Home Uncategorized ಮೈಸೂರು: ಯುವ ಬ್ರಿಗೇಡ್ ಸಂಚಾಲಕ ವೇಣುಗೋಪಾಲ್ ಹತ್ಯೆ; ಆರು ಮಂದಿ ಬಂಧನ

ಮೈಸೂರು: ಯುವ ಬ್ರಿಗೇಡ್ ಸಂಚಾಲಕ ವೇಣುಗೋಪಾಲ್ ಹತ್ಯೆ; ಆರು ಮಂದಿ ಬಂಧನ

12
0

ಜಿಲ್ಲೆಯ ಟಿ. ನರಸೀಪುರದಲ್ಲಿ ಕಳೆದ ಭಾನುವಾರ ನಡೆದಿದ್ದ ಯುವ ಬ್ರಿಗೇಡ್ ಸಂಘಟನೆ ಸಂಚಾಲಕ ವೇಣುಗೋಪಾಲ ನಾಯಕ (31) ಹತ್ಯೆ ಪ್ರಕರಣದ ಆರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಮೈಸೂರು: ಜಿಲ್ಲೆಯ ಟಿ. ನರಸೀಪುರದಲ್ಲಿ ಕಳೆದ ಭಾನುವಾರ ನಡೆದಿದ್ದ ಯುವ ಬ್ರಿಗೇಡ್ ಸಂಘಟನೆ ಸಂಚಾಲಕ ವೇಣುಗೋಪಾಲ ನಾಯಕ (31) ಹತ್ಯೆ ಪ್ರಕರಣದ ಆರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ಯುವ ಬ್ರಿಗೇಡ್ ಕಾರ್ಯಕರ್ತ ವೇಣುಗೋಪಾಲ ನಾಯಕ್‌ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಮಣಿಕಂಠ, ಸಂದೇಶ, ಅನಿಲ್, ಶಂಕರ್, ಮಂಜು ಹಾಗೂ ಹ್ಯಾರಿಸ್ ಬಂಧಿತ ಆರೋಪಿಗಳು. ಎಲ್ಲರೂ ಸ್ಥಳೀಯರೇ ಆಗಿದ್ದಾರೆ. ವೈಯಕ್ತಿಕ ದ್ವೇಷದ ಹಿನ್ನೆಲೆಯಲ್ಲಿ ಈ ಕೊಲೆ ನಡೆದಿದೆ ಎಂದು ಪೊಲೀಸರು‌ ಮಾಹಿತಿ ನೀಡಿದರು. ಉಳಿದವರ ಪತ್ತೆಗೂ ತಂಡ ರಚನೆ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಇದನ್ನೂ ಓದಿ: ಮೈಸೂರು: ಹನುಮ ಜಯಂತಿ ವೇಳೆ ಗುಂಪು ಘರ್ಷಣೆ; ಯುವ ಬ್ರಿಗೇಡ್​ ಕಾರ್ಯಕರ್ತನ ಬರ್ಬರ ಹತ್ಯೆ

ಮೈಸೂರು ಜಿಲ್ಲೆಯ ಟಿ. ನರಸೀಪುರದಲ್ಲಿ ಹನುಮ ಜಯಂತಿ  ವೇಳೆ ಎರಡು ಗುಂಪುಗಳ ನಡುವೆ ನಡೆದ ಜಗಳ ಯುವ ಬ್ರಿಗೇಡ್​  ಕಾರ್ಯಕರ್ತನ ಕೊಲೆಯಲ್ಲಿ ಅಂತ್ಯವಾಗಿದೆ. ಶನಿವಾರ ಪಟ್ಟಣದಲ್ಲಿ ಹನುಮ ಜಯಂತಿ ಮೆರವಣಿಗೆ ನಡೆದಿತ್ತು. ಈ ವೇಳೆ ಎರಡು ಗುಂಪುಗಳ ನಡುವೆ ಜಗಳ ನಡೆದಿತ್ತು. ಮೆರವಣಿಗೆ ವೇಳೆ ಸಂಧಾನ ಮಾಡಿ ಕಳುಹಿಸಲಾಗಿತ್ತು. ಆದರೆ ಭಾನುವಾರ ಮತ್ತೆ ಜಗಳ ನಡೆದಿತ್ತು, ಆ ವೇಳೆ ವೇಣುಗೋಪಾಲ್ ನಾಯಕ್ ಹತ್ಯೆ ಮಾಡಲಾಗಿತ್ತು.

LEAVE A REPLY

Please enter your comment!
Please enter your name here