Home Uncategorized ಮೈಸೂರು ಜಿಲ್ಲೆಯಲ್ಲಿ ನಿಲ್ಲದ ಚಿರತೆ ಹಾವಳಿ: ಕಬ್ಬಿನ ಗದ್ದೆಗೆ ನೀರು ಬಿಡಲು ಹೋದ ವ್ಯಕ್ತಿಯ ಮೇಲೆ...

ಮೈಸೂರು ಜಿಲ್ಲೆಯಲ್ಲಿ ನಿಲ್ಲದ ಚಿರತೆ ಹಾವಳಿ: ಕಬ್ಬಿನ ಗದ್ದೆಗೆ ನೀರು ಬಿಡಲು ಹೋದ ವ್ಯಕ್ತಿಯ ಮೇಲೆ ದಾಳಿ

17
0
Advertisement
bengaluru

ಮೈಸೂರು: ಜಿಲ್ಲೆಯ ಟಿ.ನರಸೀಪುರ ತಾಲೂಕಿನಲ್ಲಿ ನುಗ್ಗಳ್ಳಿಕೊಪ್ಪಲು ಗ್ರಾಮದ ಬಳಿ ರೈತನ ಮೇಲೆ ಚಿರತೆ (Leopard) ದಾಳಿ ಮಾಡಿರುವಂತಹ ಘಟನೆ ನಡೆದಿದೆ. ರೈತ ಸತೀಶ್ ಚಿರತೆ ದಾಳಿಗೊಳಗಾದವರು. ಅಲ್ಲಿಗೆ ಜಿಲ್ಲೆಯಲ್ಲಿ ಚಿರತೆ ಹಾವಳಿ ಮುಂದುವರೆದಂತ್ತಾಗಿದೆ. ಕಬ್ಬಿನ ಗದ್ದೆಗೆ ನೀರು ಹಾಯಿಸಲು ತೆರಳಿದ್ದ ವೇಳೆ ಏಕಾಏಕಿ ಚಿರತೆ ದಾಳಿ ಮಾಡಿದೆ. ಅದೃಷ್ಟವಶಾತ್ ಚಿರತೆಯ ಬಾಯಿಂದ ರೈತ ಸತೀಶ್ ಬಚಾವಾಗಿದ್ದಾರೆ. ಗಾಯಾಳು ಸತೀಶ್​ನನ್ನು ಗ್ರಾಮಸ್ಥರು ಆಸ್ಪತ್ರೆಗೆ ದಾಖಲಿಸಿದ್ದಾರೆ. ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳ ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ. ಅರಣ್ಯ ಇಲಾಖೆ ಅಧಿಕಾರಿಗಳ ಕಾರ್ಯವೈಖರಿಗೆ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದು, ಕೂಡಲೇ ಚಿರತೆ ಸೆರೆ ಹಿಡಿದು ಸ್ಥಳಾಂತರ ಮಾಡುವಂತೆ ರೈತರು ಆಗ್ರಹಿಸಿದ್ದಾರೆ.

2. ಗುಂಡ್ಲುಪೇಟೆ ತಾಲೂಕಿನಲ್ಲಿ ಚಿರತೆ ಹಾವಳಿ

ಚಾಮರಾಜನಗರ: ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನಲ್ಲಿ ಚಿರತೆ ಹಾವಳಿ ಕಡಿಮೆಯಾಗಿಲ್ಲ. ಕಳೆದ ಕೆಲ ದಿನಗಳ ಹಿಂದೆ ಕಿಲಗೆರೆಯಲ್ಲಿ ಕುರಿ ಮೇಲೆ ಚಿರತೆಯೊಂದು ದಾಳಿ ಮಾಡಿತ್ತು. ಇತ್ತೀಚೆಗೆ ಚಾಮರಾಜನಗರ ತಾಲೂಕಿನಲ್ಲಿರುವ ವೆಂಕಟರಮಣಸ್ವಾಮಿ ಬೆಟ್ಟದ ತಪ್ಪಲಿನಲ್ಲಿ ಚಿರತೆ ಪ್ರತ್ಯಕ್ಷಗೊಂಡಿದ್ದು, ಸಾರ್ವಜನಿಕರ ಮೊಬೈಲ್​ನಲ್ಲಿ ಚಿರತೆ ಸಂಚಾರದ ವಿಡಿಯೋ ಸೆರೆಯಾಗಿದೆ. ಹಲವು ದಿನಗಳಿಂದ ಉಪಟಳ ನೀಡುತ್ತಿರುವ ಈ ಚಿರತೆ ಅರಣ್ಯ ಇಲಾಖೆ ಸಿಬ್ಬಂದಿ ಇಟ್ಟಿರುವ ಬೋನಿಗೆ ಬೀಳದೆ ಎಲ್ಲಾ ಕಡೆಗಳಲ್ಲಿ ಓಡಾಡುತ್ತಿದ್ದು, ಇದರಿಂದಾಗಿ ಮನೆಯಿಂದ ಹೊರಬರಲು ಜನರು ಹಿಂದೇಟು ಹಾಕುತ್ತಿದ್ದಾರೆ.

