Home ಕರ್ನಾಟಕ ಮೈಸೂರು | ಹೆಂಡತಿಯೊಂದಿಗೆ ವಿಡಿಯೋ ಕಾಲ್ ನಲ್ಲಿ ಮಾತನಾಡುವ ವೇಳೆ ರೈಲು ಢಿಕ್ಕಿ: ಬಿಹಾರ ಮೂಲದ...

ಮೈಸೂರು | ಹೆಂಡತಿಯೊಂದಿಗೆ ವಿಡಿಯೋ ಕಾಲ್ ನಲ್ಲಿ ಮಾತನಾಡುವ ವೇಳೆ ರೈಲು ಢಿಕ್ಕಿ: ಬಿಹಾರ ಮೂಲದ ವ್ಯಕ್ತಿ ಮೃತ್ಯು

16
0

ಮೈಸೂರು: ರೈಲ್ವೇ ನಿಲ್ದಾಣದ ಬಳಿ ವ್ಯಕ್ತಿಯೊಬ್ಬ ಮೊಬೈಲ್ ನಲ್ಲಿ ಹೆಂಡತಿಗೆ ವಿಡಿಯೋ ಕಾಲ್ ನಲ್ಲಿ ಮಾತನಾಡುತ್ತಿದ್ದಾಗ ರೈಲು ಢಿಕ್ಕಿಯಾಗಿ  ಸಾವನ್ನಪ್ಪಿರುವ ಘಟನೆ ವರದಿಯಾಗಿದೆ.

ಮೈಸೂರು ಜಿಲ್ಲೆ ನಂಜನಗೂಡು ತಾಲ್ಲೂಕಿನ ದೊಡ್ಡ ಕವಲಂದೆ ಗ್ರಾಮದ ಬಳಿ ಈ ಘಟನೆ ನಡೆದಿದೆ. ಬಿಹಾರ ಮೂಲದ ಮನು ಕುಮಾರ್ (26) ಮೃತಪಟ್ಟ ವ್ಯಕ್ತಿ. ಹೆಂಡತಿಗೆ ವಿಡಿಯೋ ಕಾಲ್ ಮಾಡುತ್ತಿದ್ದಾಗ ಈ ದುರಂತ ಸಂಭವಿಸಿದೆ. ಮನು ಕುಮಾರ್ ದೊಡ್ಡ ಕವಲಂದೆಯಲ್ಲಿ ಕಾರ್ಪೆಂಟರ್ ಆಗಿ ಕೆಲಸ ಮಾಡುತ್ತಿದ್ದ ಎಂದು ಹೇಳಲಾಗಿದೆ.

ಬೆಳಿಗ್ಗೆ ಹೆಂಡತಿ ಜೊತೆಗೆ ಮನುಕುಮಾರ್ ವಿಡಿಯೋ ಕಾಲ್ ನಲ್ಲಿ ಮಾತನಾಡುತ್ತಿದ್ದ ಸಂದರ್ಭದಲ್ಲಿ ಚಾಮರಾಜನಗರದಿಂದ ಮೈಸೂರಿಗೆ ತೆರಳುತ್ತಿದ್ದ ರೈಲು ಢಿಕ್ಕಿಯಾಗಿ ಸಾವನ್ನಪ್ಪಿದ್ದಾರೆ. ಈ ಕುರಿತು ನಂಜನಗೂಡು ರೈಲ್ವೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ತಿಳಿದು ಬಂದಿದೆ.

LEAVE A REPLY

Please enter your comment!
Please enter your name here