ಕೋಲಾರ ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ಉಪ್ಪುಕುಂಟೆ ಗ್ರಾಮದಲ್ಲಿ ಕೆಎಸ್ಆರ್ಟಿಸಿ ಬಸ್ ಕಂಡಕ್ಟರ್ ಒಬ್ಬರು ಆತ್ಮಹತ್ಯೆ ಮಾಡಿಕೊಂಡ ದಾರುಣ ಘಟನೆ ಶುಕ್ರವಾರ ನಡೆದಿದೆ. ಕೋಲಾರ: ಕೋಲಾರ ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ಉಪ್ಪುಕುಂಟೆ ಗ್ರಾಮದಲ್ಲಿ ಕೆಎಸ್ಆರ್ಟಿಸಿ ಬಸ್ ಕಂಡಕ್ಟರ್ ಒಬ್ಬರು ಆತ್ಮಹತ್ಯೆ ಮಾಡಿಕೊಂಡ ದಾರುಣ ಘಟನೆ ಶುಕ್ರವಾರ ನಡೆದಿದೆ.
ಆತ್ಮಹತ್ಯೆಗೆ ಶರಣಾದ ಕಂಡಕ್ಟರ್ ಅನ್ನು ಉಪ್ಪುಕುಂಟೆ ಗ್ರಾಮದ ಸೋಮಾಚಾರಿ(50) ಎಂದು ಗುರುತಿಸಲಾಗಿದ್ದು. ಮೃತ ಕಂಡಕ್ಟರ್ ಇತ್ತೀಚೆಗೆ ಪೆರಾಲಿಸಿಸ್ ಕಾಯಿಲೆಗೆ ತುತ್ತಾಗಿದ್ದರು. ಈ ಮಧ್ಯೆ ಕೆಲಸದ ವೇಳೆ ಶ್ರೀನಿವಾಸಪುರ ಡಿಪೋ ಮ್ಯಾನೇಜರ್ ವೆಂಕಟೇಶ್ ಎಂಬುವವರು ಉದ್ದೇಶಪೂರ್ವಕವಾಗಿ ಕಿರುಕುಳ ನೀಡುತ್ತಿದ್ದರು ಎಂಬ ಆರೋಪ ಕೇಳಿಬಂದಿದೆ.
ಇದನ್ನು ಓದಿ: ಚಾಲಕ ಆತ್ಮಹತ್ಯೆ ಯತ್ನ ಪ್ರಕರಣ: ನಾಗಮಂಗಲ ಮಾಜಿ ಶಾಸಕರ ವಿರುದ್ಧ ಕಾನೂನು ಕ್ರಮಕ್ಕೆ ಸಿಐಡಿ ಶಿಫಾರಸು!
ಹಿರಿಯ ಅಧಿಕಾರಿಯ ಕಿರುಕುಳದಿಂದ ಮಾನಸಿಕವಾಗಿ ನೊಂದಿದ್ದ ಸೋಮಾಚಾರಿ ಅವರು, ಇಂದು ಬೆಳಗಿನ ಜಾವ ಅವರ ತೋಟದಲ್ಲಿಯೇ ಆತ್ಮಹತ್ಯೆಗೆ ಶರಣಾಗಿದ್ದಾರೆ.
ಈ ಸಂಬಂಧ ಶ್ರೀನಿವಾಸಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.