ಇದನ್ನೂ ಓದಿ: ಮೈಸೂರಿನಲ್ಲಿ ಬೋನಿಗೆ ಬಿದ್ದ ಮತ್ತೊಂದು ಚಿರತೆ, ನಿಟ್ಟುಸಿರುವ ಬಿಟ್ಟ ಜನ

bengaluru bengaluru

3. ಹೊಸಪಾಳ್ಯ ಗ್ರಾಮದಲ್ಲಿ ಚಿರತೆ, ಕಾಡಂದಿ ನಂತರ ಕರಡಿ ಕಾಟ

ರಾಮನಗರ: ಹೊಸಪಾಳ್ಯ ಗ್ರಾಮದಲ್ಲಿ ಕಾಡು ಪ್ರಾಣಿಗಳ ಹಾವಳಿ ಹೆಚ್ಚಾಗಿದ್ದು, ಚಿರತೆ, ಕಾಡು ಹಂದಿ ನಂತರ ಇದೀಗ ಕರಡಿ ಕಾಟ ಆರಂಭವಾಗಿದೆ. ತಡರಾತ್ರಿ ಗ್ರಾಂಕ್ಕೆ ಕರಡಿ ಎಂಟ್ರಿ ಕೊಟ್ಟಿರುವ ದೃಶ್ಯಾವಳಿ ಸಿಸಿಕ್ಯಾಮರಾದಲ್ಲಿ ಸೆರೆಯಾಗಿದೆ. ಬೆಂಗಳೂರು ‌ದಕ್ಷಿಣ ತಾಲೂಕಿನ ಹೊಸಪಾಳ್ಯ ಗ್ರಾಮದ ರಾಮಚಂದ್ರಪ್ಪ ಎಂಬುವವರ ಮನೆ ಬಳಿ‌ ಕರಡಿ ಪ್ರತ್ಯೇಕ್ಷಗೊಂಡಿದ್ದು, ಜನರಲ್ಲಿ ಆತಂಕ ಹೆಚ್ಚಾಗಿದೆ. ವಾರದ ಹಿಂದೆ ಕೆಂಪರಾಜು ಎಂಬ ಯುವಕನ ಮೇಲೆ ಕಾಡುಹಂದಿ ದಾಳಿ ನಡೆಸಿತ್ತು. ಘಟನೆಯಲ್ಲಿ ಯುವಕನಿಗೆ ಗಂಭೀರ ಗಾಯಗಳಾಗಿದ್ದವು.

ಮೈಸೂರಲ್ಲಿ ಚಿರತೆ ಭೀತಿ ಮಧ್ಯೆ ಹುಲಿ ದಾಳಿ: ಓರ್ವ ರೈತನಿಗೆ ಗಾಯ

4. ಮೈಸೂರಿನಲ್ಲಿ ಬೋನಿಗೆ ಬಿದ್ದ ಮತ್ತೊಂದು ಚಿರತೆ, ನಿಟ್ಟುಸಿರುವ ಬಿಟ್ಟ ಜನ

ಮೈಸೂರು: ತಾಲೂಕಿನ ಜನರ ನಿದ್ದೆಗೆಡಿಸಿದ್ದ ಮತ್ತೊಂದು ಚಿರತೆ ಕೊನೆಗೂ ಬೋನಿಗೆ ಬಿದ್ದಿದೆ. ಕಳೆದ ಹಲವು ದಿನಗಳಿಂದ ಮಾರಶೆಟ್ಟಹಳ್ಳಿ ಗ್ರಾಮದಲ್ಲಿ ಚಿರತೆ ಕಾಣಿಸಿಕೊಂಡು ಜನರಲ್ಲಿ ಭೀತಿ ಉಂಟು ಮಾಡಿತ್ತು. ಅದರಂತೆ RFO ಸುರೇಂದ್ರ, DRFO ವಿಜಯ್ ಕುಮಾರ್ ನೇತೃತ್ವದಲ್ಲಿ ಕಾರ್ಯಾಚರಣೆ ಆರಂಭಿಸಿ ಗ್ರಾಮದಲ್ಲಿ ಒಂದು ಬೋನ್ ಅನ್ನು ಇರಿಸಲಾಗಿತ್ತು. ಸದ್ಯ ಈ ಬೋನಿಗೆ ಚಿರತೆ ಬಿದ್ದಿದ್ದು ಸ್ಥಳಕ್ಕೆ ಬಂದ ಅರಣ್ಯ ಇಲಾಖೆ ಸಿಬ್ಬಂದಿ ಸೆರೆ ಹಿಡಿದ ಚಿರತೆಯನ್ನು ಸುರಕ್ಷಿತ ಪ್ರದೇಶಕ್ಕೆ ರವಾನಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.


bengaluru

LEAVE A REPLY

Please enter your comment!
Please enter your name here