Home Uncategorized ಯೋಗೀಶಗೌಡ ಹತ್ಯೆ ಪ್ರಕರಣ: ಮತ್ತೆ ಫೀಲ್ಡಿಗಿಳಿದ CBI – ಮನೆಯಿಂದ ಪರಾರಿಯಾದ ಇನ್’ಸ್ಪೆಕ್ಟರ್

ಯೋಗೀಶಗೌಡ ಹತ್ಯೆ ಪ್ರಕರಣ: ಮತ್ತೆ ಫೀಲ್ಡಿಗಿಳಿದ CBI – ಮನೆಯಿಂದ ಪರಾರಿಯಾದ ಇನ್’ಸ್ಪೆಕ್ಟರ್

49
0

ಧಾರವಾಡ: ಧಾರವಾಡ ಜಿಲ್ಲಾ ಪಂಚಾಯ್ತಿ ಸದಸ್ಯರಾಗಿದ್ದ ಯೋಗೀಶಗೌಡ ಗೌಡರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ಅಧಿಕಾರಿಗಳು ಮತ್ತೆ ಫೀಲ್ಡಿಗಿಳಿದು ತನಿಖೆ ಆರಂಭಿಸಿದ್ದಾರೆ. ಯೋಗೀಶಗೌಡ ಹತ್ಯೆಯಾದ ಸಂದರ್ಭದಲ್ಲಿ ಈ ಪ್ರಕರಣದ ತನಿಖಾಧಿಕಾರಿಯಾಗಿದ್ದ ಚೆನ್ನಕೇಶವ ಟಿಂಗರಿಕರ ಅವರಿಗೆ ಸಿಬಿಐ ಅಧಿಕಾರಿಗಳು ಬಲೆ ಬೀಸಿದ್ದಾರೆ.

ಧಾರವಾಡದ ಮಲಪ್ರಭಾ ನಗರದಲ್ಲಿರುವ ಇನ್‌ಸ್ಪೆಕ್ಟರ್ ಚೆನ್ನಕೇಶವ ಟಿಂಗರಿಕರ ಅವರ ನಿವಾಸಕ್ಕೆ ಸಿಬಿಐ ಅಧಿಕಾರಿಗಳು ಬೆಳ್ಳಂಬೆಳಿಗ್ಗೆ ತೆರಳಿ ಅವರಿಗೆ ಶಾಕ್ ನೀಡಿದ್ದಾರೆ. ಆದರೆ, ಸಿಬಿಐ ಅಧಿಕಾರಿಗಳು ಬರುವ ಮುನ್ಸೂಚನೆ ಗೊತ್ತಾಗುತ್ತಿದ್ದಂತೆ ಇನ್‌ಸ್ಪೆಕ್ಟರ್ ಟಿಂಗರಿಕರ ಮನೆಯಿಂದ ಕಾಲ್ಕಿತ್ತಿದ್ದಾರೆ.

CM ಸಿದ್ದುವಿನ ಎರಡನೇ ಮುಖ ದಲಿತರನ್ನು ಅವನತಿಗೆ ದೂಡುವುದು – ಬಿ ಶ್ರೀರಾಮುಲು

ಟಿಂಗರಿಕರ್ ಸದ್ಯ ಬೆಳಗಾವಿ ಪೊಲೀಸ್ ಆಯುಕ್ತರ ಕಚೇರಿಯಲ್ಲಿ ಕೆಲಸ ಮಾಡುತ್ತಿದ್ದಾರೆ. ಯೋಗೀಶಗೌಡ ಹತ್ಯೆಯಾದಾಗ ಟಿಂಗರಿಕರ ಅವರು ಧಾರವಾಡ ಉಪನಗರ ಠಾಣೆ ಇನ್‌ಸ್ಪೆಕ್ಟರ್ ಆಗಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ತಮ್ಮನ್ನು ಬಂಧಿಸಬಾರದು ಎಂದು ಅವರು ನ್ಯಾಯಾಲಯದಿಂದ ನಿರೀಕ್ಷಣಾ ಜಾಮೀನು ಪಡೆದಿದ್ದರು. ಈ ಜಾಮೀನು ಅವಧಿ ಮುಗಿದ ಮೇಲೆ ತಮ್ಮ ಮೇಲಿರುವ ಎಫ್‌ಐಆರ್ ರದ್ದುಗೊಳಿಸುವಂತೆ ಹೈಕೋರ್ಟ್‌ಗೆ ಟಿಂಗರಿಕರ ಅರ್ಜಿ ಸಲ್ಲಿಸಿದ್ದರು.

ಆದರೆ, ಕಳೆದ ವಾರ ಹೈಕೋರ್ಟ್ ಇವರ ಅರ್ಜಿಯನ್ನು ವಜಾಗೊಳಿಸಿದೆ. ಅರ್ಜಿ ವಜಾಗೊಂಡ ಹಿನ್ನೆಲೆಯಲ್ಲಿ ಸಿಬಿಐ ಅಧಿಕಾರಿಗಳು ಟಿಂಗರಿಕರ್ ಅವರ ಬಂಧನಕ್ಕೆ ಮುಂದಾಗಿದ್ದಾರೆ. ಇಂದು ಬೆಳ್ಳಂಬೆಳಿಗ್ಗೆ ಅಧಿಕಾರಿಗಳು ಅವರ ನಿವಾಸಕ್ಕೆ ಬರುವ ಮುನ್ಸೂಚನೆ ಸಿಗುತ್ತಿದ್ದಂತೆ ಟಿಂಗರಿಕರ್ ಮನೆಯಿಂದ ಕಾಲ್ಕಿತ್ತಿದ್ದಾರೆ.

The post ಯೋಗೀಶಗೌಡ ಹತ್ಯೆ ಪ್ರಕರಣ: ಮತ್ತೆ ಫೀಲ್ಡಿಗಿಳಿದ CBI – ಮನೆಯಿಂದ ಪರಾರಿಯಾದ ಇನ್’ಸ್ಪೆಕ್ಟರ್ appeared first on Ain Live News.

LEAVE A REPLY

Please enter your comment!
Please enter your name here