Home Uncategorized ಮುಸ್ಲಿಮರಿಗೆ ಶೇ. 4 ರಷ್ಟು ಮೀಸಲಾತಿ ರದ್ದು, ಕರ್ನಾಟಕ ಸರ್ಕಾರದ ನಿರ್ಧಾರ ಮೇಲ್ನೋಟಕ್ಕೆ ದೋಷಪೂರಿತ- ಸುಪ್ರೀಂಕೋರ್ಟ್ 

ಮುಸ್ಲಿಮರಿಗೆ ಶೇ. 4 ರಷ್ಟು ಮೀಸಲಾತಿ ರದ್ದು, ಕರ್ನಾಟಕ ಸರ್ಕಾರದ ನಿರ್ಧಾರ ಮೇಲ್ನೋಟಕ್ಕೆ ದೋಷಪೂರಿತ- ಸುಪ್ರೀಂಕೋರ್ಟ್ 

24
0

ಲಿಂಗಾಯತರು ಮತ್ತು ಒಕ್ಕಲಿಗರಿಗೆ ಸರ್ಕಾರಿ ಉದ್ಯೋಗ ಮತ್ತು ಶಿಕ್ಷಣ ಸಂಸ್ಥೆಗಳಲ್ಲಿ ತಲಾ ಶೇಕಡಾ ಎರಡರಷ್ಟು ಹೆಚ್ಚಿಸಿ, ಮುಸ್ಲಿಮರಿಗೆ ಶೇ. 4 ರಷ್ಟು ಮೀಸಲಾತಿಯನ್ನು ರದ್ದುಗೊಳಿಸುವ ಕರ್ನಾಟಕ ಸರ್ಕಾರದ ನಿರ್ಧಾರ ಬುಡವನ್ನೇ ಅಲುಗಾಡಿಸುವಂತಹದ್ದಾಗಿದ್ದು,  ಮೇಲ್ನೋಟಕ್ಕೆ ದೋಷಪೂರಿತವಾಗಿದೆ ಎಂದು ಸುಪ್ರೀಂಕೋರ್ಟ್ ಗುರುವಾರ ಹೇಳಿದೆ. ನವದೆಹಲಿ: ಲಿಂಗಾಯತರು ಮತ್ತು ಒಕ್ಕಲಿಗರಿಗೆ ಸರ್ಕಾರಿ ಉದ್ಯೋಗ ಮತ್ತು ಶಿಕ್ಷಣ ಸಂಸ್ಥೆಗಳಲ್ಲಿ ತಲಾ ಶೇಕಡಾ ಎರಡರಷ್ಟು ಹೆಚ್ಚಿಸಿ, ಮುಸ್ಲಿಮರಿಗೆ ಶೇ. 4 ರಷ್ಟು ಮೀಸಲಾತಿಯನ್ನು ರದ್ದುಗೊಳಿಸುವ ಕರ್ನಾಟಕ ಸರ್ಕಾರದ ನಿರ್ಧಾರ ಬುಡವನ್ನೇ ಅಲುಗಾಡಿಸುವಂತಹದ್ದಾಗಿದ್ದು, ಮೇಲ್ನೋಟಕ್ಕೆ ದೋಷಪೂರಿತವಾಗಿದೆ ಎಂದು ಸುಪ್ರೀಂಕೋರ್ಟ್ ಗುರುವಾರ ಹೇಳಿದೆ.

ನ್ಯಾಯಾಲಯದ ಮುಂದೆ ಮಂಡಿಸಲಾದ ಆಧಾರಗಳಿಂದ ಕರ್ನಾಟಕ ಸರ್ಕಾರದ ನಿರ್ಧಾರ ಸಂಪೂರ್ಣವಾಗಿ ತಪ್ಪಾದ ಊಹೆಯನ್ನು ಆಧರಿಸಿದೆ ಎಂಬುದನ್ನು ತೋರುತ್ತದೆ ಎಂದು ನ್ಯಾಯಮೂರ್ತಿಗಳಾದ ಕೆಎಂ ಜೋಸೆಫ್ ಮತ್ತು ಬಿವಿ ನಾಗರತ್ನ ಅವರನ್ನೊಳಗೊಂಡ ನ್ಯಾಯಪೀಠ ಅಭಿಪ್ರಾಯಪಟ್ಟಿದೆ. 

ಇದನ್ನೂ ಓದಿ: ಮುಸ್ಲಿಮರ ಶೇ 4ರಷ್ಟು ಮೀಸಲಾತಿ ರದ್ದು: ಸರ್ಕಾರದ ನಿರ್ಧಾರದ ಬಗ್ಗೆ ತಜ್ಞರು ಏನಂತಾರೆ?

