ಚಿಕ್ಕಮಗಳೂರು, ಜ.1: ಮೂಡಿಗೆರೆ ಬಿಇಒ ಕಚೇರಿಯಲ್ಲಿ ಮ್ಯಾನೇಜರ್ ಸೋಮವಾರ ಆತ್ಮಹತ್ಯೆ ಮಾಡಿಕೊಂಡಿರುವುದು ವರದಿಯಾಗಿದೆ.
ಮೂಡಿಗೆರೆ ಬಿಇಒ ಕಚೇರಿಯಲ್ಲಿ ಮ್ಯಾನೇಜರ್ ನಿಂಗನಾಯಕ್(57) ಎಂಬವರು ಡೆತ್ ನೋಟ್ ಬರೆದಿಟ್ಟು ಫ್ಯಾನಿಗೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಕಡೂರು ಮೂಲದ ಮೃತ ನಿಂಗನಾಯಕ್ ಕಳೆದ ಎರಡು ವರ್ಷಗಳಿಂದ ಮೂಡಿಗೆರೆ ಬಿಇಒ ಕಚೇರಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು.
ಮೂಡಿಗೆರೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.