Home Uncategorized ಮೌಖಿಕ ಪರೀಕ್ಷೆಯಲ್ಲಿ ಫೇಲ್: ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿನಿ ಆತ್ಯಹತ್ಯೆಗೆ ಶರಣು

ಮೌಖಿಕ ಪರೀಕ್ಷೆಯಲ್ಲಿ ಫೇಲ್: ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿನಿ ಆತ್ಯಹತ್ಯೆಗೆ ಶರಣು

41
0

ಮೌಖಿಕ ಪರೀಕ್ಷೆಯಲ್ಲಿ ಅನುತ್ತೀರ್ಣ ಹಿನ್ನೆಲೆಯಲ್ಲಿ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿನಿಯೊಬ್ಬಳು ಆತ್ಮಹತ್ಯೆಗೆ ಶರಣಾಗಿರುವ ಘಟನೆಯೊಂದು ಬೆಳಗಾವಿಯ ಟಿಳಕವಾಡಿಯ ರೈಲ್ವೆ ಗೇಟ್ ಬಳಿ ಗುರುವಾರ ಸಂಜೆ ನಡೆದಿದೆ. ಬೆಳಗಾವಿ: ಮೌಖಿಕ ಪರೀಕ್ಷೆಯಲ್ಲಿ ಅನುತ್ತೀರ್ಣ ಹಿನ್ನೆಲೆಯಲ್ಲಿ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿನಿಯೊಬ್ಬಳು ಆತ್ಮಹತ್ಯೆಗೆ ಶರಣಾಗಿರುವ ಘಟನೆಯೊಂದು ಬೆಳಗಾವಿಯ ಟಿಳಕವಾಡಿಯ ರೈಲ್ವೆ ಗೇಟ್ ಬಳಿ ಗುರುವಾರ ಸಂಜೆ ನಡೆದಿದೆ.

ಮೃತ ಬಾಲಕಿಯನ್ನು ಬೆಳಗಾವಿಯ ಸಂತ ರೋಹಿದಾಸ್ ನಗರದ ನಿವಾಸಿ ಪ್ರೀತಿ ಅರುಣ್ ಕಾಂಬಳೆ (16) ಎಂದು ಗುರುತಿಸಲಾಗಿದೆ

ಮೌಖಿಕ ಪರೀಕ್ಷೆಯ್ಲಿ ಅನುತ್ತೀರ್ಣಳಾದ ಹಿನ್ನೆಲೆಯಲ್ಲಿ ನೊಂದ ಬಾಲಕಿ ಚಲಿಸುವ ರೈಲಿಗೆ ಸಿಲುಕಿ ಆತ್ಮಹತ್ಯೆಗೆ ಶರಣಾಗಿದ್ದಾಳೆಂದು ತಿಳಿದುಬಂದಿದೆ.

ಕಿರಿಯ ಸಹೋದರ ಮತ್ತು ತಾಯಿಯೊಂದಿಗೆ ಬಾಲಕಿ ಸಂತ ರೋಹಿದಾಸ್ ನಗರದಲ್ಲಿ ವಾಸವಿದ್ದಳು. ಶಾಲೆಯಿಂದ ವಾಪಸ್ ಆಗುವ ವೇಳೆ ವಿದ್ಯಾರ್ಥಿ ಚಲಿಸುತ್ತಿದ್ದ ರೈಲನ್ನು ನೋಡಿ, ಹಳಿಗೆ ಹಾರಿದ್ದಾಳೆ. ಇದನ್ನು ಗಮನಿಸಿದ ರೈಲು ನಿರ್ವಾಹಕರು ಕೂಡಲೇ ರೈಲು ನಿಲ್ಲಿಸಲು ಯತ್ನಿಸಿದ್ದಾರೆ. ಆದರೆ, ಸಾಧ್ಯವಾಗಿಲ್ಲ.

ಸುದ್ದಿ ತಿಳಿಯುತ್ತಿದ್ದಂತೆಯೇ ಸ್ಥಳಕ್ಕಾಗಮಿಸಿದ ರೈಲ್ವೇ ಪೊಲೀಸರು ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ. ಈ ಸಂಬಂಧ ರೈಲ್ವೇ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

LEAVE A REPLY

Please enter your comment!
Please enter your name here