ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೋಮವಾರ ರಾಜ್ಯಕ್ಕೆ ಭೇಟಿ ನೀಡಿದ್ದು, ಮೈಸೂರಿನ ಚಾಮುಂಡೇಶ್ವರಿ ದೇವಿ ದೇವಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸಿದರು. ಮೈಸೂರು: ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೋಮವಾರ ರಾಜ್ಯಕ್ಕೆ ಭೇಟಿ ನೀಡಿದ್ದು, ಮೈಸೂರಿನ ಚಾಮುಂಡೇಶ್ವರಿ ದೇವಿ ದೇವಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸಿದರು.
ಇಂದಿನಿಂದ ಅಮಿತ್ ಶಾ ಅವರು ಮೂರು ದಿನಗಳ ಕಾಲ ರಾಜ್ಯದಲ್ಲಿ ಪ್ರವಾಸ ಆರಂಭಿಸಿದ್ದಾರೆ. ನಂತರ ಹಾಸನದಲ್ಲಿ ರೋಡ್ ಶೋ ನಡೆಸಲಿದ್ದಾರೆ.
#WATCH Union Home Minister Amit Shah offers prayers at Sri Chamundeshwari Temple in Karnataka’s Mysuru pic.twitter.com/1Y8TCBmNvo
— ANI (@ANI) April 24, 2023
ಭಾರತೀಯ ಜನತಾ ಪಕ್ಷ ಅಧಿಕಾರದಲ್ಲಿರುವ ದಕ್ಷಿಣದ ಏಕೈಕ ರಾಜ್ಯವಾದ ಕರ್ನಾಟಕದಲ್ಲಿ ವಿಧಾನಸಭೆ ಚುನಾವಣೆಗೆ ಮುನ್ನ, ಸತತ ಎರಡನೇ ಅವಧಿಗೆ ಚುನಾವಣಾ ಪ್ರಚಾರಕ್ಕಾಗಿ ಅಮಿತ್ ಶಾ ರಾಜ್ಯಕ್ಕೆ ಆಗಮಿಸಿದ್ದಾರೆ.
#WATCH Union Home Minister Amit Shah offers prayers at Sri Chamundeshwari Temple in Karnataka’s Mysuru pic.twitter.com/0PagLa05jS
— ANI (@ANI) April 24, 2023
ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ ಇಂದಿನಿಂದ ಮೂರು ದಿನಗಳ ಕರ್ನಾಟಕ ಪ್ರವಾಸ ಕೈಗೊಳ್ಳಲಿದ್ದಾರೆ. ಚಿಕ್ಕಬಳ್ಳಾಪುರ ಜಿಲ್ಲೆ ಸಿಡ್ಲಘಟ್ಟದಲ್ಲಿ ಪಥಸಂಚಲನದಲ್ಲಿ ಭಾಗವಹಿಸಲಿದ್ದಾರೆ. ಅವರು ಉತ್ತರ ಕನ್ನಡ ಜಿಲ್ಲೆಯ ಶಿರಸಿಯ ದೇವಸ್ಥಾನಕ್ಕೂ ಭೇಟಿ ನೀಡಲಿದ್ದಾರೆ ಮತ್ತು ಹಲವಾರು ಸಾರ್ವಜನಿಕ ಸಭೆಗಳನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.
ಏಪ್ರಿಲ್ 29 ರಂದು ಪ್ರಧಾನಿ ನರೇಂದ್ರ ಮೋದಿ ರಾಜ್ಯಕ್ಕೆ ಭೇಟಿ ನೀಡುವುದರೊಂದಿಗೆ ಪಕ್ಷದ ಬೃಹತ್ ಚುನಾವಣಾ ಪ್ರಚಾರಕ್ಕೆ ಚಾಲನೆ ದೊರೆಯುವ ಸಾಧ್ಯತೆ ಇದೆ.