ಕರ್ನಾಟಕದ ಮುಸ್ಲಿಂ ಸಮುದಾಯದ ಸದಸ್ಯರ ಪರ ವಾದ ಮಂಡಿಸಿದ ಹಿರಿಯ ವಕೀಲರಾದ ಕಪಿಲ್ ಸಿಬಲ್, ದುಷ್ಯಂತ್ ದವೆ ಮತ್ತು ಗೋಪಾಲ್ ಶಂಕರನಾರಾಯಣನ್ , ಮುಸ್ಲಿಮರ ಕೋಟಾ ರದ್ದುಗೊಳಿಸಲು ಯಾವುದೇ ಅಧ್ಯಯನ ನಡೆಸಿಲ್ಲ ಮತ್ತು ಯಾವುದೇ ಪ್ರಾಯೋಗಿಕ ಮಾಹಿತಿಯು ಸರ್ಕಾರದ ಬಳಿ ಲಭ್ಯವಿಲ್ಲ ಎಂದು ಹೇಳಿದರು.

ಕರ್ನಾಟಕದ ಪರ ವಾದ ಮಂಡಿಸಿದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ, ಅರ್ಜಿಗಳಿಗೆ ಉತ್ತರ ಸಲ್ಲಿಸಲು ಸ್ವಲ್ಪ ಕಾಲಾವಕಾಶ ಕೋರಿದರು ಮತ್ತು ಅರ್ಜಿದಾರರು ಪ್ರಶ್ನಿಸಿರುವ ಮಾರ್ಚ್ 24 ರ ಸರ್ಕಾರಿ ಆದೇಶದ ಆಧಾರದ ಮೇಲೆ ಯಾವುದೇ ನೇಮಕಾತಿ ಮತ್ತು ಪ್ರವೇಶಗಳನ್ನು ಮಾಡಲಾಗುವುದಿಲ್ಲ ಎಂದು ಪೀಠಕ್ಕೆ ಭರವಸೆ ನೀಡಿದರು.

ಇದನ್ನೂ ಓದಿ: ಸರ್ಕಾರದ ಮೀಸಲಾತಿ ಕ್ರಮದಿಂದ ಮುಸ್ಲಿಂ ಹೆಣ್ಣು ಮಕ್ಕಳ ಶಿಕ್ಷಣಕ್ಕೆ ಹೊಡೆತ: ಶಿಕ್ಷಣ ತಜ್ಞರು

ಒಕ್ಕಲಿಗ ಮತ್ತು ಲಿಂಗಾಯತ ಸಮುದಾಯದವರ ಪರ ವಾದ ಮಂಡಿಸಿದ ಹಿರಿಯ ವಕೀಲ ಮುಕುಲ್ ರೋಹಟಗಿ, ಅರ್ಜಿಗಳಿಗೆ ಪ್ರತಿಕ್ರಿಯೆ ನೀಡಲು ಅವಕಾಶ ನೀಡದೆ ಯಾವುದೇ ಮಧ್ಯಂತರ ಆದೇಶ ನೀಡಬಾರದು ಎಂದರು.

ಹೆಚ್ಚಿನ ವಿಚಾರಣೆಗಾಗಿ ಏಪ್ರಿಲ್ 18ಕ್ಕೆ ಈ ವಿಷಯವನ್ನು ನ್ಯಾಯಪೀಠ ಮುಂದೂಡಿತ್ತು ಮತ್ತು ತಮ್ಮ ಪ್ರತಿಕ್ರಿಯೆ ಸಲ್ಲಿಸಲು ಮೆಹ್ತಾ ಮತ್ತು ರೋಹಟಗಿಗೆ ಸೂಚಿಸಿತು. ಮೇ 10 ರಂದು ನಡೆಯಲಿರುವ ರಾಜ್ಯ ವಿಧಾನಸಭಾ ಚುನಾವಣೆಗೆ ಮೊದಲು ಸರ್ಕಾರಿ ಉದ್ಯೋಗ ಮತ್ತು ಶಿಕ್ಷಣ ಸಂಸ್ಥೆಗಳಲ್ಲಿ ಮುಸ್ಲಿಮರಿಗೆ ಶೇಕಡಾ 4 ರಷ್ಟು ಮೀಸಲಾತಿಯನ್ನು ರದ್ದುಗೊಳಿಸಲು ರಾಜ್ಯದ ಬಸವರಾಜ ಬೊಮ್ಮಾಯಿ ಸರ್ಕಾರ ನಿರ್ಧರಿಸಿದೆ.

LEAVE A REPLY

Please enter your comment!
Please enter your name here