Home ಕರ್ನಾಟಕ ಮೊದಲ ಹಂತದ ಲೋಕಸಭಾ ಚುನಾವಣೆಗೆ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಆರಂಭ

ಮೊದಲ ಹಂತದ ಲೋಕಸಭಾ ಚುನಾವಣೆಗೆ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಆರಂಭ

48
0

ಹೊಸದಿಲ್ಲಿ: ದೇಶಾದ್ಯಂತ 21 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ 102 ಕ್ಷೇತ್ರಗಳಲ್ಲಿ ಮೊದಲ ಹಂತದ ಲೋಕಸಭಾ ಚುನಾವಣೆ ಎಪ್ರಿಲ್‌ 19ರಂದು ನಡೆಯಲಿರುವುದರಿಂದ ಅಲ್ಲಿ ನಾಮಪತ್ರ ಸಲ್ಲಿಕೆ ಪ್ರಕ್ರಿಯೆಯು ಆರಂಭಗೊಂಡಿದೆ. ಈ ನಿಟ್ಟಿನಲ್ಲಿ ರಾಷ್ಟ್ರಪತಿಗಳ ಪರವಾಗಿ ಚುನಾವಣಾ ಆಯೋಗ ಅಧಿಸೂಚನೆ ಹೊರಡಿಸಿದೆ.

ಹೆಚ್ಚಿನ ಕ್ಷೇತ್ರಗಳಲ್ಲಿ ನಾಮಪತ್ರ ಸಲ್ಲಿಕೆಗೆ ಮಾರ್ಚ್‌ 27 ಕೊನೆಯ ದಿನಾಂಕವಾಗಿದೆ. ಆದರೆ ಬಿಹಾರದಲ್ಲಿ ಹಬ್ಬವೊಂದರ ಕಾರಣ ಅಂತಿಮ ದಿನಾಂಕವನ್ನು ಮಾರ್ಚ್‌ 28ಕ್ಕೆ ವಿಸ್ತರಿಸಲಾಗಿದೆ. ನಾಮಪತ್ರಗಳ ಪರಿಶೀಲನೆ ಮಾರ್ಚ್‌ 28ರಂದು ನಡೆಯಲಿದೆ. ಆದರೆ ಬಿಹಾರದಲ್ಲಿ ಈ ಪ್ರಕ್ರಿಯೆ ಮಾರ್ಚ್‌ 30ರಂದು ನಡೆಯಲಿದೆ.

LEAVE A REPLY

Please enter your comment!
Please enter your name here