ಜೈಪುರ: ರಾಜಸ್ಥಾನ ಸಿಎಂ ಆಯ್ಕೆ ಗೊಂದಲಗಳಿಗೆ ತೆರೆ ಬಿದ್ದಿದ್ದು, ಬಿಜೆಪಿ ತನ್ನ ಸರ್ಕಾರದ ನೂತನ ಸಾರಥಿಯನ್ನು ಘೋಷಿಸಿದೆ.
ಭಜನ್ ಲಾಲ್ ಶರ್ಮಾ ಅವರನ್ನು ರಾಜಸ್ಥಾನದ ನೂತನ ಮುಖ್ಯಮಂತ್ರಿಯಾಗಿ ಬಿಜೆಪಿ ಆಯ್ಕೆ ಮಾಡಿದೆ.
ಮುಖ್ಯಮಂತ್ರಿ ರೇಸ್‌ನಲ್ಲಿ ಮಾಜಿ ಸಿಎಂ ವಸುಂಧರಾ ರಾಜೆ ಸೇರಿದಂತೆ ಹಲವು ಘಟಾನುಘಟಿ ನಾಯಕರಿದ್ದರೂ ಬಿಜೆಪಿ ಭಜನ್ ಲಾಲ್ ಶರ್ಮಾ ಅವರಿಗೆ ಮಣೆ ಹಾಕಿದೆ.
#WATCH | BJP names Bhajanlal Sharma as the new Chief Minister of Rajasthan pic.twitter.com/j3awHnmH7k
— ANI (@ANI) December 12, 2023