Home Uncategorized ಮೈಸೂರು ದಸರಾ: ಮುಖ್ಯಮಂತ್ರಿಗಳಿಗೆ ಅಧಿಕೃತ ಆಹ್ವಾನ ನೀಡಿದ ಸಚಿವ ಎಚ್.ಸಿ.ಮಹದೇವಪ್ಪ ನೇತೃತ್ವದ ಜಿಲ್ಲಾಡಳಿತದ ನಿಯೋಗ

ಮೈಸೂರು ದಸರಾ: ಮುಖ್ಯಮಂತ್ರಿಗಳಿಗೆ ಅಧಿಕೃತ ಆಹ್ವಾನ ನೀಡಿದ ಸಚಿವ ಎಚ್.ಸಿ.ಮಹದೇವಪ್ಪ ನೇತೃತ್ವದ ಜಿಲ್ಲಾಡಳಿತದ ನಿಯೋಗ

46
0

ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ಆಗಮಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಸಮಾಜ ಕಲ್ಯಾಣ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ.ಮಹದೇವಪ್ಪ ಅವರು ಬುಧವಾರ ಅಧಿಕೃತವಾಗಿ ಆಹ್ವಾನಿಸಿದರು. ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ಆಗಮಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಸಮಾಜ ಕಲ್ಯಾಣ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ.ಮಹದೇವಪ್ಪ ಅವರು ಬುಧವಾರ ಅಧಿಕೃತವಾಗಿ ಆಹ್ವಾನಿಸಿದರು.

ಮುಖ್ಯಮಂತ್ರಿಗಳ ನಿವಾಸದಲ್ಲಿ ಭೇಟಿ ಮಾಡಿ, ಶಾಲು ಹೊದಿಸಿ, ವಿಶೇಷ ಪುಷ್ಪಮಾಲಿಕೆಯೊಂದಿಗೆ ಸನ್ಮಾನಿಸಿ, ಫಲತಾಂಬೂಲದ ಜೊತೆಗೆ ಆಹ್ವಾನ ಪತ್ರಿಕೆ ನೀಡುವ ಮೂಲಕ ದಸರಾ ಮಹೋತ್ಸವಕ್ಕೆ ಆಗಮಿಸುವಂತೆ ಆತ್ಮೀಯವಾಗಿ ಕೋರಿದರು.

ಮೈಸೂರು ಉಸ್ತುವಾರಿ ಸಚಿವರಾದ ಹೆಚ್.ಸಿ.ಮಹದೇವಪ್ಪನವರ ನೇತೃತ್ವದ ಜಿಲ್ಲಾಡಳಿತದ ನಿಯೋಗದವರು ಇಂದು ಮುಖ್ಯಮಂತ್ರಿ @siddaramaiah ಅವರನ್ನು ಭೇಟಿಯಾಗಿ, ಮೈಸೂರು ದಸರಾ ಆಹ್ವಾನಪತ್ರಿಕೆ ನೀಡಿ ಸ್ವಾಗತಿಸಿದರು. ಮೈಸೂರು ಮೇಯರ್ ಶಿವಕುಮಾರ್, ಜಿಲ್ಲಾಧಿಕಾರಿ ನಾಗೇಂದ್ರ, ಪೊಲೀಸ್ ಆಯುಕ್ತ ರಮೇಶ್ ಬಾನೂತ್, ಜಿಲ್ಲಾ ಪಂಚಾಯ್ತಿ… pic.twitter.com/BHPlcvsRW1
— CM of Karnataka (@CMofKarnataka) October 11, 2023

ಈ ಸಂದರ್ಭದಲ್ಲಿ ಮೇಯರ್ ಶಿವಕುಮಾರ್, ಶಾಸಕರಾದ ರವಿಶಂಕರ್, ಎ.ಆರ್.ಕೃಷ್ಣಮೂರ್ತಿ, ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ, ಜಿಲ್ಲಾ ಪಂಚಾಯತ್ ಸಿಇಒ ಕೆ.ಎಂ.ಗಾಯಿತ್ರಿ, ನಗರ ಪೊಲೀಸ್ ಆಯುಕ್ತ ರಮೇಶ್ ಬಾನೋತ್, ಅಪರ ಜಿಲ್ಲಾಧಿಕಾರಿ ಪಿ.ಶಿವರಾಜು ಸೇರಿದಂತೆ ಮುಂತಾದವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here