Home Uncategorized ರಾಜ್ಯದಲ್ಲಿರುವುದು ಕಾಂಗ್ರೆಸ್ ಸರ್ಕಾರ ಅಲ್ಲ, ಸಿದ್ದರಾಮಯ್ಯ-ಡಿಕೆಶಿ ಸಮ್ಮಿಶ್ರ ಸರ್ಕಾರ: ಆರ್ ಅಶೋಕ್

ರಾಜ್ಯದಲ್ಲಿರುವುದು ಕಾಂಗ್ರೆಸ್ ಸರ್ಕಾರ ಅಲ್ಲ, ಸಿದ್ದರಾಮಯ್ಯ-ಡಿಕೆಶಿ ಸಮ್ಮಿಶ್ರ ಸರ್ಕಾರ: ಆರ್ ಅಶೋಕ್

33
0

ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷದ ಸರ್ಕಾರ ಇಲ್ಲ. ಇದು ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ಅವರ ಸಮ್ಮಿಶ್ರ ಸರ್ಕಾರ. ಈ ಸಮ್ಮಿಶ್ರ ಸರ್ಕಾರ ಹೆಚ್ಚು ದಿನ ಇರಲ್ಲ ಎಂದು ಮಾಜಿ ಸಚಿವ ಆರ್ ಅಶೋಕ್ ಅವರು ಬುಧವಾರ ಹೇಳಿದ್ದಾರೆ. ಬೆಂಗಳೂರು: ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷದ ಸರ್ಕಾರ ಇಲ್ಲ. ಇದು ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ಅವರ ಸಮ್ಮಿಶ್ರ ಸರ್ಕಾರ. ಈ ಸಮ್ಮಿಶ್ರ ಸರ್ಕಾರ ಹೆಚ್ಚು ದಿನ ಇರಲ್ಲ ಎಂದು ಮಾಜಿ ಸಚಿವ ಆರ್ ಅಶೋಕ್ ಅವರು ಬುಧವಾರ ಹೇಳಿದ್ದಾರೆ.

ಇಂದು ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಆರ್ ಅಶೋಕ್, ನಾನು ಸಹ ಉಪ ಮುಖ್ಯಮಂತ್ರಿಯಾಗಿ ಕೆಲಸ ಮಾಡಿದ್ದೇನೆ. ಅದು ಸಾಂವಿಧಾನಿಕ ಹುದ್ದೆ ಅಲ್ಲ. ಆದರೆ ಡಿ.ಕೆ.ಶಿವಕುಮಾರ್ ಅವರು ಮಾತ್ರ ಮುಖ್ಯಮಂತ್ರಿಗಳು ಮಾತನಾಡಿದ ನಂತರ ತಾವೂ ಮಾತನಾಡಬೇಕು ಎಂಬ ಚಾಳಿ ಆರಂಭಿಸಿದ್ದಾರೆ ಎಂದು ವ್ಯಂಗ್ಯವಾಡಿದರು.

ಇದನ್ನು ಓದಿ: ಕಾಂಗ್ರೆಸ್ ಸರ್ಕಾರ ಪೊಲೀಸರ ನೈತಿಕ ಸ್ಥೈರ್ಯ ಕುಗ್ಗಿಸಲು ಯತ್ನಿಸುತ್ತಿದೆ: ಬೊಮ್ಮಾಯಿ

ಡಿಕೆ ಶಿವಕುಮಾರ್ ಮೊದಲ ಸಭೆಯಲ್ಲಿಯೇ ಪೊಲೀಸ್ ಅಧಿಕಾರಿಗಳಿಗೆ ಬೆದರಿಕೆ ಹಾಕಿದ್ದಾರೆ. ಕಾಂಗ್ರೆಸ್ ಅಂದ್ರ ಗೂಂಡಾಗಿರಿ, ಗೂಂಡಾಗಿರಿ ಅಂದ್ರೆ ಕಾಂಗ್ರೆಸ್ ಅನ್ನುವಂತಾಗಿದೆ. ಆದರೆ ಬಿಜೆಪಿ, ಕಾಂಗ್ರೆಸ್, ಜೆಡಿಎಸ್ ಯಾವುದೇ ಸರ್ಕಾರ ಬಂದರೂ ಅದೇ ಅಧಿಕಾರಿಗಳು ಇರುತ್ತಾರೆ ಎಂದರು.

ಪೊಲೀಸ್ ಅಧಿಕಾರಿಗಳ ಸಭೆ ಕರೆದು, ನೀವು ಬಿಜೆಪಿಗೆ ಬೆಂಬಲ ನೀಡಿದ್ದೀರಾ, ಕೇಸರಿ ಶಾಲು ಹಾಕಿದ್ದೀರಾ ಅಂತ ಬೆದರಿಕೆ ಹಾಕುವುದು ಒಳ್ಳೆಯ ನಡವಳಿಕೆಯಲ್ಲ. ಹೊಸ ಸರ್ಕಾರ ಬಂದಿದೆ, 5 ಗ್ಯಾರಂಟಿಗಳನ್ನು ಘೋಷಣೆ ಮಾಡಿದ್ದೀರಿ, ಜೂನ್ 1 ರಿಂದಲೇ ಕೊಡ್ತೀನಿ ಎಂದು ಹೇಳಿದ್ದೀರಿ, ಅದರ ಕಡೆ ಮೊದಲು ಗಮನ ಕೊಡಿ” ಎಂದು ತಿರುಗೇಟು ನೀಡಿದರು.

LEAVE A REPLY

Please enter your comment!
Please enter your name here