Home Uncategorized ಮುಖ್ಯಮಂತ್ರಿ ಹುದ್ದೆಗೆ ಫೈಟ್: ಸಿದ್ದರಾಮಯ್ಯಗೆ ಶಾಸಕರ ಬೆಂಬಲ, ಸೋನಿಯಾ ಗಾಂಧಿ ಮೇಲೆ ಡಿಕೆ ಶಿವಕುಮಾರ್‌ಗೆ ಭರವಸೆ

ಮುಖ್ಯಮಂತ್ರಿ ಹುದ್ದೆಗೆ ಫೈಟ್: ಸಿದ್ದರಾಮಯ್ಯಗೆ ಶಾಸಕರ ಬೆಂಬಲ, ಸೋನಿಯಾ ಗಾಂಧಿ ಮೇಲೆ ಡಿಕೆ ಶಿವಕುಮಾರ್‌ಗೆ ಭರವಸೆ

54
0

ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಹುದ್ದೆಯ ಪೈಪೋಟಿ ತೀವ್ರಗೊಳ್ಳುತ್ತಿದ್ದಂತೆಯೇ, ಬಹುತೇಕ ಶಾಸಕರು ಹಿರಿಯ ನಾಯಕ ಸಿದ್ದರಾಮಯ್ಯ ಅವರಿಗೆ ಉನ್ನತ ಹುದ್ದೆ ವಹಿಸಲು ಇಚ್ಛೆ ವ್ಯಕ್ತಪಡಿಸಿದ್ದಾರೆ ಎಂದು ಕಾಂಗ್ರೆಸ್ ಪಕ್ಷದ ಮೂಲಗಳು ಖಚಿತಪಡಿಸಿವೆ. ಬೆಂಗಳೂರು: ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಹುದ್ದೆಯ ಪೈಪೋಟಿ ತೀವ್ರಗೊಳ್ಳುತ್ತಿದ್ದಂತೆಯೇ, ಬಹುತೇಕ ಶಾಸಕರು ಹಿರಿಯ ನಾಯಕ ಸಿದ್ದರಾಮಯ್ಯ ಅವರಿಗೆ ಉನ್ನತ ಹುದ್ದೆ ವಹಿಸಲು ಇಚ್ಛೆ ವ್ಯಕ್ತಪಡಿಸಿದ್ದಾರೆ ಎಂದು ಕಾಂಗ್ರೆಸ್ ಪಕ್ಷದ ಮೂಲಗಳು ಖಚಿತಪಡಿಸಿವೆ.

ಮೂಲಗಳ ಪ್ರಕಾರ, ಸಿದ್ದರಾಮಯ್ಯ ಅವರಿಗೆ 80ಕ್ಕೂ ಹೆಚ್ಚು ಶಾಸಕರ ಬೆಂಬಲವಿದೆ ಎನ್ನಲಾಗಿದೆ.

ಶಾಸಕರ ಬೆಂಬಲ ಹೊಂದಿರುವ ಅಭ್ಯರ್ಥಿಯನ್ನೇ ಮುಖ್ಯಮಂತ್ರಿಯನ್ನಾಗಿ ಮಾಡಲು ಮೊದಲಿನಿಂದಲೂ ಸ್ಪಷ್ಟನೆ ನೀಡಿದ್ದ ಪಕ್ಷದ ಹೈಕಮಾಂಡ್‌ಗೆ ಇದೀಗ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಕೂಡ ಮುಖ್ಯಮಂತ್ರಿ ಹುದ್ದೆಯ ಆಕಾಂಕ್ಷಿಯಾಗಿರುವುದು ಸಂಕಷ್ಟ ಉಂಟಾಗಿದೆ.

ಸೋಮವಾರ ಸೋನಿಯಾ ಗಾಂಧಿ ಅವರನ್ನು ಭೇಟಿಯಾಗಬೇಕಿದ್ದ ಶಿವಕುಮಾರ್ ಅವರು ಅನಾರೋಗ್ಯದ ಕಾರಣ ನೀಡಿ ದೆಹಲಿ ಭೇಟಿಯನ್ನು ರದ್ದುಗೊಳಿಸಿದ್ದರು. ಮಂಗಳವಾರ ದೆಹಲಿ ತಲುಪಿ ಉನ್ನತ ಮಟ್ಟದ ಸಭೆಯಲ್ಲಿ ಭಾಗವಹಿಸಿ ಮುಖ್ಯಮಂತ್ರಿ ಅಭ್ಯರ್ಥಿಯನ್ನು ನಿರ್ಧರಿಸಲಿದ್ದಾರೆ.

