Home ಕರ್ನಾಟಕ ಮೈಸೂರು: ಮಾಜಿ ಶಾಸಕ ವಾಸು ನಿಧನ

ಮೈಸೂರು: ಮಾಜಿ ಶಾಸಕ ವಾಸು ನಿಧನ

33
0

ಮೈಸೂರು, ಮಾ.9: ಮಾಜಿ ಶಾಸಕ, ಹಿರಿಯ ಕಾಂಗ್ರೆಸ್ ನಾಯಕ ವಾಸು(72) ಶನಿವಾರ ಬೆಳಗಿನ ಜಾವ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.

ಹಲವು ದಿನಗಳಿಂದ ಅನಾರೋಗ್ಯಕ್ಕೀಡಾಗಿದ್ದ ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.

ಮೈಸೂರು ನಗರದ ಚಾಮರಾಜ ಕ್ಷೇತ್ರದಲ್ಲಿ 2014ರಲ್ಲಿ ಶಾಸಕರಾಗಿದ್ದ ವಾಸು 2019ರ  ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ನಿಂದ ಸ್ಪರ್ಧಿಸಿ ಪರಾಭವಗೊಂಡಿದ್ದರು. ಕಳೆದ 2023ರ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಟಿಕೆಟ್ ಕೈತಪ್ಪಿತ್ತು.‌ ಈ ವಿಚಾರವಾಗಿ ಮುಖ್ಯಮಂತ್ರಿ ಸಿದ್ಧರಾಮಯ್ಯರ ವಿರುದ್ದ ಬಹಿರಂಗವಾಗಿಯೇ ಅಸಮಾಧಾನ ಹೊರಹಾಕುವ ಮೂಲಕ ಸುದ್ದಿಯಾಗಿದ್ದರು. ಈ ಬಾರಿ ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾಗಿದ್ದರು.

ಮಾಜಿ ಮುಖ್ಯಮಂತ್ರಿ ಎಂ.ವೀರಪ್ಪ ಮೊಯ್ಲಿಯವರಿಗೆ ಆಪ್ತರಾಗಿದ್ದ ವಾಸುರವರು ಮೊಯ್ಲಿ ಅವಧಿಯಲ್ಲಿ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿಯಾಗಿಯೂ ಸೇವೆ ಸಲ್ಲಿಸಿದ್ದರು.

ವಾಸು ಅವರು ಮೈಸೂರು ಜಿಲ್ಲಾ ಕೈಗಾರಿಕ ಸಂಘದ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದು, ಸಹಕಾರ ಕ್ಷೇತ್ರದಲ್ಲೂ ತೊಡಗಿಸಿಕೊಂಡಿದ್ದರು. ‘ವಿದ್ಯಾ ವಿಕಾಸ್’ ಎಂಬ ಶಿಕ್ಷಣ ಸಂಸ್ಥೆಯನ್ನು ಕಟ್ಟಿ ಬೆಳೆಸಿದ್ದಾರೆ. ಸಮಾಜಮುಖಿ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದ್ದರು. ‘ಪ್ರಜಾನುಡಿ’ ಎಂಬ ಪ್ರಾದೇಶಿಕ ದಿನಪತ್ರಿಕೆಯನ್ನು ಮುನ್ನಡೆಸುತ್ತಿದ್ದಾರೆ.

LEAVE A REPLY

Please enter your comment!
Please enter your name here