ರಾಜ್ಯದಲ್ಲಿ ಕಳೆದ ಆರು ತಿಂಗಳಲ್ಲಿ ಸಂಭವಿಸಿದ ರಸ್ತೆ ಅಪಘಾತಗಳಲ್ಲಿ 5,830 ಜನರು ಸಾವನ್ನಪ್ಪಿದ್ದಾರೆ. ಸಂಚಾರ ಹಾಗೂ ರಸ್ತೆ ಸುರಕ್ಷತೆ ಎಡಿಜಿಪಿ ಅಲೋಕ್ ಕುಮಾರ್ ಅವರು ಎಕ್ಸ್ ನಲ್ಲಿ ಈ ಬಗ್ಗೆ ಮಾಹಿತಿ ಹಂಚಿಕೊಂಡಿದ್ದಾರೆ. ಬೆಂಗಳೂರು: ರಾಜ್ಯದಲ್ಲಿ ಕಳೆದ ಆರು ತಿಂಗಳಲ್ಲಿ ಸಂಭವಿಸಿದ ರಸ್ತೆ ಅಪಘಾತಗಳಲ್ಲಿ 5,830 ಜನರು ಸಾವನ್ನಪ್ಪಿದ್ದಾರೆ. ಸಂಚಾರ ಹಾಗೂ ರಸ್ತೆ ಸುರಕ್ಷತೆ ಎಡಿಜಿಪಿ ಅಲೋಕ್ ಕುಮಾರ್ ಅವರು ಎಕ್ಸ್ ನಲ್ಲಿ ಈ ಬಗ್ಗೆ ಮಾಹಿತಿ ಹಂಚಿಕೊಂಡಿದ್ದಾರೆ.
ಕಳೆದ ಮೇ ನಲ್ಲಿ 1,094 ಜನ, ಜೂನ್ ನಲ್ಲಿ 965, ಜುಲೈನಲ್ಲಿ 807, ಆಗಸ್ಟ್ ನಲ್ಲಿ 795 ಜನರು ರಸ್ತೆ ಅಪಘಾತಗಳಲ್ಲಿ ಪ್ರಾಣ ಕಳೆದುಕೊಂಡಿದ್ದಾರೆ ಎಂದು ಅವರು ತಿಳಿಸಿದ್ದಾರೆ.
ಬೆಂಗಳೂರು ನಗರ, ಗ್ರಾಮಾಂತರ ಹಾಗೂ ತುಮಕೂರು ಜಿಲ್ಲೆಗಳಲ್ಲಿ ಹೆಚ್ಚಿನ ರಸ್ತೆ ಅಪಘಾತಗಳು ನಡೆಯುತ್ತಿವೆ. ಜನರ ಪ್ರಾಣ ಉಳಿಸಲು ರಸ್ತೆ ಸುರಕ್ಷತಾ ಉಪಕ್ರಮಗಳನ್ನು ನಿರಂತರ ಹಾಗೂ ವ್ಯಾಪಕವಾಗಿ ತೆಗೆದುಕೊಳ್ಳುವುದು ಅಗತ್ಯವಾಗಿದೆ ಎಂದು ಅವರು ಸಾರ್ವಜನಿಕರಿಗೆ ಸಲಹೆ ನೀಡಿದ್ದಾರೆ.
Trying hard
Deaths due to road accidents in state-
May – 1094
June- 965
July- 807
Aug-795
Bangalore City, Bangalore Rural & Tumkur major contributors
1 st half of 2023- 5830 deaths
“ Road accidents reduction strategy must get due focus to save innumerable precious lives”
— alok kumar (@alokkumar6994) September 4, 2023
ಜೊತೆಗೆ ಬೆಂಗಳೂರು- ಮೈಸೂರು ಎಕ್ಸ್ ಪ್ರೆಸ್ ವೇನಲ್ಲಿ ಅತಿವೇಗದಲ್ಲಿ ಚಾಲನೆ ಮಾಡುತ್ತಿದ್ದ ಕಾರು ಚಾಲಕನ ಡಿಎಲ್ ಅಮಾನತು ಮಾಡುವಂತೆ ಶಿಫಾರಸು ಮಾಡಲಾಗಿದೆ. ಅಲ್ಲದೇ, ಅದೇ ದಾರಿಯಲ್ಲಿ ನಿಯಮ ಉಲ್ಲಂಘಿಸಿ ಎದುರಿನಿಂದ ಬಂದ ವಾಹನದ ಚಾಲಕನ ವಿರುದ್ಧ ಎಫ್ ಐಆರ್ ದಾಖಲಿಸಲು ಹಾಗೂ ಡಿಎಲ್ ಅಮಾನತುಗೊಳಿಸುವಂತೆ ಸೂಚಿಸಲಾಗಿದೆ ಎಂದು ಅವರು ಟ್ವೀಟ್ ನಲ್ಲಿ ತಿಳಿಸಿದ್ದಾರೆ.
The vehicle in question is being booked u/s 184 IMV Act for dangerous driving and we are recommending suspension of DL too. Notice has been issued
Henceforth, FIR will be registered against persons driving in opposite direction on NH & action will be taken for DL suspension too https://t.co/jS4U9X4kzS
— alok kumar (@alokkumar6994) September 5, 2023