ಇದನ್ನೂ ಓದಿ: ಸಿಎಂ ಕುರ್ಚಿಗೆ ಸಿದ್ದು v/s ಡಿಕೆಶಿ ಫೈಟ್; ಅಧಿಕಾರ ಹಂಚಿಕೆಗೆ ಸಿದ್ದರಾಮಯ್ಯ ಒಪ್ಪಿಗೆ, ಯಾರಿಗೆ ಎಷ್ಟು ವರ್ಷ ಪಟ್ಟ?

ಮೇ 10 ರಂದು ನಡೆದ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಭರ್ಜರಿ ಗೆಲುವು ಸಾಧಿಸಿದ ನಂತರ ಶಿವಕುಮಾರ್ ಭಾವುಕರಾಗಿ ಕಣ್ಣೀರು ಹಾಕಿದ್ದರು. ಸೋನಿಯಾ ಗಾಂಧಿಗೆ ಕೊಟ್ಟ ಮಾತನ್ನು ಉಳಿಸಿಕೊಂಡಿದ್ದೇನೆ ಎಂದು ಸಮರ್ಥಿಸಿಕೊಂಡರು.

ಸೋನಿಯಾ ಗಾಂಧಿಯನ್ನು ಶಿವಕುಮಾರ್ ಅವರು ತಾಯಿ ಮತ್ತು ಅಮ್ಮ ಎಂದು ಸಂಬೋಧಿಸುತ್ತಿದ್ದಾರೆ. ಅವರು 135 ಶಾಸಕರನ್ನು ಕಾಂಗ್ರೆಸ್‌ಗೆ ಅರ್ಪಿಸಿದ್ದು, ಈಗ ಮುಖ್ಯಮಂತ್ರಿ ಯಾರಾಗಬೇಕು ಎಂಬುದನ್ನು ಪಕ್ಷವೇ ನಿರ್ಧರಿಸಲಿದೆ ಎಂದಿದ್ದರು.

ಸಾಮಾನ್ಯವಾಗಿ, ಕೆಪಿಸಿಸಿ ಅಧ್ಯಕ್ಷರಾಗಿದ್ದವರು ಯಾವುದೇ ತೊಂದರೆಗಳಿಲ್ಲದೆ ಮುಖ್ಯಮಂತ್ರಿಯಾಗುತ್ತಿದ್ದರು.

ಇದನ್ನೂ ಓದಿ: ಕಾಂಗ್ರೆಸ್ ಹೈಕಮಾಂಡ್ ಬುಲಾವ್: ಇಂದು ಡಿಕೆ ಶಿವಕುಮಾರ್ ದೆಹಲಿ ಪ್ರವಾಸ; ಮುಂದಿನ ಸಿಎಂ ಸಸ್ಪೆನ್ಸ್ ಗೆ ತೆರೆ?

ಇದೇ ವೇಳೆ ಬೆಂಗಳೂರು ಗ್ರಾಮಾಂತರ ಸಂಸದ ಹಾಗೂ ಶಿವಕುಮಾರ್ ಅವರ ಸಹೋದರ ಡಿಕೆ ಸುರೇಶ್ ಅವರು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿ ಮಾಡಿ ತಮ್ಮ ಸಹೋದರ ಮುಖ್ಯಮಂತ್ರಿಯಾಗಬೇಕು ಎಂದು ಒತ್ತಾಯಿಸಿದ್ದಾರೆ.

ಮಂಗಳವಾರದ ಅಂತ್ಯದೊಳಗೆ ಮುಖ್ಯಮಂತ್ರಿ ಯಾರೆಂಬ ಘೋಷಣೆ ಹೊರಬೀಳಲಿದ್ದು, ಬುಧವಾರ ಅಥವಾ ಗುರುವಾರದೊಳಗೆ ನೂತನ ಮುಖ್ಯಮಂತ್ರಿ ಅಧಿಕಾರ ಸ್ವೀಕರಿಸಲಿದ್ದಾರೆ ಎಂದು ಮೂಲಗಳು ವಿವರಿಸಿವೆ.

LEAVE A REPLY

Please enter your comment!
Please enter your name here