Home Uncategorized ಮೆಟ್ರೋ ಪಿಲ್ಲರ್ ಕುಸಿತ ದುರಂತ ಬಳಿಕ ಎಚ್ಚೆತ್ತ ಬಿಎಂಆರ್'ಸಿಎಲ್: ನಿರ್ಮಾಣ ಸ್ಥಳಗಳಿಗೆ ಹೊಸ ಮಾರ್ಗಸೂಚಿ ಹೊರಡಿಸಲು...

ಮೆಟ್ರೋ ಪಿಲ್ಲರ್ ಕುಸಿತ ದುರಂತ ಬಳಿಕ ಎಚ್ಚೆತ್ತ ಬಿಎಂಆರ್'ಸಿಎಲ್: ನಿರ್ಮಾಣ ಸ್ಥಳಗಳಿಗೆ ಹೊಸ ಮಾರ್ಗಸೂಚಿ ಹೊರಡಿಸಲು ಸಿದ್ಧತೆ!

31
0
Advertisement
bengaluru

ಎಚ್‌ಬಿಆರ್‌ ಲೇಔಟ್‌ನಲ್ಲಿ ಹೊರ ವರ್ತುಲ ರಸ್ತೆಯಲ್ಲಿ ಮೆಟ್ರೋ ಪಿಲ್ಲರ್ ಕುಸಿದುಬಿದ್ದು ತಾಯಿ ಮತ್ತು ಮಗು ದುರ್ಮರಣವನ್ನಪ್ಪಿದ ಘಟನೆ ಬಳಿಕ ಎಚ್ಚೆತ್ತುಕೊಂಡಿರುವ ಬಿಎಂಆರ್’ಸಿಎಲ್ ಅಧಿಕಾರಿಗಳು ಇದೀಗ ನಿರ್ಮಾಣ ಸ್ಥಳಗಳಿಗೆ ಮಾರ್ಗಸೂಚಿ ಹೊರಡಿಸಲು ಸಿದ್ಧತೆಗಳನ್ನು ನಡೆಸುತ್ತಿದ್ದಾರೆಂದು ತಿಳಿದುಬಂದಿದೆ. ಬೆಂಗಳೂರು: ಎಚ್‌ಬಿಆರ್‌ ಲೇಔಟ್‌ನಲ್ಲಿ ಹೊರ ವರ್ತುಲ ರಸ್ತೆಯಲ್ಲಿ ಮೆಟ್ರೋ ಪಿಲ್ಲರ್ ಕುಸಿದುಬಿದ್ದು ತಾಯಿ ಮತ್ತು ಮಗು ದುರ್ಮರಣವನ್ನಪ್ಪಿದ ಘಟನೆ ಬಳಿಕ ಎಚ್ಚೆತ್ತುಕೊಂಡಿರುವ ಬಿಎಂಆರ್’ಸಿಎಲ್ ಅಧಿಕಾರಿಗಳು ಇದೀಗ ನಿರ್ಮಾಣ ಸ್ಥಳಗಳಿಗೆ ಮಾರ್ಗಸೂಚಿ ಹೊರಡಿಸಲು ಸಿದ್ಧತೆಗಳನ್ನು ನಡೆಸುತ್ತಿದ್ದಾರೆಂದು ತಿಳಿದುಬಂದಿದೆ.

ಈ ಕುರಿತು ಮಾಹಿತಿ ನೀಡಿರುವ ಬಿಎಂಆರ್‌ಸಿಎಲ್ ವ್ಯವಸ್ಥಾಪಕ ನಿರ್ದೇಶಕ ಅಂಜುಮ್ ಪರ್ವೇಜ್ ಅವರು, ಎಚ್‌ಬಿಆರ್ ಲೇಔಟ್‌ನ ಹೊರ ವರ್ತುಲ ರಸ್ತೆಯಲ್ಲಿ ಪಿಲ್ಲರ್‌ಗೆ ತಯಾರಾಗಿದ್ದ ಕಬ್ಬಿಣದ ಸರಳುಗಳ ಎತ್ತರವನ್ನು ಕಡಿಮೆ ಮಾಡಲಾಗಿದೆ. ಈ ರಚನೆಗಳು 10 ಮೀ ಮೀರಬಾರದು ಸೂಚನೆ ನೀಡಲಾಗಿದೆ ಎಂದು ಹೇಳಿದ್ದಾರೆ. ಆಲ್ಲದೆ, ನಿರ್ಮಾಣ ಸ್ಥಳಗಳಿಗೆ ಹೊಸ ಮಾರ್ಗಸೂಚಿಯನ್ನು ರೂಪಿಸಿತ್ತಿರುವುದಾಗಿ ತಿಳಿಸಿದ್ದಾರೆ.

ಈ ನಡುವೆ ಪ್ರಕರಣಕ್ಕೆ ಸಂಬಂಧಿಸಿದಂತೆ ಗೋವಿಂದಪುರ ಪೊಲೀಸರು ಸ್ಥಳದಲ್ಲಿರುವ ಬಿಎಂಆರ್‌ಸಿಎಲ್ ಕಚೇರಿಗಳಿಗೆ ಭೇಟಿ ನೀಡಿ ಎಂಜಿನಿಯರ್‌ಗಳ ಹೇಳಿಕೆಗಳನ್ನು ದಾಖಲಿಸಿಕೊಂಡಿದ್ದಾರೆ.

ಅಪಘಾತದ ಸ್ಥಳದಲ್ಲಿ ತಾಂತ್ರಿಕ ತನಿಖೆಗಾಗಿ ಪೊಲೀಸರು ಸ್ವತಂತ್ರ ಸಂಸ್ಥೆಗಳ ಸಹಾಯವನ್ನು ತೆಗೆದುಕೊಳ್ಳುವ ಸಾಧ್ಯತೆಗಳಿವೆ ಎಂದು ಮೂಲಗಳು ತಿಳಿಸಿವೆ.

bengaluru bengaluru

bengaluru

LEAVE A REPLY

Please enter your comment!
Please enter your name here