ರಾಜ್ಯದಲ್ಲಿ ಅಧಿಕಾರಿಗಳ ವರ್ಗಾವಣೆ ಪರ್ವ ಮುಂದುವರೆದಿದ್ದು, ಐಪಿಎಸ್ ಅಧಿಕಾರಿ ರವಿ ಡಿ. ಚನ್ನಣ್ಣನವರ್ ಅವರನ್ನು ಗುರುವಾರ ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಬೆಂಗಳೂರು: ರಾಜ್ಯದಲ್ಲಿ ಅಧಿಕಾರಿಗಳ ವರ್ಗಾವಣೆ ಪರ್ವ ಮುಂದುವರೆದಿದ್ದು, ಐಪಿಎಸ್ ಅಧಿಕಾರಿ ರವಿ ಡಿ. ಚನ್ನಣ್ಣನವರ್ ಅವರನ್ನು ಗುರುವಾರ ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಕಿಯೋನಿಕ್ಸ್ ಎಂಡಿ ಆಗಿದ್ದ ರವಿ ಡಿ. ಚನ್ನಣ್ಣನವರ್ ಅವರನ್ನು ಆಂತರಿಕ ಭದ್ರತಾ ವಿಭಾಗದ ಡಿಐಜಿಪಿ ಆಗಿ ವರ್ಗಾವಣೆ ಮಾಡಲಾಗಿದೆ.
ಇದನ್ನು ಓದಿ: ಅಲೋಕ್ ಕುಮಾರ್ ಸೇರಿ ನಾಲ್ವರು ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿದ ಸರ್ಕಾರ
ಕಳೆದ ವರ್ಷ ರವಿ ಡಿ. ಚನ್ನಣ್ಣನವರ್ ಅವರ ವಿರುದ್ಧ ಭ್ರಷ್ಟಾಚಾರ ಆರೋಪ ಕೇಳಿಬಂದ ನಂತರ ಬಸವರಾಜ ಬೊಮ್ಮಾಯಿ ನೇತೃತ್ವದ ಬಿಜೆಪಿ ಸರ್ಕಾರ, ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಎಂಡಿಯಾಗಿ ವರ್ಗಾವಣೆ ಮಾಡಿ ಆದೇಶ ಹೊರಡಿಸಿತ್ತು. ಆದರೆ, ನಂತರ ಈ ವರ್ಗಾವಣೆ ಆದೇಶಕ್ಕೆ ತಡೆ ನೀಡಿತ್ತು. ಈ ಹಿಂದೆ ಸಿಐಡಿ ಎಸ್ಪಿ ಆಗಿಯೂ ಕಾರ್ಯನಿರ್ವಹಿಸಿದ್ದ ಚನ್ನಣ್ಣವರ್ ಹಲವು ಕರ್ತವ್ಯಗಳನ್ನು ನಿಭಾಯಿಸಿದ್ದಾರೆ.
ಇದನ್ನು ಓದಿ: ಮಂಜುನಾಥ್ ಪ್ರಸಾದ್ ಸೇರಿ 11 ಐಎಎಸ್ ಅಧಿಕಾರಿಗಳ ವರ್ಗಾವಣೆ
ನಿನ್ನೆಯಷ್ಟೇ ಹಿರಿಯ ಪೊಲೀಸ್ ಅಧಿಕಾರಿ ಅಲೋಕ್ ಕುಮಾರ್ ಸೇರಿದಂತೆ ನಾಲ್ವರು ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶಿಸಲಾಗಿತ್ತು.