Home ಕರ್ನಾಟಕ ಮೇ 9ರಿಂದ ಅರಸ್ತಾನ ಉರೂಸ್ ಕಾರ್ಯಕ್ರಮ

ಮೇ 9ರಿಂದ ಅರಸ್ತಾನ ಉರೂಸ್ ಕಾರ್ಯಕ್ರಮ

35
0

ಮಂಗಳೂರು, ಮೇ 8: ಪಾವೂರು ಗ್ರಾಮದ ಮಲಾರ್ ಅರಸ್ತಾನದ ಅರ್ರಿಫಾಯಿಯಾ ನುಸ್ರತುಲ್ ಮುಸ್ಲಿಮೀನ್ ಅಸೋಸಿಯೇಶನ್‌ನ 48ನೆ ವಾರ್ಷಿಕೋತ್ಸವದ ಅಂಗವಾಗಿ ಮತಪ್ರವಚನ ಮತ್ತು ಅರಸ್ತಾನ ದರ್ಗಾ ಉರೂಸ್ ಕಾರ್ಯಕ್ರಮವು ಮೇ 9ರಿಂದ 12ರವರೆಗೆ ನಡೆಯಲಿದೆ.

ಮೇ 9ರಂದು ದ.ಕ.ಜಿಲ್ಲಾ ಖಾಝಿ ಅಲ್ಹಾಜ್ ತ್ವಾಕಾ ಅಹ್ಮದ್ ಮುಸ್ಲಿಯಾರ್ ಕಾರ್ಯಕ್ರಮ ಉದ್ಘಾಟಿಸುವರು. ಸಮಸ್ತ ಕೇರಳ ಜಂ ಇಯ್ಯತುಲ್ ಉಲಮಾ ಅಧ್ಯಕ್ಷ ಸೈಯ್ಯದುಲ್ ಉಲಮಾ ಅಸ್ಸಯ್ಯಿದ್ ಮುಹಮ್ಮದ್ ಜಿಫ್ರಿ ಮುತ್ತುಕೋಯ ತಂಳ್ ದುಆಗೈಯುವರು. ಅಲ್ ಮುಬಾರಕ್ ಜುಮಾ ಮಸೀದಿಯ ಅಧ್ಯಕ್ಷ ಎಂಪಿ ಅಬ್ದುಲ್ ರಹ್ಮಾನ್ ಅಧ್ಯಕ್ಷತೆ ವಹಿಸಲಿ ದ್ದಾರೆ. ಅತಿಥಿಗಳಾಗಿ ಮಸೀದಿಯ ಮಾಜಿ ಅಧ್ಯಕ್ಷರಾದ ಮುಹಮ್ಮದ್ ಮೋನು, ಹಂಝ ಮಲಾರ್, ಅಲ್ತಾಫ್ ಅಹ್ಮದ್ ಭಾಗವಹಿಸಲಿದ್ದಾರೆ ಎಂದು ಪ್ರಕಟನೆ ತಿಳಿಸಿದೆ.

LEAVE A REPLY

Please enter your comment!
Please enter your name here