Home Uncategorized ಮೈಸೂರು: ಬೆಳಗಾವಿ ಮೂಲದ ಗ್ರಾಮ ಪಂಚಾಯಿತಿಯ ಮಹಿಳಾ ಲೆಕ್ಕಾಧಿಕಾರಿ ಶವವಾಗಿ ಪತ್ತೆ!

ಮೈಸೂರು: ಬೆಳಗಾವಿ ಮೂಲದ ಗ್ರಾಮ ಪಂಚಾಯಿತಿಯ ಮಹಿಳಾ ಲೆಕ್ಕಾಧಿಕಾರಿ ಶವವಾಗಿ ಪತ್ತೆ!

26
0
Advertisement
bengaluru

ಮೈಸೂರು ಜಿಲ್ಲೆಯ ಹುಣಸೂರು ತಾಲೂಕಿನ ಬಿಳಿಕೆರೆ ಗ್ರಾಮದಲ್ಲಿ ಗ್ರಾಮ ಪಂಚಾಯಿತಿ ಮಹಿಳಾ ಲೆಕ್ಕಾಧಿಕಾರಿಯೊಬ್ಬರು ಭಾನುವಾರ ತಮ್ಮ ನಿವಾಸದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಮೈಸೂರು: ಮೈಸೂರು ಜಿಲ್ಲೆಯ ಹುಣಸೂರು ತಾಲೂಕಿನ ಬಿಳಿಕೆರೆ ಗ್ರಾಮದಲ್ಲಿ ಗ್ರಾಮ ಪಂಚಾಯಿತಿ ಮಹಿಳಾ ಲೆಕ್ಕಾಧಿಕಾರಿಯೊಬ್ಬರು ಭಾನುವಾರ ತಮ್ಮ ನಿವಾಸದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ.

ಮೃತರನ್ನು 25 ವರ್ಷದ ಕೃಷ್ಣಾ ಬಾಯಿ ತುಕಾರಾಂ ಪಡ್ಕೆ ಎಂದು ಗುರುತಿಸಲಾಗಿದ್ದು, ಶಾನುಭೋಗನಹಳ್ಳಿ ವಲಯದಲ್ಲಿ ಕೆಲಸ ಮಾಡುತ್ತಿದ್ದರು. ಕೃಷ್ಣಾ ಬಾಯಿ ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಎಸ್ಗಳ್ಳಿ ಗ್ರಾಮದವರು.

ಮೃತ ಕೃಷ್ಣಾ ಬಾಯಿ ಅವರು ಬೆಳಗಾವಿಯ ಸುಭಾಷ್ ಭೋಸ್ಲೆ ಅವರನ್ನು ಒಂದು ತಿಂಗಳ ಹಿಂದೆ ವಿವಾಹವಾಗಿದ್ದರು ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ. ಅವರು ಚಾಮರಾಜನಗರ ಜಿಲ್ಲೆಯ ಹನೂರಿನಲ್ಲಿ ಅರಣ್ಯ ಸಿಬ್ಬಂದಿಯಾಗಿ ಕೆಲಸ ಮಾಡುತ್ತಿದ್ದರು.

ಕೃಷ್ಣಾ ಬಾಯಿ ನಾಲ್ಕು ದಿನಗಳ ಹಿಂದೆ ಕರ್ತವ್ಯಕ್ಕೆ ಹಾಜರಾಗಿದ್ದು, ಅವರು ತಮ್ಮ ಸಹೋದ್ಯೋಗಿ ಚೈತ್ರಾ ಮತ್ತು ಅವರ ತಾಯಿಯೊಂದಿಗೆ ಬಾಡಿಗೆ ಮನೆಯಲ್ಲಿ ವಾಸವಾಗಿದ್ದರು. ಭಾನುವಾರ ಬೆಳಗ್ಗೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ.

bengaluru bengaluru

ಈ ಸಂಬಂಧ ಬಿಳಿಕೆರೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಸದ್ಯ ಪೊಲೀಸರು ಹೇಳಿಕೆಗಳನ್ನು ದಾಖಲಿಸಿಕೊತ್ತಿದ್ದಾರೆ. ಘಟನೆಯಲ್ಲಿ ಹೆಚ್ಚಿನ ವಿವರಗಳು ಇನ್ನಷ್ಟೇ ಹೊರಬರಬೇಕಿದೆ. ಮುಂದಿನ ತನಿಖೆ ನಡೆಯುತ್ತಿದೆ.


bengaluru

LEAVE A REPLY

Please enter your comment!
Please enter your name here