ಬೆಳಿಗ್ಗೆ 9 ಗಂಟೆಗೆ ಆರ್.ಆರ್.ನಗರ: 7.1% ಮತದಾನ
ಬೆಂಗಳೂರು:
ರಾಜ್ಯಾದ್ಯಂತ ತೀವ್ರ ಕುತೂಹಲ ಕೆರಳಿಸಿರುವ ಬೆಂಗಳೂರಿನ ರಾಜರಾಜೇಶ್ವರಿ ನಗರ ಮತ್ತು ಮತ್ತು ತುಮಕೂರು ಜಿಲ್ಲೆಯ ಶಿರಾ ಕ್ಷೇತ್ರಗಳ ವಿಧಾನಸಭಾ ಉಪ ಚುನಾವಣೆಯ ಮತದಾನ ಬಿಗಿಭದ್ರತೆಯೊಂದಿಗೆ ಆರಂಭವಾಗಿದೆ ಕೊರೋನ ಸಂದರ್ಭದಲ್ಲಿ ಮತದಾನ ನಡೆಯುತ್ತಿದ್ದು, ಅಗತ್ಯ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳಲಾಗಿದೆ.
ಬೆಳಗ್ಗೆ 7 ರಿಂದಲೇ ಮತದಾನ ಆರಂಭವಾಗಿದೆ ಸಂಜೆ 6 ಗಂಟೆಗೆ ಮುಕ್ತಾಯವಾಗಲಿದೆ. ಕೊರೋನ ಸೋಂಕಿತರಿಗಾಗಿಯೇ ಸಂಜೆ 5 ರಿಂದ 6 ಗಂಟೆ ವರೆಗೆ ಮತದಾನಕ್ಕೆ ಅವಕಾಶ ನೀಡಲಾಗಿದೆ. ಇದೇ 10ರಂದು ಮತ ಎಣಿಕೆ ನಡೆದು ಅಂದೇ ಫಲಿತಾಂಶ ಹೊರ ಬೀಳಲಿದೆ.
2018ರ ಚುನಾವಣೆಯಲ್ಲಿ ಆರ್. ಆರ್. ನಗರದಲ್ಲಿ ಕಾಂಗ್ರೆಸ್, ಶಿರಾದಲ್ಲಿ ಜೆಡಿಎಸ್ ಅಭ್ಯರ್ಥಿ ಗೆಲಯವು ಸಾಧಿಸಿದ್ದರು. ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಸ್ತಿತ್ವದಲ್ಲಿದ್ದು ಉಪ ಚುನಾವಣೆಯನ್ನು ಪಕ್ಷ ಪ್ರತಿಷ್ಠೆಯಾಗಿ ಪರಿಗಣಿಸಿದೆ. ಆರ್. ಆರ್. ನಗರದಲ್ಲಿ 16 ಮತ್ತು ಶಿರಾದಲ್ಲಿ 15 ಅಭ್ಯರ್ಥಿಗಳು ಕಣದಲ್ಲಿದ್ದಾರೆ.