Home ಅಪರಾಧ ಯೋಗಿಶ್‌ಗೌಡ ಹತ್ಯೆ ಪ್ರಕರಣ; ವಿನಯ ಕುಲಕರ್ಣಿಗೆ ನ್ಯಾಯಾಂಗ ಬಂಧನ

ಯೋಗಿಶ್‌ಗೌಡ ಹತ್ಯೆ ಪ್ರಕರಣ; ವಿನಯ ಕುಲಕರ್ಣಿಗೆ ನ್ಯಾಯಾಂಗ ಬಂಧನ

63
0

ಬೆಂಗಳೂರು:

ಜಿಲ್ಲಾ ಪಂಚಾಯಿತಿ ಸದಸ್ಯ ಯೋಗೀಶ್‌ಗೌಡ ಕೊಲೆ ಪ್ರಕರಣದಲ್ಲಿ ಮಾಜಿ ಸಚಿವ ವಿನಯ ಕುಲಕರ್ಣಿ ಅವರನ್ನು ಒಂದು ದಿನದ ಮಟ್ಟಿಗೆ ನ್ಯಾಯಾಂಗ ಬಂಧನಕ್ಕೆ ವಿಧಿಸಿ ನ್ಯಾಯಾಲಯ ಆದೇಶ ಹೊರಡಿಸಿದೆ.

ಗುರುವಾರ ಬೆಳಗ್ಗೆ ವಿನಯ ಕುಲಕರ್ಣಿ ಮನೆ ಮೇಲೆ ದಾಳಿ ನಡೆಸಿದ್ದ ಸಿಬಿಐ ಅಧಿಕಾರಿಗಳು ಅವರನ್ನು ಬಂಧಿಸಿದ್ದರು.

ಸಂಜೆ 4.30ರ ಸುಮಾರಿಗೆ ವಿನಯ ಕುಲಕರ್ಣಿ ಬಂಧಿಸಿದ ಅಧಿಕಾರಿಗಳು, ಜಿಲ್ಲಾ ಆಸ್ಪತ್ರೆಯಲ್ಲಿ ವೈದ್ಯಕೀಯ ತಪಾಸಣೆ ನಡೆಸಿ ಸಿಬಿಐ ವಿಶೇಷ ನ್ಯಾಯಾಲಯದ ಮುಂದೆ ಹಾಜರುಪಡಿಸಿದರು. ಮೂರು ದಿನಗಳ ಕಾಲ ವಶಕ್ಕೆ ನೀಡುವಂತೆ ಸಿಬಿಐ ಪರ ವಕೀಲರು ಕೋರಿದರು. ಆದರೆ ವಿನಯ ನ್ಯಾಯಾಲಯ ಒಂದು ದಿನದ ಮಟ್ಟಿಗೆ ನ್ಯಾಯಾಂಗ ಬಂಧನಕ್ಕೆ ನೀಡಿ ಆದೇಶ ಹೊರಡಿಸಿತು. ಶುಕ್ರವಾರ ವಿಡಿಯೊ ಕಾನ್ಫರೆನ್ಸ್ ಮೂಲಕ ವಿಚಾರಣೆ ನಡೆಯಲಿದೆ.

ಈಗ ಅವರನ್ನು ಬೆಳಗಾವಿಯ ಹಿಂಡಲಗಾ ಜೈಲಿಗೆ ವರ್ಗಾಯಿಸಲಾಗಿದೆ.

ಕೊಲೆ ನಡೆದ ಸಂದರ್ಭದಲ್ಲಿ ಉಪನಗರ ಠಾಣಾಧಿಕಾರಿಯಾಗಿದ್ದ ಚನ್ನಕೇಶವ ಟಿಂಗರೀಕರ್ ಹಾಗೂ ವಿನಯ ಕುಲಕರ್ಣಿ ಸಂಬಂಧಿ ವಿಜಯಪುರದ ಚಂದು ಇಂಡಿ ಅವರಿಗೂ ವಿಚಾರಣೆಗೆ ಹಾಜರಾಗುವಂತೆ ಸಿಬಿಐ ಸಮನ್ಸ್ ನೀಡಿದೆ.

2016ರ ಜೂನ್ 15ರಂದು ನಗರದ ಸಪ್ತಾಪುರದ ಉದಯ ಜಿಮ್‌ನಲ್ಲಿ ದುಷ್ಕರ್ಮಿಗಳು ಯೋಗೀಶಗೌಡ ಅವರನ್ನು ಮಚ್ಚು ಲಾಂಗ್‌ನಿಂದ ಕೊಚ್ಚಿ ಭೀಕರವಾಗಿ ಹತ್ಯೆಗೈದಿದ್ದರು. ಈ ಪ್ರಕರಣದಲ್ಲಿ ವಿನಯ ಕುಲಕರ್ಣಿ ಕೈವಾಡ ಇದೆ ಎಂದು ಯೋಗೀಶಗೌಡ ಕುಟುಂಬ ಆರೋಪಿಸಿತ್ತು. ಕಳೆದ ವರ್ಷ ಪ್ರಕರಣದ ತನಿಖೆಯನ್ನು ರಾಜ್ಯ ಸರ್ಕಾರ ಸಿಬಿಐಗೆ ವಹಿಸಿತ್ತು.

ಯೋಗಿಶ್ ಗೌಡ ಕೊಲೆ ಪ್ರಕರಣ , ಮಾಜಿ ಸಚಿವ ವಿನಯ್ ಕುಲಕರ್ಣಿ ಸಿಬಿಐ ವಶಕ್ಕೆ https://kannada.thebengalurulive.com/?p=660

LEAVE A REPLY

Please enter your comment!
Please enter your name here