Home Uncategorized ಮುಖ್ಯಮಂತ್ರಿಯ ಆಪ್ತ ಕಾರ್ಯದರ್ಶಿಗಳ ಹೆಸರಿನಲ್ಲಿ ನಕಲಿ ಲೆಟರ್ ಹೆಡ್ ಸೃಷ್ಟಿ: ಇಬ್ಬರ ವಿರುದ್ಧ ಪ್ರಕರಣ ದಾಖಲು

ಮುಖ್ಯಮಂತ್ರಿಯ ಆಪ್ತ ಕಾರ್ಯದರ್ಶಿಗಳ ಹೆಸರಿನಲ್ಲಿ ನಕಲಿ ಲೆಟರ್ ಹೆಡ್ ಸೃಷ್ಟಿ: ಇಬ್ಬರ ವಿರುದ್ಧ ಪ್ರಕರಣ ದಾಖಲು

42
0

ಬೆಂಗಳೂರು, ಡಿ.11: ಮುಖ್ಯಮಂತ್ರಿಯ ಆಪ್ತ ಕಾರ್ಯದರ್ಶಿಗಳ ಹೆಸರಿನಲ್ಲಿ ನಕಲಿ ಲೆಟರ್ ಹೆಡ್ ಸೃಷ್ಟಿಸಿದ ಪ್ರಕರಣಕ್ಕೆ ಸಂಬಂಧಿಸಿ ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆಪ್ತ ಕಾರ್ಯದರ್ಶಿ ಡಾ.ವೆಂಕಟೇಶಯ್ಯ ನೀಡಿರುವ ದೂರಿನ ಅನ್ವಯ ರಾಜೇಂದ್ರ ಹಾಗೂ ಅಂಕಿತ್ ಎಂಬವರ ವಿರುದ್ಧ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಕೈಗೆತ್ತಿಕೊಂಡಿದ್ದಾರೆ.

ನಕಲಿ ಲೆಟರ್ ಹೆಡರ್ ಸೃಷ್ಟಿಸಿ ಮುಖ್ಯಮಂತ್ರಿ ಕಚೇರಿಯಿಂದ ಲೋಕೋಪಯೋಗಿ ಸಚಿವರಿಗೆ ಕಡತವೊಂದನ್ನು ಕಳುಹಿಸಲಾಗಿದೆ. ಈ ಕಡತದಲ್ಲಿ ರಾಜೇಂದ್ರ ಹೆಸರಿನಲ್ಲಿ ಸಹಿ ಹಾಕಲಾಗಿದ್ದು, ಅಂಕಿತ್ ಎಂಬಾತನಿಗೆ ಇಲಾಖೆಯಲ್ಲಿ ತಾತ್ಕಾಲಿಕ ಕೆಲಸ ನೀಡುವಂತೆ ಉಲ್ಲೇಖಿಸಲಾಗಿದೆ.

ಆದರೆ ಮುಖ್ಯಮಂತ್ರಿಗಳ ಕಚೇರಿಯಲ್ಲಿ ರಾಜೇಂದ್ರ ಎಂಬ ವ್ಯಕ್ತಿಯೇ ಇಲ್ಲ. ಈ ಹಿನ್ನೆಲೆ ಸಿಎಂ ಆಪ್ತ ಕಾರ್ಯದರ್ಶಿ ಡಾ.ವೆಂಕಟೇಶಯ್ಯ ಅವರು ವಿಧಾನಸೌಧ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

LEAVE A REPLY

Please enter your comment!
Please enter your name here