Home Uncategorized ಮೌಲ್ಯಮಾಪನ ಕೇಂದ್ರ ಸ್ಥಾಪನೆ ಪ್ರಕ್ರಿಯೆ ಆರಂಭಿಸಿದ ಶಿಕ್ಷಣ ಇಲಾಖೆ

ಮೌಲ್ಯಮಾಪನ ಕೇಂದ್ರ ಸ್ಥಾಪನೆ ಪ್ರಕ್ರಿಯೆ ಆರಂಭಿಸಿದ ಶಿಕ್ಷಣ ಇಲಾಖೆ

17
0

ರಾಜ್ಯ ಪಠ್ಯಕ್ರಮದ ಎಲ್ಲ ಶಾಲೆಗಳಲ್ಲಿ ಪ್ರಸಕ್ತ ಶೈಕ್ಷಣಿಕ ಸಾಲಿನ (2022-23) 5 ಮತ್ತು 8ನೇ ತರಗತಿಗೆ ಮೌಲ್ಯಮಾಪನ ಪರೀಕ್ಷೆ (ಮೌಲ್ಯಾಂಕನ) ನಡೆಸಲು ನಿರ್ಧರಿಸಿರುವ ಶಿಕ್ಷಣ ಇಲಾಖೆಯು, ಈ ನಿಟ್ಟಿನಲ್ಲಿ ಮೌಲ್ಯಮಾಪನ ಕೇಂದ್ರಗಳ ಸ್ಥಾಪಸಿರುವ ಪ್ರಕ್ರಿಯೆಯನ್ನು ಪ್ರಾರಂಭಿಸಿದೆ. ಬೆಂಗಳೂರು: ರಾಜ್ಯ ಪಠ್ಯಕ್ರಮದ ಎಲ್ಲ ಶಾಲೆಗಳಲ್ಲಿ ಪ್ರಸಕ್ತ ಶೈಕ್ಷಣಿಕ ಸಾಲಿನ (2022-23) 5 ಮತ್ತು 8ನೇ ತರಗತಿಗೆ ಮೌಲ್ಯಮಾಪನ ಪರೀಕ್ಷೆ (ಮೌಲ್ಯಾಂಕನ) ನಡೆಸಲು ನಿರ್ಧರಿಸಿರುವ ಶಿಕ್ಷಣ ಇಲಾಖೆಯು, ಈ ನಿಟ್ಟಿನಲ್ಲಿ ಮೌಲ್ಯಮಾಪನ ಕೇಂದ್ರಗಳ ಸ್ಥಾಪಸಿರುವ ಪ್ರಕ್ರಿಯೆಯನ್ನು ಪ್ರಾರಂಭಿಸಿದೆ

ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ (ಕೆಎಸ್‌ಇಎಬಿ) ಮೌಲ್ಯಮಾಪನ ಕೇಂದ್ರಗಳ ಸ್ಥಾಪಿಸುವ ಪ್ರಕ್ರಿಯೆಯನ್ನು ಪ್ರಾರಂಭಿಸಿದೆ.

ಈ ಸಂಬಂಧ ಕೆಎಸ್‌ಇಎಬಿ ಸುತ್ತೋಲೆಯೊಂದನ್ನು ಹೊರಡಿಸಿದ್ದು, ಸುತ್ತೋಲೆಯ ಪ್ರಕಾರ, ರಾಜ್ಯ ಪಠ್ಯಕ್ರಮವನ್ನು ಅನುಸರಿಸುವ ಸರ್ಕಾರಿ, ಅನುದಾನಿತ ಮತ್ತು ಅನುದಾನರಹಿತ ಶಾಲೆಗಳು ಪರೀಕ್ಷೆಗಳನ್ನು ಬರೆಯುವ ಕೇಂದ್ರಗಳಾಗಿ ಕಾರ್ಯನಿರ್ವಹಿಸಲಿವೆ ಎಂದು ತಿಳಿಸಿದೆ.

5 ನೇ ತರಗತಿ ವಿದ್ಯಾರ್ಥಿಗಳ ಪರೀಕ್ಷೆಗೆ ಶಾಲೆಗಳ ವಿದ್ಯಾರ್ಥಿಗಳ ಸಂಖ್ಯೆಯನ್ನು ಆಧರಿಸಿ ಮೌಲ್ಯಮಾಪನ ಕೇಂದ್ರಗಳನ್ನು ಸ್ಥಾಪನೆ ಮಾಡಲಾಗುತ್ತಿದೆ. ಒಂದು ಕೇಂದ್ರದಲ್ಲಿ ಕನಿಷ್ಠ 25 ವಿದ್ಯಾರ್ಥಿಗಳು ಲಭ್ಯವಿರಬೇಕು. ನಿರ್ದಿಷ್ಟ ಶಾಲೆಯಲ್ಲಿ ವಿದ್ಯಾರ್ಥಿಗಳ ಸಂಖ್ಯೆ ಕಡಿಮೆಯಿದ್ದರೆ, 2 ಕಿಮೀ ವ್ಯಾಪ್ತಿಯಲ್ಲಿರುವ ಹತ್ತಿರದ ಪ್ರಾಥಮಿಕ ಶಾಲೆಗಳ ವಿದ್ಯಾರ್ಥಿಗಳನ್ನು ಸೇರಿಸಿಕೊಳ್ಳಬಹುದು, ಶಾಲೆಯು ಅಗತ್ಯವಾದ ಮೂಲ ಸೌಕರ್ಯಗಳನ್ನು ಹೊಂದಿರಬೇಕು. 8ನೇ ತರಗತಿಯ ಪರೀಕ್ಷೆಗಳ ಕೇಂದ್ರಗಳಿಗೂ ಇದೇ ನಿಯಮ ಅನ್ವಯವಾಗುತ್ತದೆ. ಆದರೆ, ವಿದ್ಯಾರ್ಥಿಗಳ ಸಂಖ್ಯೆ ಕನಿಷ್ಠ 50 ಆಗಿರಬೇಕು ಎಂದು ತಿಳಿಸಿದೆ.

ಮೌಲ್ಯಮಾಪನ ಕೇಂದ್ರಗಳ ಸ್ಥಾಪಿಸಲು ಸರ್ಕಾರ ಮುಂದಾಗಿರುವ ಹಿನ್ನೆಲೆಯಲ್ಲಿ ಇದೀಗ ಶಾಲೆಗಳು ಆನ್’ಲೈನ್ ಮೂಲಕ ತಮ್ಮ ಶಾಲೆಗಲನ್ನು ಮೌಲ್ಯಮಾಪನ ಕೇಂದ್ರಗಳಾಗಿ ನೋಂದಾಯಿಸಿಕೊಳ್ಳುತ್ತಿವೆ.

ವಿದ್ಯಾರ್ಥಿಗಳ ಕಲಿಕಾ ಮಟ್ಟವನ್ನು ನಿರ್ಣಯಿಸಲು 5 ಮತ್ತು 8ನೇ ತರಗತಿ ಮೌಲ್ಯಮಾಪನ ನಡೆಸುತ್ತಿರುವುದು ರಾಜ್ಯದಲ್ಲಿ ಇದೇ ಮೊದಲಾಗಿದೆ.

LEAVE A REPLY

Please enter your comment!
Please enter your name here