ಮೈಸೂರು ಜಿಲ್ಲೆಯ ಸರಗೂರು ತಾಲೂಕಿನ ಹಿರೇಹಳ್ಳಿ ಬಳಿ ಕಾಡಾನೆ ದಾಳಿಯಿಂದ ರೈತ ಮೃತಪಟ್ಟಿರುವ ದಾರುಣ ಘಟನೆ ಶುಕ್ರವಾರ ನಡೆದಿದೆ. ಮೈಸೂರು: ಮೈಸೂರು ಜಿಲ್ಲೆಯ ಸರಗೂರು ತಾಲೂಕಿನ ಹಿರೇಹಳ್ಳಿ ಬಳಿ ಕಾಡಾನೆ ದಾಳಿಯಿಂದ ರೈತ ಮೃತಪಟ್ಟಿರುವ ದಾರುಣ ಘಟನೆ ಶುಕ್ರವಾರ ನಡೆದಿದೆ.
ಮೃತ ರೈತನನ್ನು ರವಿ(42) ಎಂದು ಗುರುತಿಸಲಾಗಿದ್ದು, ಬೆಳೆ ಕಾಯಲು ಜಮೀನಿಗೆ ಹೋಗಿದ್ದಾಗ ಕಾಡಾನೆ ದಾಳಿ ಮಾಡಿದೆ.
ಇದನ್ನು ಓದಿ: ಬನ್ನೇರುಘಟ್ಟ: ಆನೆ ತುಳಿತಕ್ಕೆ ಬುಡಕಟ್ಟು ಸಮುದಾಯದ ಮಹಿಳೆ ಬಲಿ
ಸ್ಥಳಕ್ಕೆ ಅರಣ್ಯ ಅಧಿಕಾರಿಗಳ ಭೇಟಿ, ಪರಿಶೀಲನೆ ಮಾಡಿದ್ದಾರೆ. ಮೃತ ರೈತನ ಕುಟುಂಬಕ್ಕೆ ಇಲಾಖೆಯಿಂದ ಸೂಕ್ತ ಪರಿಹಾರ ನೀಡುವುದಾಗಿ ಭರವಸೆ ನೀಡಿದ್ದಾರೆ.
ಈ ಸಂಬಂಧ ಸರಗೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.