ದಾವಣಗೆರೆ:
ನಾಯಕತ್ವ ಬದಲಾವಣೆ ಕುರಿತು ಪದೆ ಪದೇ ಹೇಳಿಕೆ ನೀಡಿ ಪಕ್ಷಕ್ಕೆ ಕಿರಿಕಿರಿ, ಮುಜುಗರ ಉಂಟು ಮಾಡುತ್ತಿರುವ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುಧ್ದ ಪಕ್ಷ ಶೀಘ್ರವೇ ಶಿಸ್ತು ಕ್ರಮ ಕೈಗೊಳ್ಳಲಿದೆ ಎಂಬ ವಿಶ‍್ವಾಸವನ್ನು ಸಚಿವ ಕೆಎಸ್ ಈಶ್ವರಪ್ಪ ವ್ಯಕ್ತಪಡಿಸಿದ್ದಾರೆ.
ದಾವಣಗೆರೆ ಜಿಲ್ಲೆಯ ಹೊನ್ನಾಳಿ ತಾಲ್ಲೂಕಿನ ಹಿರೇಕಲ್ಮಠದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಈಗಾಗಲೇ ಶಿಸ್ತು ಕ್ರಮ ಕೈಗೊಳ್ಳುವಂತೆ ರಾಜ್ಯಾಧ್ಯಕ್ಷರಿಗೆ ಮನವಿ ಮಾಡಿದ್ದು ಅವರು ಖಂಡಿತವಾಗಿ ಕ್ರಮ ಕೈಗೊಳ್ಳುತ್ತಾರೆ ಎಂದರು.