನ್ನು ಓದಿ: ನವೆಂಬರ್ 1ಕ್ಕೆ ಪುನೀತ್ ರಾಜ್ ಕುಮಾರ್ ಗೆ ಮರಣೋತ್ತರ ‘ಕರ್ನಾಟಕ ರತ್ನ’: ಸಿಎಂ ಬೊಮ್ಮಾಯಿ

ದೇಶದ ಜನಸಂಖ್ಯೆಯಲ್ಲಿ ಶೇ. 46 ರಷ್ಟು ಯುವಕರಿದ್ದಾರೆ. ಇವರನ್ನು ದೇಶ ಕಟ್ಟುವ ಕೆಲಸದಲ್ಲಿ ಸಕ್ರಿಯವಾಗಿ ತೊಡಗಿಸಿಕೊಳ್ಳಬೇಕಾಗಿದೆ. ಆರ್ಥಿಕ ಅಭಿವೃದ್ಧಿಯ ಮೂಲಕ ಯುವ ಸಬಲೀಕರಣವಾಗಬೇಕಾಗಿದೆ. ಜೊತೆಗೆ ಉತ್ತಮ ವ್ಯಕ್ತಿತ್ವ ನಿರ್ಮಾಣವೂ ಆಗಬೇಕಾಗಿದೆ. ಈ ಹಿನ್ನೆಲೆಯಲ್ಲಿ ಮುಂದಿನ ಆಯವ್ಯಯದಲ್ಲಿ ಯುವ ಬಜೆಟ್​ ರೂಪಿಸಲಾಗುವುದು ಎಂದು ಸಿಎಂ ಹೇಳಿದರು.

ಇದೇ ವೇಳೆ ಸ್ವಾಮಿ ವಿವೇಕಾನಂದ ಯುವ ಶಕ್ತಿ ಯೋಜನೆ ಅಡಿಯಲ್ಲಿ ಸ್ವಯಂ ಉದ್ಯೋಗ ಕೈಗೊಳ್ಳಲು ಸಹಾಯ ಮಾಡುವ ನಿಟ್ಟಿನಲ್ಲಿ ಯುವಕರ ಸ್ವಸಹಾಯ ಸಂಘಗಳಿಗೆ ಸಾಲ ವಿತರಿಸಲು ಎಸ್‌ಬಿಐ-ಆಂಕರ್ ಬ್ಯಾಂಕ್‌ನೊಂದಿಗೆ ಒಪ್ಪಂದಕ್ಕೆ ಸಹಿ ಹಾಕಿದರು.

LEAVE A REPLY

Please enter your comment!
Please enter your name here